ಸಂಸ್ಕೃತಿ

ಸಕಲ ಸರ್ಕಾರಿ ಗೌರವಗಳೊಂದಿಗೆ ನಾಡೋಜ ಪಾಪು ಅವರ ಅಂತ್ಯಕ್ರಿಯೆ

ವಿಜಯಪಥ ಸಮಗ್ರ ಸುದ್ದಿ

ಹಾವೇರಿ:  ನಾಡೋಜ ಡಾ. ಪಾಟೀಲ ಪುಟ್ಟಪ್ಪ ಅವರ ಅಂತ್ಯಕ್ರಿಯೆ ಹಾವೇರಿ ಜಿಲ್ಲೆಯ ಹಲಗೇರಿ ಗ್ರಾಮದಲ್ಲಿ  ಸಕಲ ಸರ್ಕಾರಿ ಗೌರವಗಳೊಂದಿಗೆ ಮಂಗಳವಾರ ಜರುಗಿತು.

ರಾಣೆಬೆನ್ನೂರ ತಾಲೂಕಿನ ಸ್ವಗ್ರಾಮ ಹಲಗೇರಿಯಲ್ಲಿರುವ ಅವರ ಪಿತ್ರಾರ್ಜಿತ ಜಮೀನಿನಲ್ಲಿ ಧಾರ್ಮಿಕ ವಿದಿವಿಧಾನಗಳೊಂದಿಗೆ  ಶ್ರದ್ಧಾಪೂರ್ವಕವಾಗಿ ನೆರವೇರಿಸಲಾಯಿತು.

ಸಕಲ ಸರ್ಕಾರಿ ಗೌರವಗಳೊಂದಿಗೆ ಪೊಲೀಸ್ ಬ್ಯಾಂಡ್‍ನಲ್ಲಿ ರಾಷ್ಟ್ರಗೀತೆ ನುಡಿಸಿ, ಪಾರ್ಥಿವ ಶರೀರಕ್ಕೆ ರಾಷ್ಟ್ರಧ್ವಜ ಹೊದಿಸಿ ಪೊಲೀಸ್ ಗೌರವ ರಕ್ಷೆಯೊಂದಿಗೆ ಮೂರು ಸುತ್ತು ಕುಶಾಲತೋಪುಗಳನ್ನು ಹಾರಿಸುವುದರ ಮೂಲಕ ಅಗಲಿದ ಪಾಪು ಅವರ ಆತ್ಮಕ್ಕೆ ಗೌರವ ನಮನ ಸಲ್ಲಿಸಲಾಯಿತು.

ಇದೇ ಸಂದರ್ಭದಲ್ಲಿ ಕುಟುಂಬದ ಸದಸ್ಯರೊಂದಿಗೆ ವಿವಿಧ ಮಠಾಧೀಶರು, ಬಸವ ವಚನಗಳ ಪಠಣದ ಮೂಲಕ ವೀರಶೈವ ಧಾರ್ಮಿಕ ವಿದಿವಿಧಾನಗಳೊಂದಿಗೆ ಅಂತ್ಯಕ್ರಿಯೆ ಪೂರ್ಣಗೊಳಿಸಿದರು.

ಸೋಮವಾರ ರಾತ್ರಿ ಬಹುಅಂಗಾಂಗ ವೈಪಲ್ಯದಿಂದ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದ ಡಾ.ಪಾಟೀಲ ಪುಟ್ಟಪ್ಪ ಅವರ ಪಾರ್ಥಿವ ಶರೀರವನ್ನು ಹುಬ್ಬಳ್ಳಿ ಹಾಗೂ ಧಾರವಾಡದಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ತರುವಾಯು ಕುಟುಂಬದವರ ಅಭಿಲಾಷೆಯಂತೆ ಸ್ವಗ್ರಾಮ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕು ಹಲಗೇರಿ ಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಿಸುವ ಮಾರ್ಗದಲ್ಲಿ ಶಿಗ್ಗಾಂವ, ಹಾವೇರಿ, ರಾಣೇಬೆನ್ನೂರು ಹಾಗೂ ಸ್ವ ಗ್ರಾಮ ಹಲಗೇರಿಯಲ್ಲಿ ಸಾರ್ವಜನಿಕ ದರ್ಶನದೊಂದಿಗೆ ಗೌರವ ನಮನ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು.

ಅಂತಿಮವಾಗಿ ಹಲಗೇರಿ ಗ್ರಾಮದ ದೊಡ್ಡಜೆಟ್ಟೆಪ್ಪನವರ ಸಭಾಭವನದಿಂದ ಗ್ರಾಮದ ಹೊರವಲಯದ ಅಡಿಕೆ ತೋಟದವರೆಗೂ ಪಾರ್ಥಿವ ಶರೀರದ ಅಂತಿಮ ಯಾತ್ರೆ ನಡೆಸಲಾಯಿತು. ಸಕಲ ಗೌರವಗಳೊಂದಿಗೆ ಪಿತ್ರಾರ್ಜಿತ ಜಮೀನಿನಲ್ಲಿ ವೀರಶೈವ ಸಂಪ್ರದಾಯದಂತೆ ಪಾಪು ಅವರ ಶರೀರವನ್ನು ಮಣ್ಣಿನಲ್ಲಿ ಹೂಳಲಾಯಿತು.

Leave a Reply

error: Content is protected !!
LATEST
ಭ್ರಷ್ಟಾಚಾರ, ಕಮಿಷನ್‌ ದಂಧೆ ನಿಲ್ಲಿಸಿದರೆ ಗ್ಯಾರಂಟಿ ಯೋಜನೆಗಳಿಗೂ ಕೊಟ್ಟು ಹಣ ಉಳಿಯುತ್ತದೆ : ಎಎಪಿ ಜೂ.24ರಂದು ಶಿವಮೊಗ್ಗದಲ್ಲಿ ರಾಷ್ಟ್ರ, ರಾಜ್ಯ ರೈತ ಮುಖಂಡರ ಸಮಾವೇಶ: ಕುರುಬೂರ್ ಶಾಂತಕುಮಾರ್ ಸಂತ್ರಸ್ತೆ ಅಪರಹರಣ ಪ್ರಕರಣ: ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ಮಂಜೂರು KSRTCಯಿಂದ 300ಕ್ಕೂ ಹೆಚ್ಚು ಹೊಸ ಮಾರ್ಗಗಳಲ್ಲಿ ಬಸ್‌ ಓಡಾಟ: ಸಚಿವ ರಾಮಲಿಂಗಾರೆಡ್ಡಿ BMTC: 50ಕ್ಕೂ ಹೆಚ್ಚು ಎಲೆಕ್ಟ್ರಿಕ್ ಬಸ್​​ಗಳ ಚಾಲಕರಿಗೆ ಗೇಟ್‌ಪಾಸ್‌ ಅತ್ಯಾಚಾರ ಆರೋಪಿ ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣನ ಎಸ್‌ಐಟಿ ಕಸ್ಟಡಿ ಅಂತ್ಯ ಪೆಟ್ರೋಲ್‌, ಡೀಸೆಲ್‌ ದರ ಏರಿಕೆ ವಿರೋಧಿಸಿ ನಾಳೆ ರಾಜ್ಯಾದ್ಯಂತ ಎಎಪಿ ಪ್ರತಿಭಟನೆ ನಟ ದರ್ಶನ್‌ ಸ್ಥಿತಿಗೆ ಮರುಗಿ ಅಭಿಮಾನಿ ಅನ್ನನೀರು ಬಿಟ್ಟು ಆತ್ಮಹತ್ಯೆಗೆ ಶರಣು? KSRTC ‘ಅಶ್ವಮೇಧ’ಗಳಿಂದ ಸಂಸ್ಥೆಗೆ ಶೇ.10ಕ್ಕೂ ಹೆಚ್ಚು ಲಾಭ : ಸಚಿವ ರಾಮಲಿಂಗಾರೆಡ್ಡಿ ಅತೀ ಶೀಘ್ರದಲ್ಲೇ NWKRTC ಒಡಲು ಸೇರಲಿವೆ 350 ಹೊಸ ಎಲೆಕ್ಟ್ರಿಕ್​ ಬಸ್‌ಗಳು