Please assign a menu to the primary menu location under menu

NEWSಆರೋಗ್ಯ

ಸಂಡೂರು ತಾಲೂಕಿನಲ್ಲಿ ಮೂವರು ನಕಲಿ ವೈದ್ಯರ ವಶ

ಸಂಡೂರು ತಹಸೀಲ್ದಾರ್ ರಶ್ಮೀ ನೇತೃತ್ವ l ದಿಢೀರ್ ಕಾರ್ಯಾಚರಣೆ

ವಿಜಯಪಥ ಸಮಗ್ರ ಸುದ್ದಿ

ಬಳ್ಳಾರಿ:  ಸಂಡೂರು ತಾಲೂಕಿನ ವಿವಿಧೆಡೆ ಮಂಗಳವಾರ ಕಾರ್ಯಾಚರಣೆ ನಡೆಸಿದ ಸಂಡೂರು ತಹಸೀಲ್ದಾರ್ ರಶ್ಮಿ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳ ನೇತೃತ್ವದ ತಂಡ ಮೂರು ಜನ ನಕಲಿ ವೈದ್ಯರನ್ನು ಪತ್ತೆ ಹಚ್ಚಿ, ಅವರು ನಡೆಸುತ್ತಿದ್ದ ಕ್ಲಿನಿಕ್ ಸೀಜ್ ಮಾಡಿದ್ದಾರೆ.

ಇವರ ಮೇಲೆ ಪ್ರಕರಣ ದಾಖಲಿಸುವಂತೆ ಕೂಡ್ಲಿಗಿ ಪೊಲೀಸರ ವಶಕ್ಕೆ ನೀಡಲಾಗಿದೆ. ಕಾಳಿಂಗೇರಿಯಲ್ಲಿ ಅವಿಷೇಕ್ ಎನ್ನುವ ಆರ್.ಎಂ.ಪಿ ಡಾಕ್ಟರ್ ಪಶ್ಚಿಮ ಬಂಗಾಳದ ನಕಲಿ ಪ್ರಮಾಣಪತ್ರ ಮತ್ತು ನಕಲಿ ಐಡಿ ಕಾರ್ಡ್ ಇಟ್ಟುಕೊಂಡು ‌ಜನರಿಗೆ‌ ಚಿಕಿತ್ಸೆ ನೀಡುತ್ತಿದ್ದ,ಸ್ಟೀರಾಯ್ಡ್ ಬಳಸುತ್ತಿದ್ದ ಮತ್ತು ಓವರ್ ಡೋಸ್ ಕೋಡ್ತಾ ಇರುವುದು ತನಿಖೆ ವೇಳೆ ಕಂಡುಬಂದಿದೆ ಎಂದು ತಹಸೀಲ್ದಾರ್ ರಶ್ಮಿ ತಿಳಿಸಿದರು.

ಚೋರನೂರು ಹೋಬಳಿ ವ್ಯಾಪ್ತಿಯ ಅಂಕಮ್ಮನಾಳದಲ್ಲಿ ಇಬ್ಬರು ಇದೇ ರೀತಿ ಕ್ಲಿನಿಕ್ ಇಟ್ಟುಕೊಂಡು‌ ನಕಲಿ ಪ್ರಮಾಣಪತ್ರ ಮತ್ತು ನಕಲಿ ಐಡಿ ಇಟ್ಟುಕೊಂಡು ಜನರಿಗೆ ಚಿಕಿತ್ಸೆ ನೀಡುತ್ತಿದ್ದರು. ಬಸವರಾಜ ಮತ್ತು ಜಾಫರ್ ಅಲಿ ಎನ್ನುವವರಲ್ಲಿ ಕರ್ನಾಟಕ ಮೆಡಿಕಲ್ ಅಸೋಸಿಯೇಶನ್ ಸಂಬಂಧಿಸಿದ ಯಾವುದೇ ಪ್ರಮಾಣಪತ್ರ ಕಾರ್ಯಾಚರಣೆ ನಡೆಸಿದ ಸಂದರ್ಭದಲ್ಲಿ ಲಭ್ಯವಿರಲಿಲ್ಲ. ಇವರು ಕೂಡ ಸ್ಟೀರಾಯ್ಡ್ ಬಳಸುತ್ತಿರುವುದು ಮತ್ತು ಓವರ್ ಡೋಸ್ ಕೋಡ್ತಾ ಇರುವುದು ಕಂಡುಬಂದಿದೆ ಎಂದರು.

ಈ ಕಾರ್ಯಾಚರಣೆ ಸಂದರ್ಭದಲ್ಲಿ ಕೂಡ್ಲಿಗಿ ಪೊಲೀಸರ ವಶಕ್ಕೆ ಇವರನ್ನು ನೀಡುವ ಸಂದರ್ಭದಲ್ಲಿ ಜಾಫರ್ ಅಲಿ ಎನ್ನುವವರು ತಪ್ಪಿಸಿಕೊಂಡಿದ್ದು, ಪೊಲೀಸರು ಬಂಧನಕ್ಕೆ ‌ಜಾಲ‌ ಬಿಸಿದ್ದಾರೆ. ಉಳಿದ ಇಬ್ಬರನ್ನು ಪೊಲೀಸರ ವಶಕ್ಕೆ ನೀಡಲಾಗಿದೆ. ಕೂಡ್ಲಿಗಿ ಪೊಲೀಸ್ ಠಾಣೆಗೆ ಪ್ರಕರಣ ದಾಖಲಿಸುವಂತೆ ಸೂಚಿಸಲಾಗಿದೆ ಎಂದು ತಹಸೀಲ್ದಾರ್ ತಿಳಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ತಾಲೂಕು ಆರೋಗ್ಯ ಅಧಿಕಾರಿ‌ ಡಾ.ಗೋಪಾಲಕೃಷ್ಣ,ಡಾ.ಕಿರಣ ಹಾಗೂ ಕಂದಾಯ ಇಲಾಖೆಯ ಆರ್ ಐಗಳು ಮತ್ತು ವಿಎಗಳು ಇದ್ದರು.

Leave a Reply

error: Content is protected !!
LATEST
ಸರ್ಕಾರಿ ವಾಹನ ಚಾಲಕರಿಗೆ ಕನಿಷ್ಠ ವೇತನ ₹34,100 ನಿಗದಿಗೊಳಿಸಿ ಸರ್ಕಾರ ಆದೇಶ ಇಂದಿನಿಂದ ನಿವೃತ್ತ ಸಾರಿಗೆ ನೌಕರರಿಗೆ ಉಪಧನ, ನಿವೃತ್ತಿ ಗಳಿಕೆ ರಜೆ ನಗದೀಕರಣ ಪಾವತಿಗೆ ಎಂಡಿ ಆದೇಶ BMTC: ಡಿ.24ರಂದು ನೌಕರರಿಗೆ 7 ತಿಂಗಳ ತುಟ್ಟಿಭತ್ಯೆ ಹಿಂಬಾಕಿ ಪಾವತಿಗೆ ಎಂಡಿ ಆದೇಶ KKRTC ಸಂಸ್ಥೆಯ ಸಿಬ್ಬಂದಿಗಳಿಗೆ ಉಚಿತ ಒಂದು ಕೋಟಿ ರೂ. ಅಪಘಾತ ವಿಮೆ ಜತೆಗೆ ನೌಕರರಿಗೆ ಸಿಗುವ ಇತರ ಸೌಲಭ್ಯಗಳು KKRTC: ನಗದು ರಹಿತ ಚಿಕಿತ್ಸೆಗಾಗಿ ಸಿಬ್ಬಂದಿಗಳ ವೈಯಕ್ತಿಕ, ಅವಲಂಬಿತರ ಮಾಹಿತಿ ಸಂಗ್ರಹಿಸಿ- ಅಧಿಕಾರಿಗಳಿಗೆ ಆದೇಶ ಹೈಕೋರ್ಟ್‌ ಆದೇಶದ ಬೆನ್ನಲ್ಲೇ ದಾವಣಗೆರೆಯಲ್ಲಿ ಪೊಲೀಸರಿಂದ ಸಿ.ಟಿ.ರವಿ ಬಿಡುಗಡೆ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ: ಮಂಡ್ಯಕ್ಕೆ ಆಗಮಿಸಿದ ಸಮ್ಮೇಳನಾಧ್ಯಕ್ಷರಿಗೆ ಸ್ವಾಗತ ಉತ್ತಮ ಆಡಳಿತ ಸಪ್ತಾಹ: ಹಿರಿಯ ನಾಗರಿಕರಿಗೆ ಗುರುತಿನ ಚೀಟಿ ವಿತರಿಸಿದ ಡಿಸಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅಶ್ಲೀಲ ಪದ ಬಳಕೆ ಆರೋಪ: ಸಿ.ಟಿ.ರವಿ ಬಂಧನ ಸಾರ್ವಜನಿಕರ ಸಮಸ್ಯೆ ಶೀಘ್ರ ಪರಿಹರಿಸಿ: ಅಧಿಕಾರಿಗಳಿಗೆ ಡಿಸಿ ಸೂಚನೆ