NEWSಬೆಂಗಳೂರುರಾಜಕೀಯ

ಶಿವಮೊಗ್ಗ: 3 ಕಾಂಗ್ರೆಸ್‌, 3 ಬಿಜೆಪಿ, ಒಂದರಲ್ಲಿ ಗೆಲುವಿನ ಸಂಭ್ರಮ ಹಂಚಿಕೊಂಡ ಜೆಡಿಎಸ್‌

ವಿಜಯಪಥ ಸಮಗ್ರ ಸುದ್ದಿ

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ತವರು ಜಿಲ್ಲೆ ಶಿವಮೊಗ್ಗದಲ್ಲಿ 3 ಕಡೆ ಕಾಂಗ್ರೆಸ್, 3 ಕಡೆ ಬಿಜೆಪಿ ಹಾಗೂ ಒಂದರಲ್ಲಿ ಜೆಡಿಎಸ್‌ ಗೆಲುವು ಸಾಧಿಸಿದೆ.

ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಆರಗ ಜ್ಞಾನೇಂದ್ರ ಅವರು 84,563 ಮತಗಳನ್ನು ಪಡೆದು ಗೆದ್ದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕಿಮ್ಮನೆ ರತ್ನಾಕರ್ 72,322 ಮತ ಪಡೆದು ಸೋತಿದ್ದಾರೆ. ಅರಗ ಅವರ ಗೆಲುವಿನ ಅಂತರ 12,241 ಆಗಿದೆ.

ಸೊರಬ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಧು ಬಂಗಾರಪ್ಪ 98,912 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಕುಮಾರ್ ಬಂಗಾರಪ್ಪ 54,650 ಮತ ಪಡೆದು ಸೋಲು ಕಂಡಿದ್ದಾರೆ. ಕಾಂಗ್ರೆಸ್‍ನ ಗೆಲುವಿನ ಅಂತರ 44,262 ಮತಗಳಾಗಿವೆ.

ಭದ್ರಾವತಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಿ.ಕೆ.ಸಂಗಮೇಶ್ವರ 65,883 ಮತ ಪಡೆದು ಗೆಲುವು ಸಾಧಿಸಿದ್ದಾರೆ. ಜೆಡಿಎಸ್ ಅಭ್ಯರ್ಥಿ ಶಾರದ ಅಪ್ಪಾಜಿಗೌಡ 63,298 ಮತಗಳನ್ನು ಪಡೆದು ಸೋತಿದ್ದಾರೆ. ಗೆಲುವಿನ ಅಂತರ 2,585 ಆಗಿದೆ.

ಸಾಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣ 88,179 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಹರತಾಳು ಹಾಲಪ್ಪ 72,263 ಮತಗಳನ್ನು ಪಡೆದು ಸೋಲು ಕಂಡಿದ್ದಾರೆ. ಗೆಲುವಿನ ಅಂತರ 15,916 ಆಗಿದೆ.

ಶಿಕಾರಿಪುರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ವಿಜಯೇಂದ್ರ 81,810 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಪಕ್ಷೇತರ ಅಭ್ಯರ್ಥಿ ನಾಗರಾಜ್ ಗೌಡ 70,802 ಮತಗಳನ್ನು ಪಡೆದು ಸೋಲು ಕಂಡಿದ್ದಾರೆ. ಗೆಲುವಿನ ಅಂತರ 11,008 ಮತಗಳಾಗಿದೆ.

ಶಿವಮೊಗ್ಗ ನಗರದಲ್ಲಿ ಬಿಜೆಪಿ ಅಭ್ಯರ್ಥಿ ಚನ್ನಬಸಪ್ಪ ಅವರು 95,399 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಹೆಚ್.ಸಿ.ಯೋಗೀಶ್ ಅವರು 68,071 ಮತಗಳನ್ನು ಪಡೆದು ಸೋಲು ಕಂಡಿದ್ದಾರೆ. ಗೆಲುವಿನ ಅಂತರ 27,328 ಮತಗಳಾಗಿದೆ.

ಶಿವಮೊಗ್ಗ ಗ್ರಾಮಾಂತರದಲ್ಲಿ ಜೆಡಿಎಸ್ ಅಭ್ಯರ್ಥಿ ಶಾರದ ಪೂರ್ಯನಾಯ್ಕ 85,768 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಅಶೋಕ್ ನಾಯ್ಕ ಅವರು 70,610 ಮತಗಳನ್ನು ಪಡೆದು ಸೋಲು ಕಂಡಿದ್ದಾರೆ. ಗೆಲುವಿನ ಅಂತರ 15,158 ಮತಗಳಾಗಿವೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು