ವಿಕೇಂದ್ರೀಕೃತ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಿ
ಬೆಳಗಾವಿಯಲ್ಲಿ ಸಭೆ : ಅಧಿಕಾರಿಗಳಿಗೆ ಸಚಿವ ಜಗದೀಶ್ ಶೆಟ್ಟರ್ ಸೂಚನೆ
ಬೆಳಗಾವಿ: ಜನರು ಒಂದೇ ಕಡೆ ಸೇರದಂತೆ ಮಾರುಕಟ್ಟೆ ವ್ಯವಸ್ಥೆಯನ್ನು ವಿಕೇಂದ್ರೀಕರಣಗೊಳಿಸುವ ಮೂಲಕ ಎಲ್ಲೆಡೆ ಅಗತ್ಯ ವಸ್ತುಗಳು ಲಭಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್ ತಿಳಿಸಿದರು.
ಕೋವಿಡ್-19 ನಿಯಂತ್ರಣ ಕುರಿತು ನಗರದ ಪ್ರವಾಸಿಮಂದಿರದಲ್ಲಿ ನಡೆದ ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ತರಕಾರಿ ಮತ್ತು ದಿನಸಿ ಸಾಮಗ್ರಿಗಳನ್ನು ಜನರಿಗೆ ಸರಿಯಾಗಿ ತಲುಪಿಸಿದರೆ ಜನಸಂದಣಿ ನಿಯಂತ್ರಣ ಸೇರಿದಂತೆ ಅನೇಕ ಸಮಸ್ಯೆಗಳನ್ನು ನಿವಾರಿಸಬಹುದು. ಈ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಲು ಸಲಹೆ ನೀಡಿದರು.
ಲಾಕ್ ಡೌನ್ ಗೆ ಸಂಬಂಧಿಸಿದಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಆದೇಶ ಮತ್ತು ಮಾರ್ಗಸೂಚಿಗಳನ್ನು ಎಲ್ಲ ಜನಪ್ರತಿನಿಧಿಗಳಿಗೆ ಕಳುಹಿಸಿ, ಅವರ ಮೂಲಕ ಆಯಾ ಕ್ಷೇತ್ರದಲ್ಲಿ ಹೆಚ್ಚು ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.
ಗಂಟಲು ಮಾದರಿ ತಪಾಸಣಾ ಪ್ರಯೋಗಾಲಯ ಸ್ಥಾಪನೆಗೆ ಸಂಬಂಧಿಸಿದಂತೆ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಜತೆ ಮಾತನಾಡಲಾಗಿದ್ದು, ಆದಷ್ಟು ಬೇಗನೇ ಆರಂಭಿಸುವುದಾಗಿ ತಿಳಿಸಿದ್ದಾರೆ.
21 ದಿನಗಳ ಲಾಕ್ ಡೌನ್ ಅನ್ನು ನಾವೆಲ್ಲರೂ ಕಡ್ಡಾಯವಾಗಿ ಪಾಲಿಸಿದಾಗ ಮಾತ್ರ ಕರೊನಾ ತಡೆಗಟ್ಟುವುದು ಸಾಧ್ಯ. ಆದ್ದರಿಂದ ಪ್ರತಿಯೊಬ್ಬರೂ ಸರ್ಕಾರದ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕಿದೆ ಎಂದು ಕರೆ ನೀಡಿದರು.
ಜಲಸಂಪನ್ಮೂಲ ಇಲಾಖೆಯ ಸಚಿವ ರಮೇಶ್ ಜಾರಕಿಹೊಳಿ ಮಾತನಾಡಿ, ಜಿಲ್ಲೆಯಲ್ಲಿ ತುರ್ತಾಗಿ ಪ್ರಯೋಗಾಲಯ ಆರಂಭಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಕ್ರಮವಹಿಸಲಾಗುವುದು ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಶಶಿಕಲಾ ಜೊಲ್ಲೆ ಮಾತನಾಡಿ, ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮುನ್ನೆಚ್ಚರಿಕೆ ಮೇರೆಗೆ ಅಗತ್ಯ ವಸ್ತುಗಳ ಪೂರೈಕೆಗೆ ಕ್ರಮಕೈಗೊಳ್ಳಲಾಗಿದೆ. ಅಂಗನವಾಡಿ ಮಕ್ಕಳಿಗೆ ಮನೆ ಮನೆಗೆ ಆಹಾರ ಸಾಮಗ್ರಿಗಳನ್ನು ಕಳಿಸಲಾಗುತ್ತಿದೆ ಎಂದರು.
ರೈಲ್ವೆ ಇಲಾಖೆಯ ರಾಜ್ಯ ಸಚಿವ ಸುರೇಶ್ ಅಂಗಡಿ ಮಾತನಾಡಿ, ಸರಕು ಸಾಮಗ್ರಿಗಳು ಸಾಗಾಣಿಕೆಗೆ ಯಾವುದೇ ನಿರ್ಬಂಧವಿಲ್ಲ; ಯಾವುದೇ ಕೊರತೆಯಾಗದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದು ತಿಳಿಸಿದರು.
ರಾಜ್ಯಸಭಾ ಸದಸ್ಯ ಡಾ.ಪ್ರಭಾಕರ್ ಕೋರೆ ಮಾತನಾಡಿ, ನೆರೆಯ ರಾಜ್ಯ ಮತ್ತು ಬೆಂಗಳೂರಿನಿಂದ ನೂರಾರು ಸಂಖ್ಯೆಯ ಯುವಕರು ಸ್ವಗ್ರಾಮಕ್ಕೆ ಆಗಮಿಸುತ್ತಿದ್ದಾರೆ. ಹೀಗೆ ಬರುವ ಜನರ ಮೇಲೆ ತೀವ್ರ ನಿಗಾ ವಹಿಸಬೇಕು ಎಂದರು.
ತಾಲೂಕು ಆಸ್ಪತ್ರೆಗೆ ವೆಂಟಿಲೇಟರ್ ಒದಗಿಸಿ
ಶಾಸಕ ಸತೀಶ್ ಜಾರಕಿಹೊಳಿ ಮಾತನಾಡಿ, ಕಾರ್ಖಾನೆಗಳಲ್ಲಿ ನೂರಾರು ಕಾರ್ಮಿಕರು ಒಂದೇ ಕಡೆ ಕೆಲಸ ಮಾಡುತ್ತಿರುವುದರಿಂದ ಪೊಲೀಸರು ಹಾಗೂ ಆಶಾ ಕಾರ್ಯಕರ್ತರು ಆಗಾಗ ಭೇಟಿ ನೀಡಿ ಸೂಕ್ತ ನಿಗಾ ವಹಿಸಬೇಕು ಎಂದು ಸಲಹೆ ನೀಡಿದರು.
ಸರ್ಕಾರದಿಂದ ತುರ್ತು ಅನುದಾನ ಬಂದರೆ ತಾಲ್ಲೂಕು ಆಸ್ಪತ್ರೆಗಳಿಗೆ ವೆಂಟಿಲೇಟರ್ ವ್ಯವಸ್ಥೆ ಮಾಡಬೇಕು ಎಂದು ಹೇಳಿದರು.
ಗೋವಾ ಹಾಗೂ ಮಹಾರಾಷ್ಟ್ರದಿಂದ ಆಗಮಿಸುವ ಜನರನ್ನು ಸಾಧ್ಯವಾದರೆ ಒಂದು ಕಡೆ ಕ್ವಾರಂಟೈನ್ ಮಾಡುವ ವ್ಯವಸ್ಥೆ ಮಾಡಬೇಕು ಎಂದು ಶಾಸಕರಾದ ಲಕ್ಷ್ಮೀ ಹೆಬ್ಬಾಳಕರ್ ಮನವಿ ಮಾಡಿಕೊಂಡರು.
ಹತ್ತು ಜನರ ಮಾದರಿ ಕಳಿಸಲಾಗಿದ್ದು, ಎಲ್ಲ ಮಾದರಿಯ ವರದಿ ನೆಗೆಟಿವ್ ಬಂದಿದೆ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ವಿವರಿಸಿದರು.
ಸರ್ಕಾರದ ನಿರ್ದೇಶನದ ಮೇರೆಗೆ ಅಂತಾರಾಜ್ಯ ಹಾಗೂ ಅಂತರ್ ಜಿಲ್ಲಾ ಗಡಿಗಳಲ್ಲಿ ತೀವ್ರ ನಿಗಾ ವಹಿಸಲಾಗಿದೆ.
ಪ್ರತ್ಯೇಕ ಕೋವಿಡ್ ಆಸ್ಪತ್ರೆ ಸ್ಥಾಪನೆಯ ಸಾಧ್ಯತೆಗಳನ್ನು ಈಗಾಗಲೇ ಪರಿಶೀಲಿಸಲಾಗಿದೆ ಎಂದು ತಿಳಿಸಿದರು.
ಅಗತ್ಯ ವಸ್ತುಗಳ ಕೊರತೆಯಾಗದಂತೆ ಎಲ್ಲ ರೀತಿಯ ಸರಕು ವಾಹನಗಳಿಗೆ ಅವಕಾಶ ಕಲ್ಪಿಸಲಾಗಿದ್ದು, ಅವಶ್ಯಕತೆ ಇರುವವ ಜನರಿಗೆ ಪಾಸ್ ಗಳನ್ನು ಒದಗಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದರು.
1825 ಕ್ವಾರಂಟೈನ್ ವಾರ್ಡ್ ಸಿದ್ಧವಾಗಿಟ್ಟುಕೊಳ್ಳಲಾಗಿದೆ. ಜಿಲ್ಲಾ ಕೇಂದ್ರ ಹಾಗೂ ತಾಲೂಕು ಕೇಂದ್ರಗಳಲ್ಲೂ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ವಿ.ಮುನ್ಯಾಳ ತಿಳಿಸಿದರು.
ತುರ್ತು ಸಂದರ್ಭದಲ್ಲಿ ಅನುಕೂಲವಾಗುವಂತೆ ಮೊರಾರ್ಜಿ ವಸತಿ ಶಾಲೆಗಳಲ್ಲೂ 200 ಬೆಡ್ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಕೋವಿಡ್ ನಿಯಂತ್ರಣ ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಬಗ್ಗೆ ಜಾಗೃತಿ ಮೂಡಿಸಲು ಐಇಸಿ ಚಟುವಟಿಕೆಗಳನ್ನು ವ್ಯಾಪಕವಾಗಿ ಹಮ್ಮಿಕೊಳ್ಳಲಾಗಿದೆ ಎಂದು ವಿವರಿಸಿದರು.
Related
You Might Also Like
KSRTC: ಡಿ.31ರಿಂದ ಕರೆ ಕೊಟ್ಟಿರುವ ಮುಷ್ಕರ ಬೆಂಬಲಿಸದ ನೌಕರರು- ವಿಲವಿಲ ಒದ್ದಾಡುತ್ತಿರುವ ಜಂಟಿ ಸಮಿತಿ ಮುಖಂಡರು
ಮುಷ್ಕರಕ್ಕೆ ಕರೆ ಕೊಟ್ಟು ನಿದ್ದೆಕೂಡ ಮಾಡಲಾಗದ ಪರಿಸ್ಥಿತಿ ತಲುಪಿದ ಹೋರಾಟಗಾರರು ಜಂಟಿ ಪದಾಧಿಕಾರಿಗಳು ಡಿಪೋಗಳಿಗೆ ಹೋದರೂ ಮಾತನಾಡಿಸದ ನೌಕರರು ನೌಕರರ ಬೇಡಿಕೆಗೆ ವಿರುದ್ಧವಾದ ಬೇಡಿಕೆ ಇಟ್ಟು ಮುಷ್ಕರಕ್ಕೆ...
ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಡಿ.27ರಂದು BMTC & KSRTC ನಿವೃತ್ತ ನೌಕರರ ಪ್ರತಿಭಟನೆ
ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿಸೆಂಬರ್ 27, 2024 ರಂದು "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರು ವಿನೂತನ ಪ್ರತಿಭಟನೆ ಮೂಲಕ ಶಕ್ತಿ ಪ್ರದರ್ಶನ ಮಾಡಲಿದ್ದಾರೆ...
ಮೈಸೂರು: ದೆಹಲಿ ರೈತ ಹೋರಾಟ ಬೆಂಬಲಿಸಿ ಮೇಣದ ಬತ್ತಿ ಬೆಳಗಿಸಿ ಪ್ರತಿಭಟನೆ
ಮೈಸೂರು: ರೈತರ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತ್ರಿ ಕಾನೂನು ಜಾರಿಯಾಗಬೇಕೆಂದು ಪಂಜಾಬ್ ಹರಿಯಾಣ ಕನೋರಿ ಬಾರ್ಡರ್ನಲ್ಲಿ 29 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸಂಯುಕ್ತ...
KSRTC: ಯಾರದೋ ಆರ್ಥಿಕ ಲಾಭಕ್ಕಾಗಿ 4 ವರ್ಷಕ್ಕೊಮ್ಮೆ ನಡೆಯೋ ಈ ಚೌಕಾಸಿ ಪದ್ಧತಿ ಬಿಟ್ಟು ಶಾಶ್ವತ ಪರಿಹಾರಕ್ಕೆ ಬದ್ಧರಾಗೋಣ
ಬೆಂಗಳೂರು: ಪ್ರತಿ ನಾಲ್ಕು ವರ್ಷಕ್ಕೊಮ್ಮೆ ಬಂದು ಉದ್ಭವವಾಗುವ ಈ ಮಹಾನುಭಾವ ತಮ್ಮ ಸ್ವಾರ್ಥ ಹಾಗೂ ಆರ್ಥಿಕವಾಗಿ ಸಬಲರಾಗಲು ಸರ್ಕಾರದ ಹಾಗೂ ಸಾರಿಗೆ ನಿಗಮದ ಆಡಳಿತ ಮಂಡಳಿಯ ಮುಂದೆ...
KSRTC: ರಸ್ತೆಗಿಳಿದ 20 ಹೊಸ ಅಂಬಾರಿ ಉತ್ಸವ ಸ್ಲೀಪರ್ ಬಸ್ಗಳು- ಸಚಿವರಿಂದ ಲೋಕಾರ್ಪಣೆ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ 20 ಹೊಸ ಅಂಬಾರಿ ಉತ್ಸವ ಸ್ಲೀಪರ್ ಬಸ್ಗಳಿಗೆ ಮೆಜೆಸ್ಟಿಕ್ನ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಮುಂಭಾಗ ಸಚಿವರಾದ ರಾಮಲಿಂಗರೆಡ್ಡಿ ಮತ್ತು...
KSRTCಗೆ ₹6543 ಕೋಟಿ ಅನುದಾನ ಬಿಡುಗಡೆ ಮಾಡಿರುವ ನಮಗೆ ₹414 ಕೋಟಿ ಬಿಡುಗಡೆ ಮಾಡುವುದು ಕಷ್ಟವೇ: ರಾಮಲಿಂಗಾರೆಡ್ಡಿ
ಬೆಂಗಳೂರು: ಶಕ್ತಿ ಯೋಜನೆ ಕರ್ನಾಟಕ ಸರ್ಕಾರದ ಮಹಿಳಾ ಸಬಲೀಕರಣದೆಡೆಗಿನ ದಿಟ್ಟ ಹೆಜ್ಜೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ತಮ್ಮ ಪ್ರತಿಯೊಂದು ಸುಳ್ಳಿನ ಸರಮಾಲೆಯ ಟ್ಟೀಟ್ಗೂ ನಾವು...
ಗಾಯಾಳು ಅಯ್ಯಪ್ಪ ಮಾಲಾಧಾರಿಗಳ ಆರೋಗ್ಯ ವಿಚಾರಿಸಿದ ಸಚಿವ ಪರಮೇಶ್ವರ್
ಹುಬ್ಬಳ್ಳಿ: ಹುಬ್ಬಳ್ಳಿಯ ಸಾಯಿನಗರದಲ್ಲಿ ಅಡುಗೆ ಅನಿಲ ಸ್ಫೋಟದಿಂದ ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡು ಕರ್ನಾಟಕ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆಸ್ಪತ್ರೆಗೆ ಇಂದು ಗೃಹ...
KSRTC ಅಧಿಕಾರಿಗಳಿಲ್ಲದ ಡಿ.31ರ ಸಾರಿಗೆ ಮುಷ್ಕರ ನೌಕರರ ಹರಕೆ ಕುರಿ ಮಾಡುವ ಹೋರಾಟವೇ..!?
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳಲ್ಲೂ ವೇತನ ಹೆಚ್ಚಳವಾಗಬೇಕು ಅದಾದ ಬಳಿಕ ಅರಿಯರ್ಸ್ ಕೊಡಬೇಕು ಎಂದರೆ ಹೋರಾಟ ಮಾಡುವುದು ನೌಕರರು. ಅದಕ್ಕೆ ಕರೆ ಕೊಡುವುದು...
BBMP- ₹2 ಕೋಟಿ ವೆಚ್ಚದಲ್ಲಿ ರಾಜಕಾಲುವೆ ಅಭಿವೃದ್ಧಿ : ಆಯುಕ್ತ ತುಷಾರ್ ಗಿರಿನಾಥ್
ಬೆಂಗಳೂರು: ಕಳೆದ ಬಾರಿ ಮಳೆಯಿಂದಾದ ಅನಾಹುತಗಳು ಮತ್ತೆ ಮರುಕಳಿಸಬಾರದು ಎಂಬ ದೃಷ್ಟಿಯಿಂದ ಯಲಹಂಕ ವಲಯದ ಟಾಟಾನ ಗರದಲ್ಲಿ 2 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳಲು...
ಡಿ.31 ರಂದು ಇಳಕಲ್‌ನಲ್ಲಿ ಇಪಿಎಸ್ 95 ಪಿಂಚಣಿದಾರರ ಬೃಹತ್ ಸಮಾವೇಶ
ಬಾಗಲಕೋಟೆ: ರಾಷ್ಟ್ರೀಯ ಸಂಘರ್ಷ ಸಮಿತಿಯ NACಯ ರಾಷ್ಟ್ರೀಯ ಅಧ್ಯಕ್ಷ ಕಮಾಂಡರ್ ಅಶೋಕ್ ರಾವುತ್ ಅವರ ನೇತೃತ್ವದಲ್ಲಿ ಒದೇ ಡಿ.31 ರಂದು ಇಳಕಲ್‌ನಲ್ಲಿ ಇಪಿಎಸ್ 95 ಪಿಂಚಣಿದಾರರ ಬೃಹತ್...
ಚನ್ನರಾಯಪಟ್ಟಣ ರೈತ ನಿಯೋಗದಿಂದ ಸಿಎಂ ಭೇಟಿ: ಭೂ ಸ್ವಾಧೀನ ಕೈಬಿಡಲು ಮನವಿ
ಸರ್ಕಾರ ರೈತರ ಪರವಾಗಿದೆ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ ರೈತರ ನಿಯೋಗವು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್....
KSRTC: ಟಿಸಿಗಳಿಂದ ಪ್ರತಿ ತಿಂಗಳು ಸಾವಿರ ರೂ. ಭಿಕ್ಷೆ ಬೇಡುತ್ತಿರುವ ಡಿಸಿ, ಡಿಟಿಒಗಳು..!
ಪಾಪಾ ಸಂಬಳ ಸಾಲುತ್ತಿಲ್ಲವಂತೆ ಅದಕ್ಕೆ ಹೆಚ್ಚಿಗೆ ಸಂಬಳ ಪಡೆಯುತ್ತಿರುವ ಟಿಸಿಗಳ ಕಾಲು ಹಿಡಿದು ಭಿಕ್ಷೆ ಬೇಡುತ್ತಿದ್ದಾರೆ ಪಾಪಿಗಳು ನಾಚಿಕೆ ಬಿಟ್ಟು ಟಿಸಿಗಳ ಸುಲಿಗೆ ಮಾಡುವ ಇಂಥ ನಾಲಾಯಕ್...