ಸರಳವಾಗಿ ನೆರವೇರಿತು ನಿಖಿಲ್ ಕುಮಾರಸ್ವಾಮಿ-ರೇವತಿ ವಿವಾಹ
ಮನೆಯಿಂದಲೇ ವಧು ವರರ ಆಶೀರ್ವದಿಸಿ ಎಂದು ಮನವಿ ಮಾಡಿದ ಮಾಜಿ ಸಿಎಂ ಕುಮಾರಸ್ವಾಮಿ
ಬೆಂಗಳೂರು: ಕೊರೊನಾ ವೈರಸ್ನಿಂದಾಗಿ ಲಾಕ್ ಡೌನ್ ಉಂಟಾಗಿರುವುದರಿಂದ ಮಾಜಿ ಪ್ರಧಾನಮಂತ್ರಿ ಎಚ್.ಡಿ. ದೇವೇಗೌಡ ಅವರ ಮೊಮ್ಮಗ ಮತ್ತು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಎಚ್. ಡಿ. ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ವಿವಾಹ ಇಂದು ಕುಟುಂಬದವರ ಸಮ್ಮುಖದಲ್ಲಿ ಸರಳವಾಗಿ ನೆರವೇರಿತು.
ಮಾಜಿ ಸಚಿವ ಎಂ. ಕೃಷ್ಣಪ್ಪ ಅವರ ಮೊಮ್ಮಗಳು ರೇವತಿಯನ್ನು ನಿಖಿಲ್ ಕುಮಾರಸ್ವಾಮಿ ಇಂದು (ಏ.17) ರಾಮನಗರದ ಅವರ ತೋಟದ ಮನೆಯಲ್ಲಿ ಎರಡೂ ಕುಟುಂಬಗಳ ಸುಮಾರು 50 ಜನರ ಸಮ್ಮುಖದಲ್ಲಿ ವಿವಾಹವಾದರು. ಇದಕ್ಕಾಗಿ ಕಳೆದ ರಾತ್ರಿ ಬೆಂಗಳೂರಿನಲ್ಲಿರುವ ಕುಮಾರಸ್ವಾಮಿ ಮನೆಯಲ್ಲಿ ಚಪ್ಪರದ ಪೂಜೆ ಅರಿಶಿನ ಶಾಸ್ತ್ರ ನೆರವೇರಿತು. ಕುಮಾರಸ್ವಾಮಿ ಹಾಗೂ ಅನಿತಾ ಕುಮಾರಸ್ವಾಮಿ ಅವರು ಮಗನಿಗೆ ಅರಿಶಿನದ ನೀರು ಹಾಕಿ ಆಶೀರ್ವದಿಸಿದರು.
ಅದ್ದೂರಿಯಾಗಿ ನೆರವೇರಿಸಲು ಆಯೋಜಿಸಿದ್ದ ನನ್ನ ಮಗನ ವಿವಾಹವನ್ನು ಸರಳವಾಗಿ 50-60 ಜನ ಆಪ್ತ ಬಂಧುಗಳ ಸಮ್ಮುಖದಲ್ಲಿ ಮಾಡಿದ್ದೇವೆ. ಕೊರೊನಾ ವೈರಸ್ ಲಾಕ್ ಡೌನ್‌ನಿಂದಾಗಿ ಸರ್ಕಾರ ಮತ್ತು ವಿಶ್ವ ಆರೋಗ್ಯ ಸಂಸ್ಥೆಯ ಮಾರ್ಗಸೂಚಿಗಳನ್ನು ಪಾಲಿಸುವುದು ನಮಗೆ ಸದ್ಯಕ್ಕೆ ಅನಿವಾರ್ಯವಾಗಿದೆ. ಹೀಗಾಗಿ ಅಭಿಮಾನಿಗಳು, ಬೆಂಬಲಿಗರು ಯಾರೂ ಬೇಸರ ಮಾಡಿಕೊಳ್ಳಬೇಡಿ ಎಂದು ಮನವಿ ಮಾಡಿದ್ದಾರೆ.
ಕೊರೊನಾ ಭೀತಿಯಿಂದ ಅಂದುಕೊಂಡಂತೆ ವಿವಾಹ ನೆರವೇರಿಸಲು ಆಗಲಿಲ್ಲ ಎಂದು ಬೇಸರಗೊಂಡಿರುವ ಕುಮಾರಸ್ವಾಮಿಯವರು ತಮ್ಮ ಅಭಿಮಾನಿಗಳನ್ನು ಆಹ್ವಾನಿಸಲಾಗದಿದ್ದಕ್ಕೆ ಕ್ಷಮೆ ಕೋರಿದ್ದಾರೆ.
ಕೊರೊನಾ ವೈರಸ್ ಸಮಸ್ಯೆಯೆಲ್ಲ ಮುಗಿದ ಮೇಲೆ ಎಲ್ಲರನ್ನೂ ಆಹ್ವಾನಿಸಿ ದೊಡ್ಡ ಔತಣಕೂಟ ಏರ್ಪಡಿಸುತ್ತೇವೆ. ನಾವು ಬೇರೆಯವರಿಗೆ ಮಾದರಿಯಾಗಬೇಕು. ಈ ಹಿನ್ನೆಲೆಯಲ್ಲಿ ನಿಯಮವನ್ನು ಸರಿಯಾಗಿ ಪಾಲಿಸುವುದು ಅನಿವಾರ್ಯವಾಗಿದೆ. ಇದಕ್ಕೆ ನಿಮ್ಮೆಲ್ಲರ ಬೆಂಬಲವು ಇದೆ ಎಂದು ನಂಬಿ ಈ ಕಾರ್ಯ ಮಾಡುತ್ತಿದ್ದೇವೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಒಂದು ಖುಷಿಯ ವಿಚಾರವೆಂದರೆ ರಾಮನಗರ ಜಿಲ್ಲೆ ಕೊರೊನಾ ವೈರಸ್‌ಗೆ ಹಸಿರು ವಲಯದಲ್ಲಿ ಬಂದಿರುವುದು. ಬೆಂಗಳೂರಿನ ಮನೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಷ್ಟವಾಗಿರುವುದರಿಂದ ರಾಮನಗರ ತೋಟದ ಮನೆಯನ್ನು ಆಯ್ಕೆ ಮಾಡಿಕೊಂಡಿದ್ದೇವೆ ಎಂದು ತಿಳಿಸಿದ್ದಾರೆ.
ಇನ್ನು ರಾಜ್ಯದಲ್ಲಿ ಲಾಕ್ ಡೌನ್ ನಿಯಮವನ್ನು ಉಲ್ಲಂಘಿಸಿದರೆ ಬೇರೆಯವರಿಗೆ ಮಾದರಿಯಾಗುವುದು ಕಷ್ಟ. ಹೀಗಾಗಿ ಯಾರನ್ನು ಮದುವೆಗೆ ಕರೆಯಲಾಗಲಿಲ್ಲ ಆದ್ದರಿಂದ ನಮ್ಮ ಎಲ್ಲಾ ಅಭಿಮಾನಿಗಳು, ಬೆಂಬಲಿಗರು ಮನೆಯಿಂದಲೇ ತಮ್ಮ ಮಗನಿಗೆ ಹರಸಬೇಕೆಂದು ವಿಡಿಯೋ ಸಂದೇಶದ ಮೂಲಕ ಮನವಿ ಮಾಡಿದ್ದಾರೆ.
Related
You Might Also Like
ಸರ್ಕಾರಿ ವಾಹನ ಚಾಲಕರಿಗೆ ಕನಿಷ್ಠ ವೇತನ ₹34,100 ನಿಗದಿಗೊಳಿಸಿ ಸರ್ಕಾರ ಆದೇಶ
ಬೆಂಗಳೂರು: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಚಾಲಕರಿಗೆ 34100 ರೂಪಾಯಿ ಸಂಚಿತ ವೇತನ ನಿಗದಿ ಮಾಡಿರುವ ಸರ್ಕಾರ ಕಳೆದ ನವೆಂಬರ್ 1ರಿಂದಲೇ...
ಇಂದಿನಿಂದ ನಿವೃತ್ತ ಸಾರಿಗೆ ನೌಕರರಿಗೆ ಉಪಧನ, ನಿವೃತ್ತಿ ಗಳಿಕೆ ರಜೆ ನಗದೀಕರಣ ಪಾವತಿಗೆ ಎಂಡಿ ಆದೇಶ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಯ ನಾಲ್ಕೂ ನಿಗಮಗಳಲ್ಲಿ 01.01.2020 ರಿಂದ 28.02.2023 ರವರೆಗಿನ ಅವಧಿಯಲ್ಲಿ ಸಂಸ್ಥೆಯ ಸೇವೆಯಿಂದ ಸೇವಾ ವಿಮುಕ್ತಿ ಹೊಂದಿದ ಅಧಿಕಾರಿ/ನೌಕರರಿಗೆ ಪರಿಷ್ಕೃತ...
BMTC: ಡಿ.24ರಂದು ನೌಕರರಿಗೆ 7 ತಿಂಗಳ ತುಟ್ಟಿಭತ್ಯೆ ಹಿಂಬಾಕಿ ಪಾವತಿಗೆ ಎಂಡಿ ಆದೇಶ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಅಧಿಕಾರಿ/ಸಿಬ್ಬಂದಿಗಳಿಗೆ ಇದೇ ಡಿಸೆಂಬರ್ 20ರಂದು ಬಾಕಿ 7 ತಿಂಗಳ ತುಟ್ಟಿಭತ್ಯೆ ಹಿಂಬಾಕಿ ಪಾವತಿಸಲು ವ್ಯವಸ್ಥಾಪಕ ನಿರ್ದೇಶಕ ಆರ್. ರಾಮಚಂದ್ರನ್ ಇಂದು...
KKRTC ಸಂಸ್ಥೆಯ ಸಿಬ್ಬಂದಿಗಳಿಗೆ ಉಚಿತ ಒಂದು ಕೋಟಿ ರೂ. ಅಪಘಾತ ವಿಮೆ ಜತೆಗೆ ನೌಕರರಿಗೆ ಸಿಗುವ ಇತರ ಸೌಲಭ್ಯಗಳು
ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಸಿಬ್ಬಂದಿಗಳು ಸೇವೆಯಲ್ಲಿರುವಾಗ ಅಪಘಾತ ಅಥವಾ ಸ್ವಾಭಾವಿಕವಾಗಿ ಮರಣ ಹೊಂದಿದಲ್ಲಿ ಕುಟುಂಬದವರಿಗೆ ಹೆಚ್ಚಿನ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ, ಕೆನರಾ...
KKRTC: ನಗದು ರಹಿತ ಚಿಕಿತ್ಸೆಗಾಗಿ ಸಿಬ್ಬಂದಿಗಳ ವೈಯಕ್ತಿಕ, ಅವಲಂಬಿತರ ಮಾಹಿತಿ ಸಂಗ್ರಹಿಸಿ- ಅಧಿಕಾರಿಗಳಿಗೆ ಆದೇಶ
ಕಲಬುರಗಿ: ನಗದು ರಹಿತ ಚಿಕಿತ್ಸೆಗಾಗಿ ಅವಶ್ಯಕವಿರುವ ಸಿಬ್ಬಂದಿಗಳ ವೈಯಕ್ತಿಕ ಹಾಗೂ ಅವರ ಅವಲಂಬಿತರ ಮಾಹಿತಿಯನ್ನು ಸಂಗ್ರಹಿಸಿ ತಂತ್ರಾಂಶದಲ್ಲಿ ನಮೂದಿಸಬೇಕು ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ...
ಹೈಕೋರ್ಟ್ ಆದೇಶದ ಬೆನ್ನಲ್ಲೇ ದಾವಣಗೆರೆಯಲ್ಲಿ ಪೊಲೀಸರಿಂದ ಸಿ.ಟಿ.ರವಿ ಬಿಡುಗಡೆ
ದಾವಣಗೆರೆ: ಹೈಕೋರ್ಟ್ ಆದೇಶದ ಬೆನ್ನಲ್ಲೇ ಶಾಸಕ ಸಿ.ಟಿ.ರವಿ ಅವರನ್ನು ದಾವಣಗೆರೆಯಲ್ಲಿ ಪೊಲೀಸರು ಬಿಡುಗಡೆ ಮಾಡಿದ್ದು. ಅಲ್ಲೇ ನೆರದಿದ್ದ ನೂರಾರು ಬಿಜೆಪಿ ಕಾರ್ಯಕರ್ತರು ಸಿ.ಟಿ.ರವಿಗೆ ಅದ್ದೂರಿ ಸ್ವಾಗತ ಕೋರಿದರು. ಸದನದಲ್ಲಿ...
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ: ಮಂಡ್ಯಕ್ಕೆ ಆಗಮಿಸಿದ ಸಮ್ಮೇಳನಾಧ್ಯಕ್ಷರಿಗೆ ಸ್ವಾಗತ
ಮಂಡ್ಯ: ಸಕ್ಕರೆ ನಾಡಿನಲ್ಲಿ ಮೂರು ದಿನಗಳ ಕಾಲ ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ನಾಳೆ ಅಂದರೆ ಶುಕ್ರವಾರ (ಡಿ.20) ಚಾಲನೆ ಸಿಗಲಿದೆ. ಈ...
ಉತ್ತಮ ಆಡಳಿತ ಸಪ್ತಾಹ: ಹಿರಿಯ ನಾಗರಿಕರಿಗೆ ಗುರುತಿನ ಚೀಟಿ ವಿತರಿಸಿದ ಡಿಸಿ
ಬೆಂ.ಗ್ರಾ.: ಉತ್ತಮ ಆಡಳಿತ ಸಪ್ತಾಹ-2024 ರ ಅಂಗವಾಗಿ "ಇಂದೇ ಸಕಾಲ"ದಲ್ಲಿ ಹಿರಿಯ ನಾಗರಿಕರ ಗುರುತಿನ ಚೀಟಿಗಾಗಿ ಅರ್ಜಿ ಸಲ್ಲಿಸಿದ ಕೆಲವೇ ನಿಮಿಷಗಳಲ್ಲಿ ಅನುಮೋದಿಸಿ ಜಿಲ್ಲಾಧಿಕಾರಿಗಳಿಂದ ಹಿರಿಯ ನಾಗರಿಕರಿಗೆ...
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅಶ್ಲೀಲ ಪದ ಬಳಕೆ ಆರೋಪ: ಸಿ.ಟಿ.ರವಿ ಬಂಧನ
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬಗ್ಗೆ ಅವಹೇಳನಕಾರಿ ಪದ ಬಳಕೆ ಆರೋಪಕ್ಕೆ ಸಂಬಂಧಿಸಿದಂತೆ ಎಂಎಲ್ಸಿ ಸಿ.ಟಿ.ರವಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಎಫ್ಐಆರ್ ದಾಖಲಾದ ಬೆನ್ನಲ್ಲೇ ಸಿ.ಟಿ.ರವಿ...
ಸಾರ್ವಜನಿಕರ ಸಮಸ್ಯೆ ಶೀಘ್ರ ಪರಿಹರಿಸಿ: ಅಧಿಕಾರಿಗಳಿಗೆ ಡಿಸಿ ಸೂಚನೆ
ಬೆಂ.ಗ್ರಾ.: ಉತ್ತಮ ಆಡಳಿತ ಸಪ್ತಾಹ-2024 ದ ಅಂಗವಾಗಿ ಅಧಿಕಾರಿಗಳು ಸಪ್ತಾಹದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಸಾರ್ವಜನಿಕರ ಕುಂದುಕೊರತೆಗಳನ್ನು ಪರಿಹರಿಸಿ ಮತ್ತು ಸುಧಾರಿತ ಸೇವೆ ಒದಗಿಸಿ ಎಂದು ಜಿಲ್ಲಾಧಿಕಾರಿ ಡಾ.ಎನ್...
KSRTC:ಶೇ.96ರಷ್ಟು ನೌಕರರಿಗೆ ಬೇಡದ ಮುಷ್ಕರಕ್ಕೆ ನಮ್ಮ ಬೆಂಬಲವಿಲ್ಲ: ಜಂಟಿಗೆ ಲಿಖಿತ ಹಿಂಬರಹ ಕೊಟ್ಟ ಒಕ್ಕೂಟ
ಬೆಂಗಳೂರು: ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಇದೇ ಡಿ.31 ರಿಂದ ಕರೆ ನೀಡಿರುವ ಮುಷ್ಕರಕ್ಕೆ ನಮ್ಮ ಬೆಂಬಲ ನೀಡದಿರಲು ತೀರ್ಮಾನಿಸಿದ್ದೇವೆ ಎಂದು ಕರ್ನಾಟಕ...
ಕಾರ್ಮಿಕ ಸಂಘಟನೆಗಳು ಕರೆ ಕೊಟ್ಟಿರುವ ಡಿ.31ರ ಮುಷ್ಕರಕ್ಕೆ ನಮ್ಮ ಬೆಂಬಲವಿಲ್ಲ: KSRTC ಅಧಿಕಾರಿಗಳು/ನೌಕರರ ಒಕ್ಕೂಟ
7ನೇ ವೇತನ ಆಯೋಗದಂತೆ ಸರಿ ಸಮಾನ ವೇತನ ಜಾರಿಗೆ ಒತ್ತಾಯ ಕಾರ್ಮಿಕ ಸಂಘಟನೆಗಳ ಮುಷ್ಕರದಲ್ಲಿ ನಾವು ಭಾಗಿಯಾಗುವುದಿಲ್ಲ ಸರ್ಕಾರ ಸರಿ ಸಮಾನ ವೇತನ ಮಾಡಲೇ ಬೇಕು ಇಲ್ಲ...