ವಿದೇಶ

ವೈಜ್ಞಾನಿಕ ರೀತಿ ಹಕ್ಕಿಜ್ವರ ಕೋಳಿಗಳ ನಾಶ: ಸಚಿವ ಪ್ರಭು ಚವ್ಹಾಣ್

ಮೈಸೂರು- ದಾವಣಗೆರೆ ಜಿಲ್ಲೆಯ ಬನ್ನಿಕೋಡದಲ್ಲಿ ಹಕ್ಕಿಜ್ವರ ಹಿನ್ನೆಯಲ್ಲಿ ಕ್ರಮ

ವಿಜಯಪಥ ಸಮಗ್ರ ಸುದ್ದಿ

ಬೀದರ:  ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ಕುಂಬಾರಕೊಪ್ಪಲು ಗ್ರಾಮದಲ್ಲಿರುವ ಮಾಂಸದ ಕೋಳಿ ಫಾರ್ಮ್‍ನಲ್ಲಿರುವ (ಅಶ್ವಿನಿ ಕೋಳಿ ಫಾರಂ) ಸುಮಾರು 4500 ಮಾಂಸದ ಕೋಳಿಗಳನ್ನು ಹಾಗೂ 4500 ಹಿತ್ತಲ ಕೋಳಿಗಳನ್ನು ಬುಧವಾರ  ಕಲ್ಲಿಂಗ್ (ವೈಜ್ಞಾನಿಕವಾಗಿ ನಾಶ) ಮಾಡಲಾಗುತ್ತದೆ ಎಂದು ಪಶುಸಂಗೋಪನೆ  ಸಚಿವ  ಪ್ರಭು ಚವ್ಹಾಣ್   ತಿಳಿಸಿದ್ದಾರೆ.

ಅಲ್ಲದೆ ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಬನ್ನಿಕೋಡ ಗ್ರಾಮದಲ್ಲಿ 157 ಕುಟುಂಬಗಳಲ್ಲಿ 1167 ನಾಟಿ ಕೋಳಿಗಳಿದ್ದು, ಅವುಗಳನ್ನು ಸಹ ಇಂದಿನಿಂದ ವೈಜ್ಞಾನಿಕ ರೀತಿಯಲ್ಲಿ ಇಲಾಖೆಯ ಅಧಿಕಾರಿಗಳು ನಾಶ ಮಾಡಲಿದ್ದಾರೆ ಎಂದು ತಿಳಿಸಿದರು.

ಇತ್ತಿಚೇಗೆ ಮೈಸೂರು ಮಹಾನಗರ ವ್ಯಾಪ್ತಿಯ ಕುಂಬಾರಕೊಪ್ಪಲು ಮತ್ತು  ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಬನ್ನಿಕೋಡ ಗ್ರಾಮದದಿಂದ ಪ್ರಾಣಿ ಆರೋಗ್ಯ ಮತ್ತು ಜೈವಿಕ ಸ್ಥಂಸ್ಥೆ ಹೆಬ್ಬಾಳ ಬೆಂಗಳೂರಿಗೆ ವಿಶ್ಲೇಷಣೆಗೆ ಸಲ್ಲಿಸಲಾದ ಮಾದರಿಗಳಲ್ಲಿ ಹಕ್ಕಿ ಜ್ವರ ದೃಢಪಟ್ಟಿದ್ದು ಹೆಚ್ಚಿನ ತಪಾಸಣೆಗಾಗಿ ನಿಯಮದಂತೆ ಭೂಪಾಲದ ನಿಹ್ಷಾದ್ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಅಲ್ಲಿಯೂ ಸಹ ಹಕ್ಕಿ ಜ್ವರ ಅಥವಾ ಕೋಳಿ ಶೀತ ಜ್ವರದ ವೈರಾಣು ಹೆಚ್5ಎನ್1 ಸೋಂಕು ಇರುವುದು ಧೃಡಪಟ್ಟಿದೆ. ಹೀಗಾಗಿ  ಕೇಂದ್ರ ಸರ್ಕಾರ ಪಶುಸಂಗೋಪನೆ ಮತ್ತು ಹೈನುಗಾರಿಕೆ ಇಲಾಖೆಯಿಂದ ಅಧಿಕೃತವಾಗಿ ಆದೇಶವನ್ನು ಸಹ ನೀಡಿದೆ ಎಂದರು.

ಕೇಂದ್ರ ಸರ್ಕಾರದ ಕೋಳಿ ಶೀತ ಜ್ವರ ನಿಯಂತ್ರಣ ಮತ್ತು ತಡೆಗಟ್ಟುವ ಮಾರ್ಗಸೂಚಿಗಳ ಅನ್ವಯ ರೋಗೋದ್ರೇಕ ಕಾಣಿಸಿಕೊಂಡಿರುವ ಮೈಸೂರು ಮಹಾನಗರ ಪಾಲಿಕೆ ವ್ಯಾಪಿಯಲ್ಲಿನ ಕುಂಬಾರಕೊಪ್ಪಲು ಹಾಗೂ ಹರಿಹರ ತಾಲೂಕಿನ ಬನ್ನಿಕೋಡ ಗ್ರಾಮದ ಒಂದು ಕೀಮೀ ವ್ಯಾಪ್ತಿಯಲ್ಲಿನ ಪ್ರದೇಶವನ್ನು ರೋಗ ಪೀಡಿತ ವಲಯ ಎಂದು ಹಾಗೂ 1 ರಿಂದ 10 ಕೀಮೀ ವ್ಯಾಪ್ತಿಯ ಪ್ರದೇಶವನ್ನು ಜಾಗೃತ ವಲಯ ಎಂದು ಘೋಷಿಸಿ ರಾಜ್ಯ ಸರ್ಕಾರದಿಂದ ಅಧಿಸೂಚನೆ ಹೊರಡಿಸಾಗಿದೆ ಎಂದು ಹೇಳಿದರು.

ಸೋಂಕು ತಗುಲಿದ ವ್ಯಾಪ್ತಿಯಲ್ಲಿ ಲಭ್ಯವಿರುವ ಮೊಟ್ಟೆಗಳನ್ನು ಸಹ ನಾಶ ಮಾಡಲು ಕ್ರಮ ವಹಿಸಲಾಗುತ್ತಿದೆ. ಪ್ರತಿ ಮೊಟ್ಟೆಗೆ ರೂ.3 ರಂತೆ ಕುಕ್ಕುಟ ಆಹಾರಕ್ಕೆ ಪ್ರತಿ 1 ಕೆ.ಜಿ.ಗೆ ರೂ.12 ರಂತೆ ಪರಿಹಾರ ನೀಡಲಾಗುವುದು.

ಮೈಸೂರು ಹಾಗೂ ದಾವಣೆಗೆರೆಯಲ್ಲಿ ಸುಮಾರು 10167 ಕೋಳಿಗಳನ್ನು ಕಲ್ಲಿಂಗ್ ಮಾಡಲಾಗುತ್ತದೆ. ಕೋರೊನಾ ಭೀತಿಯಿಂದ ಕೋಳಿ ಮಾಂಸದ ಸೇವನೆಯಲ್ಲಿ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ. ಇದರಿಂದಾಗಿ ಕೋಳಿ ಸಾಕಾಣಿಕೆ ಮತ್ತು ಮಾರಾಟದ ವೆಚ್ಚದಲ್ಲಿ ಸಾಕಷ್ಟು ವ್ಯತ್ಯಾಸ ಕಂಡುಬಂದಿದ್ದು ಮುಂದಿನ ನಷ್ಟವನ್ನು ತಪ್ಪಿಸಲು ಅನೇಕ ಫಾರಂ ಮಾಲೀಕರು ಕೋಳಿಗಳನ್ನು ಸ್ವಯಿಚ್ಚೆಯಿಂದ ವೈಜ್ಞಾನಿಕವಾಗಿ ವಿಲೇವಾರಿ ಮಾಡುತ್ತಿದ್ದಾರೆ. ಇವುಗಳಿಗೆ ಯಾವುದೇ ರೀತಿಯ ಪರಿಹಾರ ಸರ್ಕಾರದಿಂದ ದೊರೆಯುವುದಿಲ್ಲ ಎಂದು ಸಚಿವರು ತಿಳಿಸಿದ್ದಾರೆ.

Leave a Reply

error: Content is protected !!
LATEST
ಸಾವಿರ ವರ್ಷಗಳ ಇತಿಹಾಸವಿರುವ ಈಶ್ವರ ದೇವಾಲಯ ಜೀರ್ಣೋದ್ಧಾರಕ್ಕೆ ಚಾಲನೆ: ನೇಮಿರಾಜ್ ಕೃಷಿ ಸಚಿವರ ತವರು ನೆಲದಲ್ಲೇ ಕೊಬ್ಬರಿ ಮಾರಿದ ರೈತರ ಪರದಾಟ : ರೈತ ಸಂಘ ಕಿಡಿ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಪಿಎಸ್ ಪಿಂಚಣಿಗಾರರ ಬೃಹತ್ ಪ್ರತಿಭಟನೆ- ಆಕ್ರೋಶ ಮಳೆ ನೀರ ನೇರವಾಗಿ ಒಳಚರಂಡಿಗೆ ಬಿಡುವವರ ವಿರುದ್ಧ ಜಲಮಂಡಳಿ ಕ್ರಮಕ್ಕೆ ಆಕ್ಷೇಪ: ಡಿಸಿಎಂ ಡಿಕೆಶಿಗೆ ಎಎಪಿ ಬಹಿರಂಗ ಪತ್ರ ಕಿಟಕಿ ಮೂಲಕ ನುಸುಳಿ ಹಣ ದೋಚುತ್ತಿದ್ದ ಖತರ್ನಾಕ್‌ ಅಕ್ಕ-ತಮ್ಮ ಅಂದರ್‌ KSRTC: ನೌಕರರ ಸಮಸ್ಯೆ ನೀಗಿಸುವ ಸಮರ್ಥ ಪಡೆಯೂ ಇಲ್ಲ ಸಮರ್ಥ ನಾಯಕನೂ ಇಲ್ಲ! ಡ್ರಾಪ್ ಕೊಡುವ ನೆಪದಲ್ಲಿ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ ಆರೋಪ ಮಹರ್ಷಿ ವಾಲ್ಮೀಕಿ ನಿಗಮದ ಅಧೀಕ್ಷಕ ಚಂದ್ರಶೇಖರನ್ ಆತ್ಮಹತ್ಯೆ ಪ್ರಕರಣದಲ್ಲಿ ನನ್ನ ಪಾತ್ರ ಇಲ್ಲ: ಸಚಿವ ನಾಗೇಂದ್ರ ಸ್ಪಷ್... ಪಿ.ಚಂದ್ರಶೇಖರನ್‌ ಆತ್ಮಹತ್ಯೆ ಪ್ರಕರಣ: ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿರುವ ಮಂತ್ರಿಯ ಸಂಪುಟದಿಂದ ಕಿತ್ತುಹಾಕಿ: ಎಎಪಿ KKRTC: ಡಬಲ್ ಡ್ಯೂಟಿ, ದೂರದ ಪ್ರಯಾಣಕ್ಕೆ ವಿಶ್ರಾಂತಿ ಕಡ್ಡಾಯ ಆದರೆ ದೇವದುರ್ಗ ಘಟಕದ ನೌಕರರಿಗೆ ಮರೀಚಿಕೆ!