NEWSನಮ್ಮಜಿಲ್ಲೆನಮ್ಮರಾಜ್ಯ

ಸಾರಿಗೆ ನೌಕರರ ಉಪವಾಸ ಸತ್ಯಾಗ್ರಹಕ್ಕೆ ಐಪಿಎಸ್‌ ಮಾಜಿ ಅಧಿಕಾರಿ ಭಾಸ್ಕರ್‌ ರಾವ್‌ ಎಂಟ್ರಿ..!

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೆಳಗಾವಿಯ ಸುವರ್ಣಸೌಧದ ಮುಂದೆ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಳೆದ 6 ದಿನಗಳಿಂದ ಸಾರಿಗೆ ನೌಕರರು ನಡೆಸುತ್ತಿರುವ ಅಮರಣಾಂತ ಉಪವಾಸ ಸತ್ಯಾಗ್ರಹಕ್ಕೆ ಐಪಿಎಸ್‌ ಮಾಜಿ ಅಧಿಕಾರಿ ಭಾಸ್ಕರ್‌ ರಾವ್‌ ಅವರು ಗ್ರ್ಯಾಂಡ್‌ ಎಂಟ್ರಿ ಕೊಡಲಿದ್ದಾರೆ.

ಕಳೆದ ಸುಮಾರು ಮೂರು ವರ್ಷಗಳಿಂದ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮುಷ್ಕರ ಸೇರಿದಂತೆ ಹಲವು ರೀತಿಯಲ್ಲಿ ಸರ್ಕಾರದ ಗಮನ ಸೆಳೆದರೂ ಸರ್ಕಾರವಾಗಲಿ ಇಲ್ಲ ಸಾರಿಗೆ ನಿಗಮದ ಆಡಳಿತ ಮಂಡಳಿಯಾಗಲಿ ನೌಕರರ ಮನವಿಗೆ ಸ್ಪಂದಿಸಿಲ್ಲ.

ಇದರಿಂದ ಮನನೊಂದಿರುವ ಸಾರಿಗೆ ನೌಕರರು ಕಡೆಯ ಪ್ರಯತ್ನವಾಗಿ ಬೆಳಗಾವಿಯ ಸುವರ್ಣಸೌಧದ ಮುಂದೆ ಅಮರಣಾಂತ ಉಪವಾಸ ಸತ್ಯಾಗ್ರಹವನ್ನು ಕಳೆದ ಇದೇ ಡಿ.19ರಿಂದ ಹಮ್ಮಿಕೊಂಡಿದ್ದಾರೆ. ಈಗಲೂ ಸರ್ಕಾರ ಅವರ ಬೇಡಿಕೆಗೆ ಸ್ಪಂದಿಸುತ್ತಿಲ್ಲ. ಹೀಗಾಗಿ ನೌಕರರ ಸಮಸ್ಯೆಯನ್ನು ತಳಮಟ್ಟದಿಂದಲೇ ಅರಿತಿರುವ ಭಾಸ್ಕರ್‌ ರಾವ್‌ ಅವರು ನೌಕರರ ಪರವಾದ ನ್ಯಾಯಯುತ ಬೇಡಿಕೆಗಳ ಈಡೇರಿಸಬೇಕು ಎಂದು ಸೋಮವಾರದಿಂದ (ಡಿ.26) ಸತ್ಯಾಗ್ರಹದಲ್ಲಿ ಭಾಗವಹಿಸಲಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.

ಈಗಾಗಲೇ ಕಳೆದ 6ದಿನದಿಂದ ಉಪವಾಸ ಸತ್ಯಾಗ್ರಹ ನಿರತರಲ್ಲಿ ಹಲವರ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ಸೇರಿದ್ದಾರೆ. ಅಲ್ಲದೆ ಸತ್ಯಾಗ್ರಹದ ನೇತೃತ್ವ ವಹಿಸಿರುವ ಚಂದ್ರಶೇಖರ್‌ ಅವರು ಕೂಡ ಎರಡು ಬಾರಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಆದರೂ ಸರ್ಕಾರ ನೌಕರರ ಮನವಿಗೆ ಇನ್ನೂ ಸ್ಪಂದಿಸುತ್ತಿಲ್ಲ.

ಸಾರಿಗೆ ಸಚಿವ ಬಿ.ಶ್ರೀರಾಮುಲು ಕಳೆದ ನಾಲ್ಕು ದಿನದ ಹಿಂದೆ 7ನೇ ವೇತನ ಆಯೋಗ ಮಾದರಿಯಲ್ಲಿ ವೇತನ ಕೊಡುತ್ತೇವೆ ಎಂದು ಸತ್ಯಾಗ್ರಹ ನಿರತರನ್ನು ಭೇಟಿ ಮಾಡಿದ ವೇಳೆ ಭರವಸೆ ನೀಡಿದ್ದರು. ಜತೆಗೆ ವಜಾಗೊಳಿಸಿರುವ ಬಿಎಂಟಿಸಿಯ ಎಲ್ಲ 573 ಮಂದಿ ನೌಕರರನ್ನು ಯಾವುದೇ ಷರತ್ತು ಇಲ್ಲದೆ ಮರು ನೇಮಕ ಮಾಡಿಕೊಳ್ಳುತ್ತೇವೆ ಎಂದು ಹೇಳಿದ್ದರು.

ಆದರೆ ಸಚಿವರು 7ನೇ ವೇತನ ಆಯೋಗ ಮಾದರಿಯಲ್ಲಿ ವೇತನ ಕೊಡುತ್ತೇವೆ ಎಂದು ನಾಲ್ಕು ದಿನದ ಹಿಂದೆ ನೌಕರರಿಗೆ ಕೊಟ್ಟ ಮಾತನ್ನೇ ತಪ್ಪಿದ್ದು, ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಉಲ್ಟಾಹೊಡೆದಿದ್ದಾರೆ.

ಅಂದರೆ ಇಂದು ವೇತನ ಪರಿಷ್ಕರಣೆ ಮಾತನಾಡಿದ್ದಾರೆ. ಅಲ್ಲದೆ ವಜಾಗೊಳಿಸಿರುವ ನೌಕರರಿಗೆ ಕೆಲವು ಷರತ್ತುಗಳನ್ನು ಹಾಕಿದ್ದು ಅದರಂತೆ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ. ಈ ರೀತಿ ಕೊಟ್ಟ ಮಾತನ್ನು ಪದೇಪದೆ ತಪ್ಪುತ್ತಿರುವ ಸಾರಿಗೆ ಸಚಿವರ ನಡೆಯಿಂದ ಬೇಸತ್ತಿರುವ ನೌಕರರು ಪ್ರಾಣದ ಹಂಗುತೊರೆದು ಶತಾಯಗತಾಯ ಬೇಡಿಕೆಗಳನ್ನು ಈಡೇರಿಸಿಕೊಳ್ಳಲೆ ಬೇಕು ಎಂದು ಅಂತಿಮವಾಗಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.

ಹೀಗಾಗಿ ನೌಕರರಿಗೆ ಮಾನಸಿಕವಾಗಿ ಹಾಗೂ ಕಾನೂನಾತ್ಮಕವಾಗಿಯೂ ಧೈರ್ಯ ತುಂಬುವ ನಿಟ್ಟಿನಲ್ಲಿ ಐಪಿಎಸ್‌ ಮಾಜಿ ಅಧಿಕಾರಿ ಭಾಸ್ಕರ್‌ ರಾವ್‌ ಅವರು ಸೋಮವಾರದಿಂದ ನೌಕರರ ಅಮರಣಾಂತ ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ಮೂಲಕ ಸರ್ಕಾರಕ್ಕೆ ಬಿಸಿ ಮುಟ್ಟಿಸಲಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.

ಇನ್ನು ಭಾಸ್ಕರ್‌ ರಾವ್‌ ಅವರು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುತ್ತಿದ್ದಾರೆ ಎಂಬ ಸುದ್ದಿ ಬಲ್ಲ ಮೂಲಗಳಿಂದ ತಿಳಿದುಕೊಂಡ ನೌಕರರು 10 ಸಾವಿರಕ್ಕೂ ಹೆಚ್ಚು ಸಂಖ್ಯೆಯಲ್ಲಿ ತಮ್ಮ ತಮ್ಮ ಕುಟುಂಬ ಸಮೇತ ಸೇರಲು ಸಜ್ಜಾಗಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ