NEWSದೇಶ-ವಿದೇಶ

ಸಣ್ಣ ಮಧ್ಯಮ ಕೈಗಾರಿಕೆಗಳಿಗೆ ಭರಪೂರ ಕೊಡುಗೆ ನೀಡಿದ ಕೇಂದ್ರ ಸರ್ಕಾರ

ತೆರಿಗೆದಾರರು, ಗುತ್ತಿಗೆದಾರರು, ಉದ್ಯಮಿಗಳಿಗೂ ಹರ್ಷತಂದ ವಿತ್ತ ಸಚಿವರ ಸುದ್ದಿಗೋಷ್ಠಿ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ:  ಕೋವಿಡ್ ಸೋಂಕು ತಡೆಯುವ ಸಂಬಂಧ ಲಾಕ್ ಡೌನ್ ಜಾರಿಯಲ್ಲಿದ್ದ ಪರಿಣಾಮ ಆರ್ಥಿಕ ಚಟುವಟಿಕೆ ಸ್ಥಗಿತಗೊಂಡಿತ್ತು. ಈ ಹಿನ್ನೆಲೆಯಲ್ಲಿ ಆರ್ಥಿಕ ಚೇತರಿಕಾಗಿ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ 20 ಲಕ್ಷ ಕೋಟಿ ರೂಪಾಯಿ ಪ್ಯಾಕೇಜ್ ಘೋಷಿಸಿದ್ದು, ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ವಿವರಣೆ ನೀಡಿದ್ದಾರೆ.

ಸ್ವಾವಲಂಬಿ ಭಾರತವನ್ನು ಮಾಡುವ ದೃಷ್ಟಿಯಿಂದ ಕೇಂದ್ರ ಸರ್ಕಾರ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಹಣದ ಹೊಳೆಯನ್ನೇ ಹರಿಸಲು ಯೋಜನೆ ರೂಪಿಸಿದ್ದು, ಈ ಮೂಲಕ ಸಣ್ಣ ಕೈಗಾರಿಕೆಗಳನ್ನು ಉತ್ತೇಜನಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಈ ಹಿನ್ನೆಲೆಯಲ್ಲಿ ಇಂದು ಸಂಜೆ 4 ಗಂಟೆಗೆ ಸುದ್ದಿಗೋಷ್ಠಿ ನಡೆಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಎಂಎಸ್‌ಎಂಇ ಅಂಡರ್‌ನಲ್ಲಿ ಬರುವ 2 ಲಕ್ಷ ಕೈಗಾರಿಕೆಗಳಿಗೆ ಸಾಲ ಸೌಲಭ್ಯ ನೀಡುತ್ತಿದೆ. ಅಷ್ಟೇ ಅಲ್ಲದೇ ಸಾಲವನ್ನು ಒಂದು ವರ್ಷದ ವರೆಗೆ ಕಟ್ಟದಿರುವಂತೆ ತಿಳಿಸಿದೆ.

ಇನ್ನು  25 ಕೋಟಿ ರೂ. ಬಾಕಿ ಸಾಲ ಇರುವ ಸಣ್ಣ ಕೈಗಾರಿಕೆಗಳ 3 ಲಕ್ಷ ಕೋಟಿ ರೂ. ಕಾಯ್ದಿರಿಸಿದೆ. ಇಂದಿನಿಂದಲೇ 4 ವರ್ಷದ ಅವಧಿ ಸಾಲ ಪಡೆಯ ಬಹುದಾಗಿದೆ. ಜತೆಗೆ ಅಕ್ಟೋಬರ್‌ 31ರವರೆಗೂ ಸಾಲ ಸೌಲಭ್ಯ ಪಡೆಯಲು ಅನುಕೂಲ ಕಲ್ಪಿಸಿದೆ. ಸಾಲ ಪಡೆಯಲು ಯಾವುದೇ ಗ್ಯಾರಂಟಿ ಬೇಕಿಲ್ಲ. ಅದಕ್ಕೆ ಸರ್ಕಾರದಿಂದಲೇ ಗ್ಯಾರಂಟಿ ಯೋಜನೆ ರೂಪಿಸಿದೆ. ಎಂದು ವಿವರಿಸಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

100 ಕೋಟಿ ರೂ. ವ್ಯವಹಾರದ ಸಣ್ಣ ಕೈಗಾರಿಕೆಗಳಿಗೆ ಹೆಚ್ಚಿನ ಲಾಭ ತಂದು ಕೊಡುವ ನೀಟ್ಟಿನಲ್ಲೂ ಯೋಜನೆ ರೂಪಿಸಿದ್ದು ಈ ಸೌಲಭ್ಯವನ್ನು ಫಲಾನುಭವಿಗಳಿಗೆ ನೇರವಾಗಿ ನೀಡಲಾಗುವುದು ಎಂದು ತಿಳಿಸಿದರು.

ಸ್ವಾವಲಬಿ ಭಾರತಕ್ಕಾಗಿ ವಿಶೇಷ ಪ್ಯಾಕೇಜ್‌ ನೀಡಿದ್ದು. ತೆರಿಗೆ ಪಾವತಿದಾರರಿಗೆ  18 ಕೋಟಿ ರೂ. ರೀಫಂಡ್‌ ಮಾಡಲಿದೆ. ಸಣ್ಣ ಕೈಗಾರಿಕೆಗಳಿಗೆ 20 ಸಾವಿರ ಕೋಟಿ ರೂ. ಸಾಲ ನೀಡಲಿದೆ ಎಂದು ಸಚಿವರು ವಿವರಿಸಿದರು.

ಬ್ಯಾಂಕೇತರ ಹಣಕಾಸು ಸಂಸ್ಥೆಗಳಿಗೆ 30 ಸಾವಿರ ಕೋಟಿ ನೆರವು. 45 ಸಾವಿರ ಕೋಟಿ ಸಾಲ ಸೌಲಭ್ಯ ನೀಡಲಾಗುವುದು. ಇನ್ನು ಕಂಪನಿಗಳಲ್ಲಿ ಕೆಲಸ ಮಾಡುತ್ತಿರುವ 72 ಲಕ್ಷ ನೌಕರರಿಗೆ  ಜೂನ್‌ ಜುಲೈ ಮತ್ತು ಆಗಸ್ಟ್ ನಲ್ಲಿನ‌ ಇಪಿಎಫ್‌ ನ 2500 ಕೋಟಿ ಹಣವನ್ನು ಸರ್ಕಾರವೇ ಭರಿಸಲಿದೆ. ವಿದ್ಯುತ್‌ ಕಂಪನಿಗಳಿಗೆ 90 ಸಾವಿರ ಕೋಟಿ ರೂ. ನೆರವು ನೀಡಲಾಗುದು ಎಂದು ತಿಳಿಸಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಕಿರು, ಸಣ್ಣ ಮತ್ತು ಮಧ್ಯ ಕೈಗಾರಿಕಾ ವಲಯಗಳಿಗೆ ಮೂರು ಲಕ್ಷ ಕೋಟಿ ಸಾಲ ನೀಡಲಾಗುವುದು ಎಂದು ತಿಳಿಸಿದ್ದಾರೆ. ಕಂಪನಿ ಮತ್ತು ವ್ಯವಹಾರಗಳಿಗೆ ಹೆಚ್ಚಿನ ಉತ್ತೇಜನ ನೀಡಲಾಗುವುದು.

ಸಣ್ಣ ಸಾಲ ನೀಡುವ ಕಂಪನಿಗಳಿಗೆ ಕೇಂದ್ರದಿಂದ ನೆರವು, ಇದುವರೆಗೆ 52 ಸಾವಿರ ಕೋಟಿ ರೂಪಾಯಿ ಜನ್ ಧನ್ ಖಾತೆಗಳಿಗೆ ವರ್ಗಾಯಿಸಿದ್ದೇವೆ.

ಟಿಡಿಎಸ್/ಟಿಸಿಎಸ್ ನ ಶೇ.25ರಷ್ಟು ತೆರಿಗೆ ಕಡಿತ. ಇದರಿಂದ ತೆರಿಗೆ ಪಾವತಿದಾರರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. 2019-20ನೇ ಸಾಲಿನ ಆದಾಯ ತೆರಿಗೆ ಪಾವತಿ ದಿನಾಂಕವನ್ನು ಜುಲೈ 31ರಿಂದ ಅಕ್ಟೋಬರ್, ನವೆಂಬರ್ 30ರವರೆಗೆ ವಿಸ್ತರಣೆ. ಮೇ 14ರಿಂದ 2021ರ ಮಾರ್ಚ್ 31ರವರೆಗಿನ ಟಿಡಿಎಸ್ ಮತ್ತು ಟಿಸಿಎಸ್ ಮೇಲಿನ ಶೇ.25ರಷ್ಟು ತೆರಿಗೆ ಕಡಿತ ಮಾಡಲಾಗಿದ್ದು, ಇದು ಎಲ್ಲಾ ತೆರಿಗೆದಾರರಿಗೂ ಅನ್ವಯವಾಗಲಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಭವಿಷ್ಯ ನಿಧಿ ಖಾತೆಗಳಿಗೆ ಸಲ್ಲಿಸುವಂತಹ ಕೊಡುಗೆ
ಉದ್ಯೋಗಿಗಳ ಭವಿಷ್ಯ ನಿಧಿ ಖಾತೆಗೆ ಉದ್ಯೋಗಿಗಳ ಪಾಲು ಹಾಗೂ ಉದ್ಯೋಗದಾತರ ಪಾಲು ತಲಾ 12% ಸಲ್ಲಿಕೆಯಾಗುತ್ತಿದೆ. ಆದರೆ ಇನ್ನು ಮುಂದಿನ ಮೂರು ತಿಂಗಳು ಈ ಪಾಲನ್ನು ಶೇ. 10ಕ್ಕೆ ಇಳಿಕೆ ಮಾಡಲಾಗಿದೆ. ಈ ಮೂಲಕ ಉದ್ಯೋಗಿಗಳಿಗೆ ಕೈಗೆ ಸಿಗುವ ವೇತನದ ಹಣದಲ್ಲಿ ಸ್ವಲ್ಪ ಹೆಚ್ಚಳವಾಗಲಿದ್ದು ಇದರಿಂದ ಹಣದ ಚಲಾವಣೆ ಹೆಚ್ಚಾಗಲಿದೆ ಎಂಬುದು ಸರಕಾರದ ಲೆಕ್ಕಾಚಾರವಾಗಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಈ ಮೂಲಕ ಉದ್ಯಮಿಗಳಿಗೆ ಹಾಗೂ ಉದ್ಯೋಗಿಗಳಿಗೆ ಮುಂದಿನ ಮೂರು ತಿಂಗಳುಗಳ ಕಾಲ ಭವಿಷ್ಯ ನಿಧಿ ಖಾತೆಗೆ ಜಮಾ ಮಾಡುವ ಮೊತ್ತವನ್ನು ತಲಾ 2% ಕಡಿಮೆಗೊಳಿಸುವ ಮೂಲಕ ಮಾರುಕಟ್ಟೆಗೆ ಸರಿಸುಮಾರು 6750 ಕೋಟಿ ರೂಪಾಯಿಗಳ ಹಣದ ಹರಿವು ಉಂಟಾಗುವಲ್ಲಿ ಸಹಕಾರಿಯಾಗುವುದು ಎಂದು ವಿತ್ತಸಚಿವರು ಅಭಿಪ್ರಾಯಪಟ್ಟಿದ್ದಾರೆ.

ಆದರೆ ಕೇಂದ್ರದ ನಿಯಂತ್ರಣದಲ್ಲಿರುವ ಸಾರ್ವಜನಿಕ ರಂಗದ ಉದ್ದಿಮೆಗಳು ಹಾಗೂ ರಾಜ್ಯ ಸರಕಾರದ ಅಡಿಯಲ್ಲಿ ಬರುವ ಸಾರ್ವಜನಿಕ ರಂಗದ ಉದ್ಯಮಗಳು ತಮ್ಮ ಉದ್ಯೋಗಿಗಳ ಪಿ.ಎಫ್. ಖಾತೆಗೆ ಯಥಾಪ್ರಕಾರ 12% ಪಾಲನ್ನು ಜಮಾ ಮಾಡಲಿವೆ.

ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಪ್ಯಾಕೇಜ್ ನಡಿಯಲ್ಲಿ ಶೇ.24 ಭವಿಷ್ಯನಿಧಿ ಬೆಂಬಲಕ್ಕೊಳಪಡದ ಉದ್ಯೋಗಿಗಳಿಗೆಲ್ಲಾ ಈ ಸೌಲಭ್ಯ ಅನ್ವಯಿಸಲಿದೆ. ಇದರಿಂದಾಗಿ ಇಪಿಎಫ್ಒನಡಿಯಲ್ಲಿ ಬರುವ 6.5 ಲಕ್ಷ ಉದ್ಯಮಗಳಿಗೆ ಹಾಗೂ 4.3 ಕೋಟಿ ಉದ್ಯೋಗಿಗಳಿಗೆ ಪ್ರಯೋಜನ ಲಭಿಸಲಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಬಜೆಟ್‌ನಲ್ಲಿ ನಿಮಗೆ ಸಿಹಿ ಸುದ್ದಿ ಇದೆ: KSRTC ಅಧಿಕಾರಿಗಳಿಗೆ ಸಾರಿಗೆ ಸಚಿವರ ಭರವಸೆ KSRTC ಬಸ್‌-ಬೈಕ್ ನಡುವೆ ಅಪಘಾತ: ಸ್ಥಳದಲ್ಲೇ ಇಬ್ಬರ ಸಾವು ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್...