NEWSನಮ್ಮಜಿಲ್ಲೆಸಂಸ್ಕೃತಿ

ಸಪ್ತಪದಿ-ಸರಳ ಸಾಮೂಹಿಕ ವಿವಾಹ ಮುಂದೂಡಿಕೆ

ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಪ್ರಥಮ ಹಂತದ ಸಾಮೂಹಿಕ ವಿವಾಹ ಕಾರ್ಯಕ್ರಮ ಏಪ್ರಿಲ್ 26 ರಂದು ನಡೆಯಬೇಕಿತ್ತು ಆದರೆ ಕೊರೊನಾ ಸೋಂಕಿನಿಂದ ವಿವಾಹವನ್ನು ಮುಂದೂಡಲಾಗಿದೆ ಎಂದು ಮುಜರಾಯಿ, ಮೀನುಗಾರಿಕೆ ಬಂದರು ಮತ್ತು ಒಳನಾಡು ಖಾತೆ ಸಚಿವ  ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಕರ್ನಾಟಕ ಸರ್ಕಾರದ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಮಹತ್ವಕಾಂಕ್ಷೆಯ ಯೋಜನೆಯಾದ ಸಪ್ತಪದಿ ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ 100 ಕ್ಕೂ ಹೆಚ್ಚು ಎ ದರ್ಜೆಯ ದೇವಸ್ಥಾನ ಮತ್ತು ಇತರ ಆಯ್ದ ಇಲಾಖೆಯ ದೇವಸ್ಥಾನಗಳಲ್ಲಿ 4500ಕ್ಕೂ ಹೆಚ್ಚು ಅರ್ಜಿಗಳನ್ನು ಫಲಾನುಭವಿಗಳು ಪಡೆದಿದ್ದು ಸುಮಾರು 2000 ಅರ್ಜಿಗಳು ಅಧಿಕೃತ ದಾಖಲೆಗಳೊಂದಿಗೆ ವಾಪಸ್‌ ಬಂದಿವೆ ಎಂದು ತಿಳಿಸಿದ್ದಾರೆ.

ವಿವಾಹ ಸಂಬಂಧ ಈಗಾಗಲೇ 10 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ವಿಚಾರ ಸಂಕೀರ್ಣದ ಸಭೆಗಳು ನಡೆದಿದ್ದು, ರಾಜ್ಯಾದ್ಯಂತ ಸಪ್ತಪದಿ ರಥಗಳು ಕಾರ್ಯಕ್ರಮದ ಕುರಿತು ಪ್ರಚಾರವನ್ನು ಮಾಡಲಾಗಿತ್ತು ಎಂದು ತಿಳಿಸಿದ್ದಾರೆ.

ಸಾಕಷ್ಟು ಪೂರ್ವ ಸಿದ್ದತೆಗಳೊಂದಿಗೆ ವಿವಾಹ ನೆರವೇರಿಸಲು ಇಲಾಖೆ ಸಜ್ಜುಗೊಂಡಿತ್ತು. ಆದರೆ ಕೋವಿಡ್ -19 ನ ಸಮಸ್ಯೆಯ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಯಲ್ಲಿ ಸಿಎಂಬಿ.ಎಸ್‌. ಯಡಿಯೂರಪ್ಪ ಅವರ ಜತೆ ಚರ್ಚಿಸಿದ ನಂತರ ಏಪ್ರಿಲ್ 26 ರಂದು ನಡೆಯಬೇಕಿದ್ದ ಕಾರ್ಯಕ್ರಮವನ್ನು ಮುಂದೂಡಲು ಅನುಮತಿ ನೀಡಿದ್ದಾರೆ ಎಂದು ತಿಳಿಸಿದರು.

ಎರಡನೇ ಹಂತದ ದಿನಾಂಕಕ್ಕೆ ಜೋಡಿಸಿಕೊಳ್ಳುವ ಕುರಿತು ನಿರ್ಣಯಿಸಿ ಮುಂದೂಡಿದ ದಿನಾಂಕವನ್ನು ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುವುದೆಂದು ತಿಳಿಸಿದ್ದಾರೆ.

 

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ