NEWSನಮ್ಮರಾಜ್ಯ

ಸಕ್ಕರೆ ಕಾರ್ಖಾನೆ ಮಾಲೀಕರ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳ ಬೇಡಿ: ಕುರುಬೂರು ಶಾಂತಕುಮಾರ್‌ ಆಗ್ರಹ

ರೈತ ವಿರೋಧಿ ನೀತಿಗಳಿಂದ ರೈತರ ಆಕ್ರೋಶಕ್ಕೆ ಗುರಿಯಾಗಿ ಬಿಜೆಪಿ ಸರ್ಕಾರದ ಅಧಿಕಾರ ಧೂಳಿಪಟ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ರಾಜ್ಯದ 30 ಲಕ್ಷ ಕಬ್ಬು ಬೆಳೆಗಾರರ ರೈತರ ಹಿತದೃಷ್ಟಿಯಿಂದ ನೂತನ ಸರ್ಕಾರದಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಬಾರದು. ಸರ್ಕಾರದಲ್ಲಿ ಕಾನೂನು ಮಾಡುವುದು, ಆದೇಶ ಜಾರಿಗೊಳಿಸುವುದನ್ನು ಉಲ್ಲಂಘಿಸುವುದನ್ನು ಸಕ್ಕರೆ ಕಾರ್ಖಾನೆ ಮಾಲೀಕರು ಮಾಡುತ್ತಿರುವುದರಿಂದ ರಾಜ್ಯದಲ್ಲಿ ಕಬ್ಬು ಬೆಳೆಗಾರರಿಗೆ ನ್ಯಾಯ ಸಿಗುತ್ತಿಲ್ಲ ಈ ಬಗ್ಗೆ ನೂತನ ಸರ್ಕಾರದ ಮುಖ್ಯಮಂತ್ರಿಯವರು ಗಂಭೀರ ಚಿಂತನೆ ನಡೆಸಬೇಕು ಎಂದು ರೈತರತ್ನ ಕುರುಬೂರು ಶಾಂತಕುಮಾರ್‌ ಆಗ್ರಹಿಸಿದ್ದಾರೆ.

ಇಂದು ಮೈಸೂರಿನ ಖಾಸಗಿ ಹೋಟೆಲ್‌ ಒಂದರಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣಾ ಪೂರ್ವದಲ್ಲಿಯೂ ರೈತರ ಪ್ರಣಾಳಿಕೆಯಲ್ಲಿ ರಾಜಕೀಯ ಪಕ್ಷಗಳಿಗೆ ಈ ಬಗ್ಗೆ ಗಮನ ಸೆಳೆದಿದ್ದೇವೆ. ಎಂಬುದನ್ನು ಅರಿತುಕೊಳ್ಳಬೇಕು ರಾಜ್ಯಪಾಲರ ಭೇಟಿಗೆ ಅವಕಾಶ ಕೇಳಿದ್ದೇವೆ ಈ ಬಗ್ಗೆ ನೂತನ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಲು ಇದೇ ಮೇ 15 ಅಥವಾ 16 ರಂದು ರಾಜ್ಯಪಾಲರ ಭೇಟಿಗೆ ಸಮಯವಕಾಶ ಕೋರಿದ್ದೇವೆ ಎಂದರು.

ಕೃಷಿ ಪಂಪ್ಸೆಟ್ ಗಳಿಗೆ ರೈತರು ಆಧಾರ್ ಲಿಂಕ್ ಮಾಡುವುದು ಕಡ್ಡಾಯ ಮಾಡುವುದನ್ನು ವಿರೋಧಿಸುತ್ತೇವೆ. ಕೃಷಿ ಪಂಪ್ಸೆಟ್ ಗಳಿಗೆ ಉಚಿತ ವಿದ್ಯುತ್ ನಿಲ್ಲಿಸಲು, ಸಬ್ಸಿಡಿ ನಿಲ್ಲಿಸುವ ಕುತಂತ್ರ ಮಾಡಲು ಈಗಾಗಲೇ ಕೇಂದ್ರ ಸರ್ಕಾರ ಯತ್ನಿಸಿದೆ ಖಾಸಗೀಕರಣದ ಬಾಗಿಲು ತೆರೆದಿದೆ. ಕೃಷಿ ಪಂಪ್ಸೆಟ್ ರೈತರು ನೆಲ ಸಮವಾಗುತ್ತಾರೆ. ಯಾವುದೇ ಕಾರಣಕ್ಕೂ ರೈತರು ಲಿಂಕ್ ಮಾಡಿಸುವುದಿಲ್ಲ. ನೂತನ ಸರ್ಕಾರ ಇದಕ್ಕೆ ತಡೆಹಾಕಬೇಕು ಎಂದು ಒತ್ತಾಯಿಸಿದರು.

ಬೆಳಗಾವಿ ವಿಧಾನಸಭಾ ಅಧಿವೇಶನದಲ್ಲಿ ಸಿದ್ದರಾಮಯ್ಯನವರು ಕಬ್ಬಿಗೆ ಎಫ್‌ ಆರ್‌ ಪಿ ಹೆಚ್ಚುವರಿ ದರ ನಿಗದಿಗೆ ಒತ್ತಾಯಿಸಿದರು. ನಾವು ರೈತರು 39 ದಿನಗಳ ಹೋರಾಟ ಮಾಡಿದ ಹಿನ್ನೆಲೆಯಲ್ಲಿ ಪ್ರತಿ ಟನ್‌ಗೆ 150 ರೂ. ನಿಗದಿಪಡಿಸಿ ಆದೇಶ ಹೊರಡಿಸಿ ನ್ಯಾಯಾಲಯದಲ್ಲಿ ತಡೆಯಾಜ್ಞೆ ಮಾಡಲಾಗಿದೆ. ನೂತನ ಸರ್ಕಾರ ತಕ್ಷಣವೇ ತಡೆಯಾಜ್ಞೆ ತೆರವುಗೂಳಿಸಿ ಕಬ್ಬು ಬೆಳೆಗಾರರಿಗೆ ಕಾರ್ಖಾನೆಗಳಿಂದ ಹಣ ಕೊಡಿಸಬೇಕು ಎಂದರು.

ಹಿ೦ದಿನ ಸರ್ಕಾರ ಜಾರಿಗೊಳಿಸಿದ ಎಪಿಎಂಸಿ ಕಾಯ್ದೆ ತಿದ್ದುಪಡಿ ಮಸೂದೆ ರದ್ದು.ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ಮಸೂದೆ ರದ್ದು. ಕ್ನಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತ್ರಿ ಶಾಸನ ಜಾರಿ ಭರವಸೆ ಈಡೇರಿಸಲು ನೂತನ ಮುಖ್ಯಮಂತ್ರಿಗಳು ಕ್ರಮ ಕೈಗೊಳ್ಳಬೇಕು ಎಂದ ಅವರು, ಮೇಲುಕೋಟೆ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಬೆಂಬಲಿತ ರೈತ ಸಂಘದ ದರ್ಶನ್ ಪುಟ್ಟಣ್ಣಯ್ಯ ರೈತರ ಬೆಂಬಲದಿಂದ ಆಯ್ಕೆಯಾಗಿರುವುದಕ್ಕೆ ಅಭಿನಂದನೆಗಳನ್ನು ಸಲ್ಲಿಸಿದರು.

ಈಗ ನಡೆದ ಚುನಾವಣೆಯಲ್ಲಿ ಹಣಕಾಸಿನ ಬಾರಿ ಅಕ್ರಮ ವ್ಯವಹಾರಗಳು ನಡೆದಿವೆ ಚುನಾವಣಾ ಆಯೋಗದ ಅಧಿಕಾರಿಗಳು ನಿಯಂತ್ರಣ ಮಾಡುವಲ್ಲಿ ವಿಫಲರಾಗಿದ್ದಾರೆ. ಚುನಾವಣೆ ನಂತರವೂ ಬೆಟ್ಟಿಂಗ್ ಭರಾಟೆ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗವಾಗಿ ಕರೆ ನೀಡಿದರು ಅಂಥವರ ವಿರುದ್ಧ ಕಠಿಣ ಕ್ರಮ ಜಾರಿಯಾಗಲಿಲ್ಲ ಇದು ಮುಂದಿನ ಚುನಾವಣೆಗಳಲ್ಲಿ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದರು.

ಇನ್ನು ಇದನ್ನು ಸರಿಪಡಿಸುವುದಕ್ಕೆ ಮುಂದಾಗದಿದ್ದರೆ ಚುನಾವಣಾ ಆಯೋಗವೆ ಬಹಿರಂಗ ಜೂಜಿಗೆ ಅವಕಾಶ ಮಾಡಿಕೊಟ್ಟಂತಾಗುತ್ತದೆ. ಹಳ್ಳಿಗಳಲ್ಲಿ ದ್ವೇಷದ ವಿಷ ಬಿತ್ತಲು ಕಾರಣವಾಗುತ್ತದೆ. ಪ್ರಜಾಪ್ರಭುತ್ವ ಚುನಾವಣೆ ದುರ್ಬಲವಾದರೆ ಮತ್ತಷ್ಟು ಗೋಮುಖ ವ್ಯಾಘ್ರಗಳು ಸಮಾಜಘಾತಕ ಶಕ್ತಿಗಳು ಚುನಾವಣೆಗೆ ನಿಲ್ಲುವಂತಾಗುತ್ತದೆ. ಈ ಬಗ್ಗೆ ಆಯೋಗ ಕಠಿಣ ಚಿಂತನೆ ನಡೆಸಬೇಕು ಎಂದು ಒತ್ತಾಐಿಸಿದರು.

ಸುದ್ದಿಗೋಷ್ಠಿಯಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬರಡನಪುರ ನಾಗರಾಜ್, ಮೈಸೂರು ಜಿಲ್ಲೆ ಮಹಿಳಾ ಅಧ್ಯಕ್ಷೆ ಕಮಲಮ್ಮ, ತಾಲೂಕು ಅಧ್ಯಕ್ಷ ಲಕ್ಷ್ಮಿಪುರ ವೆಂಕಟೇಶ್ ಇದ್ದರು.

Leave a Reply

error: Content is protected !!
LATEST
KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ