ವಿದೇಶದಿಂದ ಬರುವವರ ಬಗ್ಗೆ ಮಾಹಿತಿ ನೀಡಿ: ಜಿಲ್ಲಾಧಿಕಾರಿ ಶರತ್
ಹೋಂ ಕ್ವಾರಾಂಟೀನ್ ಗೆ ಸೂಚಿಸಿದವರು ಮನೆಯಲ್ಲಿಯೇ ಇರಬೇಕು
ಕಲಬುರಗಿ: ಕೊರೋನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ವಿದೇಶದಿಂದ ಕಲಬುರಗಿ ಜಿಲ್ಲೆಗಳಿಗೆ ಬರುವ ವ್ಯಕ್ತಿಗಳು ಸ್ವಯಂ ಆಗಿ ಮಾಹಿತಿಯನ್ನು ನೀಡಬೇಕು ಎಂದು ಜಿಲ್ಲಾಧಿಕಾರಿಗಳಾದ ಶರತ್ ಕೋರಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿರುವ ಸಹಾಯಕ ಪೆÇಲೀಸ್ ಆಯುಕ್ತರ ಕಚೇರಿಯಲ್ಲಿ ಇಂದು ಕರೆದಿದ್ದ ಮುಸ್ಲಿಂ ಧಾರ್ಮಿಕ ಮುಖಂಡರು ಹಾಗೂ ನಾಯಕರ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.
ಯಾರಾದರೂ ನಿಮ್ಮ ನೆರೆಹೊರೆಯವರು ವಿದೇಶದಿಂದ ಬಂದ ಬಗ್ಗೆ ಮಾಹಿತಿ ಇದ್ದರೆ ಕೂಡ ನೀಡಬೇಕು ಎಂದು ಮನವಿ ಮಾಡಿದರು.
ಈ ಬಗ್ಗೆ ಮಾಹಿತಿ ನೀಡಿದರೆ, ಸುಲಭವಾಗಿ ಕೊರೋನಾ ಶಂಕಿತರನ್ನು ಗುರುತಿಸಬಹುದು. ಯಾರನ್ನು ಹೋಂ ಕ್ವಾರಾಂಟೀನ್ ನಲ್ಲಿ ಇರಲು ಸೂಚಿಸಲಾಗಿದೆಯೋ, ಅವರು ಮನೆಯಲ್ಲಿಯೇ ಇರಬೇಕು ಎಂದು ಹೇಳಿದರು.
ಸಾರ್ವಜನಿಕ ಸಭೆ-ಸಮಾರಂಭಗಳಲ್ಲಿ ಭಾಗವಹಿಸುವುದನ್ನು ಕಡಿಮೆ ಮಾಡಬೇಕು. ಯಾರಿಗೂ ಕೈಕುಲುಕಬಾರದು, ಕೈಯಿಂದ ಬಾಯಿ, ಕಣ್ಣು, ಮೂಗುಗಳನ್ನು ಮುಟ್ಟಬಾರದು. ಆಗಾಗ ಕೈ ತೊಳೆಯಬೇಕು ಮುಂತಾದ ಜಾಗ್ರತೆ ವಹಿಸಬೇಕು ಎಂದು ತಿಳಿಸಿದರು.
ಶ್ವಾಸಕೋಶದ ತೊಂದರೆ ಇರುವವರಿಗೆ ಹೆಚ್ಚು ಸಮಸ್ಯೆ ಆಗಲಿದ್ದು, ಎಚ್ಚರ ವಹಿಸಬೇಕು ಎಂದು ಹೇಳಿದರು.
ಕಲಬುರಗಿ ನಗರ ಪೆÇಲೀಸ್ ಆಯುಕ್ತ ಎಂ.ಎನ್. ನಾಗರಾಜ್ ಅವರು ಮಾತನಾಡಿ, ಜನರು ಓಡಾಡದೆ ಮನೆಯಲ್ಲೇ ಇದ್ದರೆ, ಈ ರೋಗ ತಡೆಗಟ್ಟುವಲ್ಲಿ ಯಶಸ್ವಿಯಾಗಬಹುದು. ಇಲ್ಲದಿದ್ದಲ್ಲಿ ರಾಜ್ಯವμÉ್ಟಯಲ್ಲ, ಇಡೀ ದೇಶವನ್ನೇ ಅಪಾಯಕ್ಕೆ ತಂದೊಡ್ಡಲಿದೆ ಎಂದು ಅವರು ಎಚ್ಚರಿಸಿದರು.
ಕೊರೋನಾ ವೈರಸ್ ಭೀತಿಯಿಂದ ಸೌದಿ ಅರೇಬಿಯಾದ ಮುಸ್ಲಿಮರ ಪವಿತ್ರ ಕ್ಷೇತ್ರ ಮೆಕ್ಕಾದ ಐತಿಹಾಸಿಕ ಮಸೀದಿಯನ್ನೇ ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಅದೇ ರೀತಿ ಮಸೀದಿ, ದೇವಸ್ಥಾನ ಮುಂತಾದ ಧಾರ್ಮಿಕ ಸ್ಥಳಗಳಲ್ಲಿ ಹೆಚ್ಚು ಜನ ಸೇರಬಾರದು ಎಂದು ಮನವಿ ಮಾಡಿದರು.
ಕೊರೋನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಮುಂದಿನ ಒಂದು ತಿಂಗಳ ಕಾಲ ಮಹತ್ವದ್ದಾಗಿದೆ. 144 ಸೆಕ್ಷನ್ ಹೇರಿ ರೋಗ ತಡೆಯಲು ಅಸಾಧ್ಯ. ಇದರಲ್ಲಿ ಹಾಗಾಗಿ ಜನರ ಸಹಕಾರ ಅತ್ಯಗತ್ಯ ಎಂದು ಪ್ರತಿಪಾದಿಸಿದರು.
ಡಿಸಿಪಿ ಕಿಶೋರ್ ಬಾಬು, ಎಸಿಪಿಗಳಾದ ಗಿರೀಶ್, ವಿಜಯ್ ಕುಮಾರ್, ಸಂಚಾರ ವಿಭಾಗದ ಎಸಿಪಿ ವಿರೇಶ್ ಕರಡಿಗುಡ್ಡ, ಸಿಪಿಐ ರಮೇಶ್ ಕಾಂಬ್ಳೆ ಮುಂತಾದ ಪೆÇಲೀಸ್ ಅಧಿಕಾರಿಗಳು ಹಾಜರಿದ್ದರು.
Related
You Might Also Like
ರಸ್ತೆ ಅಪಘಾತದಲ್ಲಿ ಗಾಯಗೊಂಡವರಿಗೆ ನಗದು ರಹಿತ ಚಿಕಿತ್ಸೆ: ಕೇಂದ್ರ ರಸ್ತೆ ಸಾರಿಗೆ -ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಘೋಷಣೆ
ನ್ಯೂಡೆಲ್ಲಿ: ರಸ್ತೆ ಅಪಘಾತದಲ್ಲಿ ಗಾಯಗೊಂಡವರಿಗೆ ಇನ್ನು ಮುಂದೆ ನಗದು ರಹಿತ ಚಿಕಿತ್ಸೆ ನೀಡಲಾಗುವುದು ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಘೋಷಿಸಿದ್ದಾರೆ....
APSRTCಯಲ್ಲೂ ಶಕ್ತಿ ಯೋಜನೆ ಶೀಘ್ರ ಜಾರಿ: ಬೆಂಗಳೂರಿಗೆ ಭೇಟಿ ನೀಡಿದ ಸಾರಿಗೆ ಸಚಿವ ಮಂಡಿಪಲ್ಲಿ ರಾಮಪ್ರಸಾದ್ ರೆಡ್ಡಿ ನಿಯೋಗ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳಲ್ಲೂ ‘ಶಕ್ತಿ’ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಕೈಗೊಂಡಿರುವ ಕ್ರಮಗಳ ಕುರಿತು ತಿಳಿದುಕೊಳ್ಳಲು ಆಂಧ್ರಪ್ರದೇಶ ಸರ್ಕಾರದ ಸಚಿವರು ಹಾಗೂ ಅಧಿಕಾರಿಗಳು...
ಸಿಡ್ನಿಯಲ್ಲಿ 2025ರ ನೂತನ ವರ್ಷ ಸ್ವಾಗತಿಸಿದ ಮಿಲಿಯನ್ಗಿಂತಲೂ ಹೆಚ್ಚು ಜನರು
2025ರ ನೂತನ ವರ್ಷವನ್ನು ಅಧಿಕೃತವಾಗಿ ಹಲವು ದೇಶಗಳು ಈಗಾಗಲೇ ಸ್ವಾಗತಿಸಿವೆ. ಅದರ ಒಂದು ನೋಟ ಸಿಡ್ನಿಯು ಹೊಸ ವರ್ಷಕ್ಕೆ ಹಲೋ ಸ್ವಾಗತ ಎಂದು ಹೇಳಿ ಸಿಡ್ನಿ ಹಾರ್ಬರ್...
ಪಂಚಭೂತಗಳಲ್ಲಿ ಲೀನವಾದ ಆರ್ಥಿಕ ತಜ್ಞ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್
ನ್ಯೂಡೆಲ್ಲಿ: ಭಾರತದ ಮಾಜಿ ಪ್ರಧಾನಿಮಂತ್ರಿ ಡಾ.ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ದೆಹಲಿಯ ನಿಗಮ್ಬೋಧ್ ಘಾಟ್ನಲ್ಲಿ ಕುಟುಂಬಸ್ಥರು ಹಾಗೂ ಗಣ್ಯರ ಸಮ್ಮುಖದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು ಮಧ್ಯಾಹ್ನ...
ಕ್ರಿಸ್ಮಸ್ ಸಂಭ್ರಮಾಚರಣೆ ವೇಳೆ ಕ್ರಿಶ್ಚಿಯನ್ ಸಮುದಾಯದ 19 ಮನೆಗಳಿಗೆ ಬೆಂಕಿ ಹಚ್ಚಿದ ಪಾಪಿಗಳು
ಢಾಕಾ: ಮಧ್ಯಂತರ ಸರ್ಕಾರ ಬಾಂಗ್ಲಾದೇಶದಲ್ಲಿ ಬಂದ ಬಳಿಕ ಅಲ್ಪಸಂಖ್ಯಾತರ ಮೇಲಿನ ದಾಳಿ ಹೆಚ್ಚಾಗುತ್ತಲೇ ಇದೆ. ಹಿಂದೂ ದೇಗುಲಗಳ ಮೇಲೆ ದಾಳಿ ಮಾಡಿದ ಬಳಿಕ ಈಗ ಕ್ರಿಸ್ಮಸ್ ಸಂಭ್ರಮಾಚರಣೆ...
ಹಿಮಾಚಲ ಪ್ರದೇಶದಲ್ಲಿ ಭಾರೀ ಹಿಮಪಾತ: 5 ಸಾವಿರ ಪ್ರವಾಸಿಗರ ರಕ್ಷಿಸಿದ ಪೊಲೀಸರು
ಡೆಹ್ರಾಡೂನ್: ಹಿಮಾಚಲ ಪ್ರದೇಶದಲ್ಲಿ ಭಾರೀ ಹಿಮಪಾತದ ನಡುವೆ ಶುಕ್ರವಾರ ಹಿಮಾಚಲ ಪ್ರದೇಶದ ಕುಲುವಿನ ಸ್ಕೀ ರೆಸಾರ್ಟ್ ಸೊಲಾಂಗ್ ನಾಲಾದಲ್ಲಿ ಸಿಲುಕಿದ್ದ ಸುಮಾರು 5,000 ಪ್ರವಾಸಿಗರನ್ನು ಪೊಲೀಸರು ರಕ್ಷಿಸಿದ್ದಾರೆ....
ದೇಶದ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಇನ್ನಿಲ್ಲ
ನ್ಯೂಡೆಲ್ಲಿ: ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರು ಇಂದು ರಾತ್ರಿ ನಿಧನಹೊಂದಿದ್ದಾರೆ. 92 ವರ್ಷದ ಮನಮೋಹನ್ ಸಿಂಗ್ ಅವರನ್ನು ವಯೋಸಹಜ ಅನಾರೋಗ್ಯದಿಂದ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು....
ಮೈಸೂರು: ದೆಹಲಿ ರೈತ ಹೋರಾಟ ಬೆಂಬಲಿಸಿ ಮೇಣದ ಬತ್ತಿ ಬೆಳಗಿಸಿ ಪ್ರತಿಭಟನೆ
ಮೈಸೂರು: ರೈತರ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತ್ರಿ ಕಾನೂನು ಜಾರಿಯಾಗಬೇಕೆಂದು ಪಂಜಾಬ್ ಹರಿಯಾಣ ಕನೋರಿ ಬಾರ್ಡರ್ನಲ್ಲಿ 29 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸಂಯುಕ್ತ...
ಕನಿಷ್ಠ ಪಿಂಚಣಿ ಶೀಘ್ರ ಜಾರಿ: ಕಾರ್ಮಿಕ ಸಚಿವ ಮನ್ಸುಖ್ ಮಾಂಡವಿಯಾ ಭರವಸೆ
ನ್ಯೂಡೆಲ್ಲಿ: ಕೇಂದ್ರ ಕಾರ್ಮಿಕ ಸಚಿವ ಮನ್ಸುಖ್ ಮಾಂಡವಿಯಾ ಅವರು ಇಪಿಎಸ್-95 ರಾಷ್ಟ್ರೀಯ ಹೋರಾಟ ಸಮಿತಿಯ ನಿಯೋಗದೊಂದಿಗೆ ಶನಿವಾರ ಸಭೆ ನಡೆಸಿದ್ದಾರೆ. ಆ ಸಭೆಯಲ್ಲಿ ಸಮಿತಿಯ ರಾಷ್ಟ್ರೀಯ ಅಧ್ಯಕ್ಷ...