NEWSದೇಶ-ವಿದೇಶ

ವಿಶ್ವ ಆರೋಗ್ಯ ಸಂಸ್ಥೆಗೆ 30 ಮಿಲಿಯನ್‌ ಡಾಲರ್‌ ದೇಣಿಗೆ ನೀಡಲು ಮುಂದಾದ ಚೀನಾ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೀಜಿಂಗ್:  ವಿಶ್ವ ಆರೋಗ್ಯ ಸಂಸ್ಥೆಗೆ ಅಮೆರಿಕ ನೀಡಬೇಕಾಗಿದ್ದ ಹಣಕಾಸು ನೆರವನ್ನು ತಡೆಹಿಡಿದಿದ್ದರಿಂದ ಚೀನಾ ಡಬ್ಲ್ಯುಎಚ್ ಒಗೆ ಮತ್ತೆ 30 ಮಿಲಿಯನ್ ಡಾಲರ್ ನಷ್ಟು ದೇಣಿಗೆ ನೀಡುವುದಾಗಿ ಗುರುವಾರ ಘೋಷಿಸಿದೆ.

ವಿಶ್ವಮಾರಿ ಕೊರೊನಾ ಸೋಂಕು ವಿಚಾರದಲ್ಲಿ ವಿಶ್ವದ ಬಲಿಷ್ಠ ರಾಷ್ಟ್ರಗಳಾದ ಅಮೆರಿಕ ಮತ್ತು ಚೀನಾ ನಡುವೆ ವಾಕ್ಸಮರ, ಜಟಾಪಟಿ ಮುಂದುವರಿದಿರುವುದು ಹಳೇ ವಿಷಯವಾಗಿದೆ. ಈ ನಡುವೆ ದೇಣಿಗೆ ನೀಡುವ ವಿಚಾರದಲ್ಲಿ ಚೀನಾ ತನ್ನ ಬಲಿಷ್ಠತೆಯನ್ನು ವಿಶ್ವಕ್ಕೆ ತೋರಿಸಲು ಮುಂದಾಗಿದ್ದು, ಈ ಹಿನ್ನೆಲೆಯಲ್ಲಿ WHOಗೆ ನೆರವನ್ನು ನೀಡುವುದಾಗಿ ಘೋಷಿಸಿದೆ.

ಈಗಾಗಲೇ 20 ಮಿಲಿಯನ್ ಡಾಲರ್ ನಷ್ಟು  ದೇಣಿಗೆ ನೀಡಿತ್ತು. ಜಾಗತಿಕವಾಗಿ ಕೋವಿಡ್ ವಿರುದ್ಧ ಹೋರಾಡಲು ವಿಶ್ವ ಆರೋಗ್ಯ ಸಂಸ್ಥೆಗೆ ಮತ್ತೆ 30 ಮಿಲಿಯನ್ ಡಾಲರ್ ನಷ್ಟು ಆರ್ಥಿಕ ನೆರವು ನೀಡಲು ನಿರ್ಧರಿಸಿರುವುದು ಅಮೆರಿಕಕ್ಕೆ ಸೆಡ್ಡು ಹೊಡೆಯಲು ಮುಂದಾದಂತಾಗಿದೆ. ಇದು ಒಳಗೊಳಗೆ ಅಮೆರಿಕದ ಕಣ್ಣನ್ನು ಕೆಂಪಾಗಿಸುತ್ತಿದೆ. ಆದರೂ ಅದೇನೆ ಇರಲಿ ವಿಶ್ವದ ಆರೋಗ್ಯ ದೃಷ್ಟಿಯಿಂದ ಚೀನಾ ತೆಗೆದುಕೊಂಡಿರುವ ನಿರ್ಧಾರ ಮೆಚ್ಚುವಂತದ್ದು.

ಜಾಗತಿಕವಾಗಿ ಕೋವಿಡ್ 19 ವಿರುದ್ಧ ಹೋರಾಡಲು, ಅಭಿವೃದ್ಧಿಶೀಲ ದೇಶಗಳ ಆರೋಗ್ಯ ವ್ಯವಸ್ಥೆ ಬಲಗೊಳಿಸುವ ನಿಟ್ಟಿನಲ್ಲಿ ಬೆಂಬಲ ನೀಡಲು ಈ ನೆರವು ನೀಡಿರುವುದಾಗಿ ವಿದೇಶಾಂಗ ಸಚಿವಾಲಯದ ವಕ್ತಾರ ಜೆಂಗ್ ಶುಯಾಂಗ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಚೀನಾ ಸರ್ಕಾರದ ಮೇಲಿನ ವಿಶ್ವಾಸ, ಬೆಂಬಲದ ಪ್ರತಿಫಲನ ಹಾಗೂ ವಿಶ್ವ ಆರೋಗ್ಯ ಸಂಸ್ಥೆಯ ಜನರಿಗೆ ನೀಡಿರುವ ಕೊಡುಗೆಯಾಗಿದೆ ಎಂದು ಚೀನಾ ಬಣ್ಣಿಸಿದೆ.  ಅಲ್ಲದೇ ಎಲ್ಲರ ಆರೋಗ್ಯ ದೃಷ್ಟಿಯಿಂದ ಇದು ನಮ್ಮ ಅಲ್ಪ ಸಹಾಯ ಎಂದು ಹೇಳಿಕೊಂಡಿದೆ.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ