ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ತವರು ಜಿಲ್ಲೆ ಶಿವಮೊಗ್ಗದಲ್ಲಿ 3 ಕಡೆ ಕಾಂಗ್ರೆಸ್, 3 ಕಡೆ ಬಿಜೆಪಿ ಹಾಗೂ ಒಂದರಲ್ಲಿ ಜೆಡಿಎಸ್ ಗೆಲುವು ಸಾಧಿಸಿದೆ.
ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಆರಗ ಜ್ಞಾನೇಂದ್ರ ಅವರು 84,563 ಮತಗಳನ್ನು ಪಡೆದು ಗೆದ್ದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕಿಮ್ಮನೆ ರತ್ನಾಕರ್ 72,322 ಮತ ಪಡೆದು ಸೋತಿದ್ದಾರೆ. ಅರಗ ಅವರ ಗೆಲುವಿನ ಅಂತರ 12,241 ಆಗಿದೆ.
ಸೊರಬ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಧು ಬಂಗಾರಪ್ಪ 98,912 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಕುಮಾರ್ ಬಂಗಾರಪ್ಪ 54,650 ಮತ ಪಡೆದು ಸೋಲು ಕಂಡಿದ್ದಾರೆ. ಕಾಂಗ್ರೆಸ್‍ನ ಗೆಲುವಿನ ಅಂತರ 44,262 ಮತಗಳಾಗಿವೆ.
ಭದ್ರಾವತಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಿ.ಕೆ.ಸಂಗಮೇಶ್ವರ 65,883 ಮತ ಪಡೆದು ಗೆಲುವು ಸಾಧಿಸಿದ್ದಾರೆ. ಜೆಡಿಎಸ್ ಅಭ್ಯರ್ಥಿ ಶಾರದ ಅಪ್ಪಾಜಿಗೌಡ 63,298 ಮತಗಳನ್ನು ಪಡೆದು ಸೋತಿದ್ದಾರೆ. ಗೆಲುವಿನ ಅಂತರ 2,585 ಆಗಿದೆ.
ಸಾಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣ 88,179 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಹರತಾಳು ಹಾಲಪ್ಪ 72,263 ಮತಗಳನ್ನು ಪಡೆದು ಸೋಲು ಕಂಡಿದ್ದಾರೆ. ಗೆಲುವಿನ ಅಂತರ 15,916 ಆಗಿದೆ.
ಶಿಕಾರಿಪುರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ವಿಜಯೇಂದ್ರ 81,810 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಪಕ್ಷೇತರ ಅಭ್ಯರ್ಥಿ ನಾಗರಾಜ್ ಗೌಡ 70,802 ಮತಗಳನ್ನು ಪಡೆದು ಸೋಲು ಕಂಡಿದ್ದಾರೆ. ಗೆಲುವಿನ ಅಂತರ 11,008 ಮತಗಳಾಗಿದೆ.
ಶಿವಮೊಗ್ಗ ನಗರದಲ್ಲಿ ಬಿಜೆಪಿ ಅಭ್ಯರ್ಥಿ ಚನ್ನಬಸಪ್ಪ ಅವರು 95,399 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಹೆಚ್.ಸಿ.ಯೋಗೀಶ್ ಅವರು 68,071 ಮತಗಳನ್ನು ಪಡೆದು ಸೋಲು ಕಂಡಿದ್ದಾರೆ. ಗೆಲುವಿನ ಅಂತರ 27,328 ಮತಗಳಾಗಿದೆ.
ಶಿವಮೊಗ್ಗ ಗ್ರಾಮಾಂತರದಲ್ಲಿ ಜೆಡಿಎಸ್ ಅಭ್ಯರ್ಥಿ ಶಾರದ ಪೂರ್ಯನಾಯ್ಕ 85,768 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಅಶೋಕ್ ನಾಯ್ಕ ಅವರು 70,610 ಮತಗಳನ್ನು ಪಡೆದು ಸೋಲು ಕಂಡಿದ್ದಾರೆ. ಗೆಲುವಿನ ಅಂತರ 15,158 ಮತಗಳಾಗಿವೆ.