CrimeNEWSಬೆಂಗಳೂರು

ಸ್ಕ್ಯಾನಿಂಗ್ ಸೆಂಟರ್‌ನಲ್ಲಿ ಹೆಂಡತಿ ಆರೋಗ್ಯ ತಪಾಸಣೆ: 15 ನಿಮಿಷ ತಪಾಸಣೆ ಮಾಡಿದ ಸಿಬ್ಬಂದಿ ಮೇಲೆ ಸಂಶಯ ಹತ್ಯೆಗೆ ಸುಪಾರಿ ಕೊಟ್ಟ ಗಂಡ

ವಿಜಯಪಥ ಸಮಗ್ರ ಸುದ್ದಿ

ಯಾದಗಿರಿ: ಹೆಂಡತಿಯನ್ನು ಆರೋಗ್ಯ ತಪಾಸಣೆಗಾಗಿ ಸ್ಕ್ಯಾನಿಂಗ್ ಸೆಂಟರ್‌ಗೆ ಕರೆದುಕೊಂಡು ಹೋಗಿದ್ದಾಗ ಸಿಬ್ಬಂದಿ ಮೇಲೆ ಸಂಶಯಪಟ್ಟ ಪತಿಯೊಬ್ಬ ಸ್ಕ್ಯಾನಿಂಗ್ ಸೆಂಟರ್‌ ಸಿಬ್ಬಂದಿಯನ್ನೇ ಮುಗಿಸಲು ಮುಂದಾಗಿ ಹತ್ಯೆಗೆ ಸುಪಾರಿ ನೀಡಿದ್ದ. ಆದರೆ ಹತ್ಯೆಗೂ ಮುನ್ನವೇ ಸುಪಾರಿ ಪಡೆದವನೊಂದಿಗೆ ಸುಪಾರಿ ಕೊಟ್ಟ ಪತಿಯೂ ಸಹ ಕಂಬಿ ಹಿಂದೆ ಬಂಧಿಯಾಗಿದ್ದಾನೆ.

ಯಾದಗಿರಿ ನಗರ ಪೊಲೀಸ್ ಠಾಣೆಯ ಪೊಲೀಸರು ಎಚ್ಚೆತ್ತುಕೊಂಡು ಕೊಲೆಗೆ ಹೊಂಚು ಹಾಕಿ ಕುಳಿತಿದ್ದ ಇಬ್ಬರನ್ನು ಬಂಧಿಸಿದ್ದಾರೆ. ಇದರಿಂದ ಯಾದಗಿರಿ ನಗರ ಪೊಲೀಸ್ ಠಾಣೆ ಪಿಎಸ್‌ಐ ದೇವೇಂದ್ರ ರೆಡ್ಡಿ ಹಾಗೂ ನೇತೃತ್ವದ ತಂಡ ಓರ್ವನ ಪ್ರಾಣ ಕಾಪಾಡಿದಂತಾಗಿದೆ.

ಯಾದಗಿರಿ ತಾಲೂಕಿನ ಮುದ್ನಾಳ್ ತಾಂಡಾ ಗ್ರಾಮದ ನಾನ್ಯಾ ನಾಯಕ್ ಕಳೆದ 8 ತಿಂಗಳ ಹಿಂದೆ ತನ್ನ ಹೆಂಡತಿಯನ್ನು ತಪಾಸಣೆಗಾಗಿ ಯಾದಗಿರಿ ನಗರದ ಶಿವಸಾಯಿ ಸ್ಕ್ಯಾನ್ ಸೆಂಟರ್‌ಗೆ ಕರೆದುಕೊಂಡು ಹೋಗಿದ್ದ. ಸ್ಕ್ಯಾನ್ ಸೆಂಟರ್‌ನಲ್ಲಿ ಕೆಲಸ ಮಾಡುತ್ತಿದ್ದ ಸುರೇಶ್, ನಾನ್ಯಾ ನಾಯಕನ ಹೆಂಡತಿಯನ್ನು 15 ನಿಮಿಷಗಳ ಕಾಲ ತಪಾಸಣೆ ಮಾಡಿದ್ದಾನೆ. ಇದರಿಂದ ನಾಯಕ್ ತನ್ನ ಹೆಂಡತಿ ಇಷ್ಟು ಸಮಯ ಒಳಗಡೆ ಇರುವುದಕ್ಕೆ ಸುರೇಶ್‌ನ ಮೇಲೆ ಸಂಶಯ ಪಟ್ಟಿದ್ದಾನೆ. ಇದೇ ಕಾರಣಕ್ಕೆ ಸುರೇಶ್‌ನನ್ನು ಕೊಲ್ಲಲು ಕಳೆದ 8 ತಿಂಗಳಿಂದ ಹೊಂಚುಹಾಕಿ ಕಾಯುತ್ತಿದ್ದ.

ಹೀಗಾಗಿ ನಾನ್ಯಾ ನಾಯಕ್ ಬೆಂಗಳೂರಿನಲ್ಲಿದ್ದ ತನ್ನ ಪರಿಚಯಸ್ಥನಿಗೆ ಸ್ಕ್ಯಾನ್ ಸೆಂಟರ್‌ನಲ್ಲಿ ಕೆಲಸ ಮಾಡುವ ಸುರೇಶ್‌ನ ಹತ್ಯೆಗೆ 50 ಸಾವಿರ ರೂ. ಹಾಗೂ ಬಂಗಾರದ ಉಂಗುರ ನೀಡಿದ್ದ. ಅದರಂತೆ ಸುಪಾರಿ ಪಡೆದಿದ್ದಾತ ಪುಣೆಯಲ್ಲಿ ಕಂಟ್ರಿ ಪಿಸ್ತೂಲ್, ಚಾಕು, ಪಂಚ್ ಖರೀದಿಸಿ ಸುರೇಶ್‌ನನ್ನು ಹತ್ಯೆ ಮಾಡಲು ಏಪ್ರಿಲ್ 20ರಂದು ಯಾದಗಿರಿ ನಗರದ ಲಾಡ್ಜ್ ಒಂದರಲ್ಲಿ ಹೊಂಚು ಹಾಕಿ ಕುಳಿತಿದ್ದ.

ಚುನಾವಣೆ ಹಿನ್ನೆಲೆ ಯಾದಗಿರಿ ಗ್ರಾಮೀಣ ಠಾಣೆ ಪಿಎಸ್‌ಐ ದೇವೇಂದ್ರ ರೆಡ್ಡಿ ಹಾಗೂ ಸಿಬ್ಬಂದಿ  ರಾತ್ರಿ ವೇಳೆ ಗಸ್ತು ತಿರುಗುತ್ತಿದ್ದಾಗ ಸಂಶಯಾಸ್ಪದವಾಗಿ ಓಡಾಡುತ್ತಿದ್ದ ಬೆಂಗಳೂರಿನ ವ್ಯಕ್ತಿಯನ್ನು ಗಮನಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ಆ ವೇಳೆ ಆತ ತೊದಲುತ್ತಿದ್ದ. ಹೀಗಾಗಿ ಸಂಶಯಗೊಂಡ  ಪಿಎಸ್‌ಐ ಆತ ಉಳಿದುಕೊಂಡಿದ್ದ ಲಾಡ್ಜ್‌ಗೆ ತೆರಳಿ ತಪಾಸಣೆ ನಡೆಸಿದ್ದಾರೆ.

ರೂಮ್‌ನಲ್ಲಿ ಕಂಟ್ರಿ ಪಿಸ್ತೂಲ್, 3 ಜೀವಂತ ಗುಂಡುಗಳು, ಬಟನ್ ಚಾಕು, ಪಂಚ್ ಪತ್ತೆಯಾಗಿವೆ.  ಅದನ್ನು ವಶಪಡಿಸಿಕೊಂಡು ಆತನನ್ನು ತೀವ್ರ ವಿಚಾರಣೆಗೆ ಒಳಪಡಿಸಿದಾಗ ಹತ್ಯೆಗೆ ಸುಪಾರಿ ನೀಡಿರುವ ವಿಷಯ ಬೆಳಕಿಗೆ ಬಂದಿದೆ. ನಂತರ ಸುಪಾರಿ ನೀಡಿದ ನಾನ್ಯಾ ನಾಯಕ್‌ನನ್ನು ಹಾಗೂ ಹತ್ಯೆಗೆ ಸುಪಾರಿ ಪಡೆದವನನ್ನು ಬಂಧಿಸಿ ಜೈಲಿಗೆ ಅಟ್ಟಿದ್ದಾರೆ.

ಯಾದಗಿರಿ ವಿಭಾಗದ ಡಿವೈಎಸ್‌ಪಿ ಬಸವೇಶ್ವರ, ನಗರ ಠಾಣೆ ಸಿಪಿಐ ಸುನೀಲ್ ಮೂಲಿಮನಿ, ಪಿಎಸ್‌ಐ ದೇವೇಂದ್ರ ರೆಡ್ಡಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ ತಂಡಕ್ಕೆ ಯಾದಗಿರಿ ಎಸ್‌ಪಿ ಡಾ. ಸಿ.ಬಿ. ವೇದಮೂರ್ತಿ ಮೆಚ್ಚುಗೆ ವ್ಯಕ್ತಪಡಿಸಿ ಬಹುಮಾನ ಘೋಷಿಸಿದ್ದಾರೆ.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್