NEWSದೇಶ-ವಿದೇಶ

ವಿಶ್ವಮಾರಿ ಕೊರೊನಾಗೆ ಮಹಾರಾಷ್ಟ್ರದಲ್ಲಿ ಎರಡನೇ ಬಲಿ

ದೇಶದಲ್ಲಿ  ಆರಕ್ಕೇರಿದ ಮೃತರ ಸಂಖ್ಯೆ l ಜಾಗೃತರಾಗಲು ಜನತೆಗೆ ಕರೆ

ವಿಜಯಪಥ ಸಮಗ್ರ ಸುದ್ದಿ

ಮುಂಬೈ: ವಿಶ್ವವನ್ನೇ ಒಂದುರೀತಿ ಶೋಕದ ಕಡಲಲ್ಲಿ ತೇಲಿಸುತ್ತಿರುವ ಡೆಡ್ಲಿಕೊರೊನಾಗೆ ಇಂದು ಮತ್ತೊಬ್ಬ ಮೃತಪಟ್ಟಿದ್ದು, ಈ ಮೂಲಕ ದೇಶದಲ್ಲಿ ಒಟ್ಟು ಆರು ಮಂದಿ ಅಸುನೀಗಿದ್ದಾರೆ.

ಮಹಾರಾಷ್ಟ್ರದಲ್ಲಿ ಭಾನುವಾರ 56 ವರ್ಷದ ವ್ಯಕ್ತಿ ಕೊರೊನಾಗೆ ಬಲಿಯಾಗಿದ್ದು, ಇದು ರಾಜ್ಯದಲ್ಲಿ ಎರಡನೆ ಸಾವಾಗಿದೆ. ಇನ್ನು ಇತ್ತೀಚೆಗಷ್ಟೆ ಕಲಬುರಗಿಯಲ್ಲಿ ವೃದ್ಧರೊಬ್ಬರು ಈ ವೈರಸ್‌ಗೆ ತುತ್ತಾಗಿದ್ದರು. ಅಲ್ಲದೆ ದೇಶದ ಇತರೆಡೆಯಲ್ಲಿ ಮೂವರನ್ನು ಬಲಿತೆಗೆದುಕೊಂಡಿರುವ  ಕೊರೊನಾ ತನ್ನ ಅಟ್ಟಹಾಸ ಮೆರೆಯುತ್ತಿದೆ.

ಹೀಗಾಗಿ ಕೊರೋನಾ ವೈರಸ್ ವಿರುದ್ಧ ಹೋರಾಡಲು ಸಾರ್ವಜನಿಕರು ಸಹಕರಿಸಬೇಕು. ಜನತೆಯು ಸಂಕಲ್ಪ ಮತ್ತು ಸಂಯಮ ತೋರಿಸಬೇಕು. ಸಮಾಜಕ್ಕೆ ಧೈರ್ಯ, ವಿಶ್ವಾಸ ತುಂಬುವ ಕೆಲಸವನ್ನು ಪಕ್ಷಾತೀತವಾಗಿ ಎಲ್ಲರು ಮಾಡಬೇಕಿದೆ. ಶಕ್ತಿ, ಬುದ್ಧಿವಂತಿಕೆ ಸೇರಿದಂತೆ ಎಲ್ಲವೂ ಜನರ ಆತ್ಮವಿಶ್ವಾಸ ಹೆಚ್ಚಿಸಬೇಕಿದೆ.

ಕೊರೋನಾ ವೈರಸ್ ಹರಡದಂತೆ ಮುಂಜಾಗರೂಕತೆ ಕ್ರಮಗಳನ್ನು ಎಲ್ಲರೂ ತೆಗೆದುಕೊಳ್ಳಬೇಕು. ಯಾರು ಸಹ ಉದಾಸೀನ ಮಾಡಬಾರದು. ಈ ಸಂದರ್ಭದಲ್ಲಿ ವಹಿಸಬೇಕಿರುವ ಮುನ್ನೆಚ್ಚರಿಕೆ, ಸ್ವಚ್ಛತೆ, ಸಾಮಾಜಿಕ ಅಂತರ ಇನ್ನಿತರ ವಿಧಾನಗಳ ಮೂಲಕ ಆರೋಗ್ಯದ ಕಾಳಜಿ ಹೊಂದಬೇಕು. ಕೊರೋನಾ ತಡೆಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸಹ ಟಾಸ್ಕ್ ಪೋರ್ಸ್ ರಚಿಸಿದ್ದು ಅತ್ಯಂತ ನಿಗಾ ವಹಿಸಿದೆ.

ರಾಜ್ಯಾದ್ಯಂತ ಕೊರೋನಾ ವೈರಸ್ ಹರಡದಂತೆ ಎಲ್ಲಾ ಮುಂಜಾಗ್ರಕತಾ ಕ್ರಮಗಳನ್ನು ಸರ್ಕಾರ ಕೈಗೊಂಡಿದೆ. ಆಸ್ಪತ್ರೆಗೆ ಭೇಟಿ ನೀಡಿ ಸಿದ್ಧತೆಗಳನ್ನು ಎಲ್ಲಾ ಜಿಲ್ಲಾಡಳಿತಗಳಿಂದ ಪರಿಶೀಲಿಸಲಾಗಿದೆ.

ಜಿಲ್ಲಾ ಮಟ್ಟದ ಆಸ್ಪತ್ರೆಯಲ್ಲಿ ವೆಂಟಿಲೇಟರ್‍ಗಳ ಲಭ್ಯವಿದೆ.  ಮಾಸ್ಕ್, ಔಷಧಿಗಳ ದಾಸ್ತಾನು ಇದೆ. ಪ್ರಸ್ತುತ ಆರೋಗ್ಯ ಸಂಬಂಧಿ ಪರಿಕರಗಳು, ಔಷದೋಪಚಾರಗಳಿಗೆ ಹಣದ ಕೊರತೆ ಇಲ್ಲ. ಜಿಲ್ಲಾಡಳಿತಕ್ಕೆ ಅಗತ್ಯವಿರುವ ಎಲ್ಲಾ ಆರೋಗ್ಯ ವ್ಯವಸ್ಥೆಗೆ ಕ್ರಮವಹಿಸಲು ಸ್ವಾತಂತ್ರವಿದೆ ಎಂದು ಸರ್ಕಾರ ತಿಳಿಸಿದೆ.

ಸಾಮಾಜಿಕ ಜಾಲತಾಣಗಳು ಜನರಲ್ಲಿ ವದಂತಿ ಹರಡಿ ಆತಂಕ ಉಂಟು ಮಾಡಬಾರದು. ಜನರಲ್ಲಿ ಆತ್ಮವಿಶ್ವಾಸ ತುಂಬುವ ಕೆಲಸವಾಗಬೇಕು. ಸಾಮಾಜಿಕ ಜವಬ್ದಾರಿಯನ್ನು ಪರಿಪೂರ್ಣವಾಗಿ ನಿರ್ವಹಿಸಬೇಕು. ಜನ ಸಾಮಾನ್ಯರಿಗೆ ಸತ್ಯಾಂಶವಿಲ್ಲದ ಮಾಹಿತಿ ಹರಡುವುದನ್ನು ಮಾಡಬಾರದು. ಕೊರೋನ ವಿರುದ್ಧ ಹೋರಾಟಕ್ಕೆ ಸ್ಪಂದಿಸುವ ನಿಟ್ಟಿನಲ್ಲಿ ಮುಂದಾಗಬೇಕಿದೆ.

ಕೊರೋನ ವೈರಸ್ ವ್ಯಾಪಿ ಹಿನ್ನಲೆಯಲ್ಲಿ ಜಾಗೃತಿಗೊಳಿಸುವ ಹಂತವಾಗಿ ಪ್ರಧಾನಿಯವರು ಕರೆ ನೀಡಿರುವ ಜನತಾ ಕಫ್ರ್ಯೂ ಪಾಲನೆ ಮಾಡುವ ಮೂಲಕ ಕೊರೋನ ತಡೆಗೆ ಉತ್ತಮ ಬೆಂಬಲ ವ್ಯಕ್ತವಾಗುತ್ತಿದೆ. ದೇಶದ ಜನತೆಯ ಆರೋಗ್ಯಕ್ಕೆ ಪೂರಕವಾಗಿರುವ ಇಂತಹ ಕ್ರಮಗಳಿಗೆ ವ್ಯಾಪಕ ಸಹಕಾರ ನೀಡುವುದು ಪ್ರತಿಯೊಪಬ್ಬರ ಜವಾಬ್ದಾರಿಯೂ ಕೂಡ ಆಗಿದೆ.

Leave a Reply

error: Content is protected !!
LATEST
ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ