NEWSಶಿಕ್ಷಣ-

ಶಿಕ್ಷಕರು ಸಿಬ್ಬಂದಿ ವೇತನಕ್ಕಾಗಿ ಶಾಲಾ ಶುಲ್ಕ ಸ್ವೀಕರಿಸಲು ಷರತ್ತು ಬದ್ಧ ಅನುಮತಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಪೋಷಕರು ಇಚ್ಛಿಸುವ ಸಂಖ್ಯೆಯ ಕಂತುಗಳಲ್ಲಿ ಶುಲ್ಕ ಪಾವತಿಗೆ ಖಾಸಗಿ ಶಾಲೆಗಳು ಕ್ರಮ ವಹಿಸಲು ನಿರ್ದೇಶನ ಹೊರಡಿಸಿ ಎಂದು ಸಚಿವ ಸುರೇಶ್ ಕುಮಾರ್ ಶಿಕ್ಷಣ ಇಲಾಖೆಯ ಆಯುಕ್ತರಿಗೆ ಸೂಚನೆ ನೀಡಿದ್ದಾರೆ.

ಕೋವಿಡ್ 19 ಲಾಕ್ಡೌನ್ ಅವಧಿಯ ಅನಿಶ್ಚಿತತೆಯು  ಅನಿರ್ದಿಷ್ಟಾವಧಿಯವರೆಗೆ ಮುಂದುವರಿಯುತ್ತಿರುವು ದರಿಂದ ತಮ್ಮ ಶಾಲೆಗಳಲ್ಲಿ ಕೆಲಸ ಮಾಡುವ ಶಿಕ್ಷಕ ಸಿಬ್ಬಂದಿ ವೇತನಕ್ಕೆ ಕೂಡಾ ತೊಂದರೆಯುಂಟಾಗಿದ್ದು, ಮಾನವೀಯ ನೆಲೆಗಟ್ಟಿನಲ್ಲಿ ಅನುಕೂಲ ಮಾಡಿಕೊಡಲು ಹಲವು ಖಾಸಗಿ ಶಾಲಾ ಆಡಳಿತ ಮಂಡಳಿಗಳು, ಸಂಘಟನೆಗಳು ಮನವಿಗಳನ್ನು ಸಲ್ಲಿಸಿರುವ ಹಿನ್ನೆಲೆಯಲ್ಲಿ  ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ತಮ್ಮ ಮಕ್ಕಳ ಬೋಧನಾ ಶುಲ್ಕವನ್ನು ಕಟ್ಟಲು ಆರ್ಥಿಕವಾಗಿ ಪಾಲಕರು ಸಮರ್ಥರಿದ್ದರೆ ಅವರು ಸ್ವಯಂಪ್ರೇರಿತರಾಗಿ ಶುಲ್ಕ ಪಾವತಿಗೆ ಮುಂದಾದರೆ   ಅಂತಹ ಪೋಷಕರಿಂದ ಶಿಕ್ಷಣ ಕಾಯ್ದೆಯ ಅವಕಾಶಗಳಡಿಯಲ್ಲಿ ಶುಲ್ಕ ವಸೂಲಿ ಮಾಡಲು ಯಾವುದೇ ತೊಂದರೆ ಇಲ್ಲ ಎಂದು ಸೂಚನೆ ನೀಡಿದ್ದಾರೆ.

ಯಾವ ಪೋಷಕರು, ತಮ್ಮ ಮಕ್ಕಳ ಶುಲ್ಕವನ್ನು ಕಟ್ಟಲು ಅಸಹಾಯಕರೋ, ಸದ್ಯಕ್ಕೆ ತಮಗೆ ಸಾಧ್ಯವಿಲ್ಲವೆಂದು ನಿರಾಕರಿಸುತ್ತಾರೋ ಅಂತಹವರಿಂದ ಯಾವುದೇ ಕಾರಣಕ್ಕೂ ಶುಲ್ಕ ವಸೂಲು ಮಾಡುವ ಹಾಗಿಲ್ಲ ಎಂಬ ಎಚ್ಚರಿಕೆಯನ್ನು ಶಾಲಾ ಆಡಳಿತ ಮಂಡಿಗೆ ನೀಡಿದ್ದಾರೆ.

ಒಂದು ವೇಳೆ ಶುಲ್ಕ ಕಟ್ಟಲು ಸಾಧ್ಯವಾಗದ ಪೋಷಕರ ಮೇಲೆ ಒತ್ತಡ ಹೇರುವುದರ ಕುರಿತು ದೂರುಗಳು ಬಂದಲ್ಲಿ ಅಂತಹ ಶಾಲೆಗಳ ಮೇಲೆ ನಿರ್ದಾಕ್ಷಿಣ್ಯವಾಗಿ ಶಿಸ್ತಿನ ಕ್ರಮಕ್ಕೆ ಮುಂದಾಗಲು ಸಚಿವರು ಆಯುಕ್ತರಿಗೆ ನಿರ್ದೇಶನವನ್ನು ನೀಡಿದ್ದಾರೆ. ಪೋಷಕರು ನೀಡುವ ಹಣವನ್ನು ಈ ಖಾಸಗಿ ಶಾಲೆಗಳಲ್ಲಿ ಕೆಲಸ ಮಾಡುವ ಶಿಕ್ಷಕ ಸಿಬ್ಬಂದಿ ವೇತನಕ್ಕೆ ಬಳಸಿಕೊಳ್ಳಲು ಪ್ರಥಮ ಆದ್ಯತೆಯನ್ನು ನೀಡಬೇಕು  ಎಂಬ ಅಂಶವನ್ನು ಶಿಕ್ಷಣ ಇಲಾಖೆಯ ನಿರ್ದೇಶನದಲ್ಲಿ ಸ್ಪಷ್ಟಪಡಿಸಬೇಕೆಂಬ ಸೂಚನೆಯನ್ನು ಸಹ ಸಚಿವರು ನೀಡಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ