NEWSನಮ್ಮಜಿಲ್ಲೆ

ಸಂಕಷ್ಟದ ಸಮಯದಲ್ಲಿ ಆರೋಗ್ಯ ಕಾರ್ಯಕರ್ತರ ಸೇವೆ ಶ್ಲಾಘನೀಯ: ನಿತಿನ್ ವೆಂಕಟೇಶ್

ವಿಜಯಪಥ ಸಮಗ್ರ ಸುದ್ದಿ

ಪಿರಿಯಾಪಟ್ಟಣ: ತಾಲೂಕಿನ ಬೆಟ್ಟದಪುರದ ಜಯಮ್ಮ ಚಂದ್ರಶೇಖರ್ ಕನ್ವೆನ್ಷನ್ ಹಾಲ್ ನಲ್ಲಿ ಬೆಟ್ಟದಪುರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕೊರೊನಾ ವಾರಿಯರ್ಸ್ ಗಳಿಗೆ ಅಭಿನಂದನಾ ಸಮಾರಂಭ ನಡೆಯಿತು.

ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡ ನಿತಿನ್ ವೆಂಕಟೇಶ್ ಮಾತನಾಡಿ ಇಡೀ ವಿಶ್ವವೇ ಕೊರೊನಾ ಎಂಬ ಮಹಾಮಾರಿಗೆ ಸಿಲುಕಿ ಜನತೆ ಆತಂಕದಲ್ಲಿ ಬದುಕುವಂತೆ ಮಾಡಿದೆ. ಇಂಥ ಕಷ್ಟದ ಸಮಯದಲ್ಲಿ ಜನರ ಆರೋಗ್ಯವನ್ನು ಕಾಪಾಡಲು ತಿಂಗಳುಗಟ್ಟಲೆ ಯಾವುದೇ ರಜೆಗಳನ್ನು ತೆಗೆದುಕೊಳ್ಳದೆ ಹಗಲಿರುಳು ಶ್ರಮಿಸುತ್ತ ಆರೋಗ್ಯ ಸೇವೆ ನೀಡುತ್ತಾ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ವೈದ್ಯರು, ಶುಶ್ರೂಷಕಿಯರು, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತರು, ಸಿಬ್ಬಂದಿಗಳು ಇವರ ಸೇವೆಯನ್ನು ಪ್ರಶಂಸಿ ಅವರಿಗೆ ಸ್ಫೂರ್ತಿ ತುಂಬುವ ಕೆಲಸಕ್ಕಾಗಿ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದರು.

ಕೊರೊನಾ ಸಂಕಷ್ಟ ಸಮಯದಲ್ಲಿ ವೈದ್ಯರು ಭಯಭೀತರಾಗದೆ ಸೋಂಕಿತ ವ್ಯಕ್ತಿಗಳಿಗೆ ಚಿಕಿತ್ಸೆ ನೀಡುವ ಮೂಲಕ ಜೀವದ ಹಂಗು ತೊರೆದು ಸೇವೆ ಮಾಡಿರುವುದು ಶ್ಲಾಘನೀಯ ಎಂದರು.

ಜಿಲ್ಲಾ ಕಾಂಗ್ರೆಸ್ ಗ್ರಾಮಾಂತರ ಘಟಕದ ಅಧ್ಯಕ್ಷ ವಿಜಯ್ ಕುಮಾರ್ ಮಾತನಾಡಿ, ಕಾಂಗ್ರೆಸ್ ಪಕ್ಷದ ಶಾಸಕರು, ಮುಖಂಡರು ಮೈಸೂರು ಜಿಲ್ಲೆಯಲ್ಲಿ 1.5 ಕೋಟಿ ರೂ.ಗಳ ವೆಚ್ಚದಲ್ಲಿ ಔಷಧ ಕಿಟ್ ವಿತರಣೆ ಮಾಡಿದ್ದಾರೆ. ಅಲ್ಲದೆ ಒಂದು ಲಕ್ಷ ಜನಗಳಿಗೆ ಜೀವವಿಮೆ ಕೊಡಿಸಿದ್ದಾರೆ. ಇಂಥ ಸಂದರ್ಭಗಳಲ್ಲಿ ಶ್ರೀಮಂತವರ್ಗ ಸಮಾಜವನ್ನು ಸಾಮಾಜಿಕ ಜವಾಬ್ದಾರಿಯಿಂದ ಕಾಯುವ ಹಾಗೂ ನೈತಿಕ ಕರ್ತವ್ಯವನ್ನು ನಿಭಾಯಿಸುವಲ್ಲಿ ದೇಶದ ಪ್ರತಿಯೊಬ್ಬ ನಾಗರಿಕನ ಕರ್ತವ್ಯ ಎಂದರು.

ತಾಲೂಕು ಆರೋಗ್ಯಾಧಿಕಾರಿ ಡಾ.ಶರತ್ ಬಾಬು ಮಾತನಾಡಿ, ಇಡೀ ರಾಜ್ಯದಲ್ಲಿ ಪಿರಿಯಾಪಟ್ಟಣ ತಾಲೂಕು ಹಾಟ್ ಸ್ಪಾಟ್ ಆಗಿದೆ. ಅದನ್ನು ನಿಯಂತ್ರಣಕ್ಕೆ ತರಲು ನಮ್ಮ ಸಿಬ್ಬಂದಿ ಹಗಲಿರುಳೆನ್ನದೆ ಸಾಕಷ್ಟು ಪರಿಶ್ರಮ ಪಡುತ್ತಿದ್ದಾರೆ. ಇದಕ್ಕೆ ಸಾರ್ವಜನಿಕರ ಸಹಕಾರವೂ ಅತ್ಯಮೂಲ್ಯವಾದದ್ದು ಸರ್ಕಾರದ ಮಾರ್ಗಸೂಚಿಯನ್ನು ಪಾಲಿಸಿ ಆರೋಗ್ಯ ಇಲಾಖೆಯೊಂದಿಗೆ ಸಹಕರಿಸಿದರೆ ಇದನ್ನು ಹತೋಟಿಗೆ ತರಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಡಿ.ಟಿ.ಸ್ವಾಮಿ, ರಹಮತ್ ಜಾನ್ ಬಾಬು, ಮಹಿಳಾ ಅಧ್ಯಕ್ಷರಾದ ಮುತ್ತುರಾಣಿ, ಸರಸ್ವತಿ, ಮುಖಂಡರಾದ ಜೆ.ಮೋಹನ್, ಸೀಗೂರು ವಿಜಯಕುಮಾರ್, ಬೆಟ್ಟದತುಂಗ ಕೃಷ್ಣೇಗೌಡ, ಕರಡಿಪುರಕುಮಾರ್, ರವಿಕುಮಾರ್, ಕಣಗಾಲ್ ರಮೇಶ್, ಸುಳುಗೋಡು ಶಿವರಾಜು, ಪುಟ್ಟರಾಜು, ಭೀಮ ಬೆಟ್ಟದಪುರ, ಭುವನಹಳ್ಳಿ, ಸಂಗರಶೆಟ್ಟಿಹಳ್ಳಿ, ಚಿಕ್ಕನೇರಳೆ, ಚಪ್ಪರದಹಳ್ಳಿ, ಬೆಟ್ಟದ ತುಂಗ, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು, ಸಿಬ್ಬಂದಿಗಳಿಳು, ಆಶಾ ಕಾರ್ಯಕರ್ತರು ಅಂಗನವಾಡಿ ಕಾರ್ಯಕರ್ತರು ಇದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು