NEWS

ಸರ್ಕಾರದಿಂದ ಕೊರೊನಾ ಸೈನಿಕರಿಗೆ ಸ್ಫೂರ್ತಿ    

ಗದಗ ಜಿಲ್ಲೆ ಕೋವಿಡ್ -19  ನಿಯಂತ್ರಣ l ಸಚಿವ ಶ್ರೀರಾಮುಲು

ವಿಜಯಪಥ ಸಮಗ್ರ ಸುದ್ದಿ

ಗದಗ: ಕೊರೊನಾ  ವೈರಸ್ ನಿಯಂತ್ರಣಕ್ಕಾಗಿ  ಕೇಂದ್ರ ಹಾಗೂ ರಾಜ್ಯ  ಸರ್ಕಾರಗಳು   ಮುಂಜಾಗ್ರತಾ  ಕ್ರಮ   ಕೊರೊನಾ ಸೈನಿಕರಾದ ವೈದ್ಯರು, ನರ್ಸ್‌  , ಆಶಾ ಕಾರ್ಯಕರ್ತೆಯರಿಗೆ ಸ್ಫೂರ್ತಿ  ತುಂಬುವ ಕಾರ್ಯ  ಮಾಡಲಾಗುತ್ತಿದೆ ಎಂದು ಆರೋಗ್ಯ ಸಚಿವ  ಶ್ರೀರಾಮುಲು ಹೇಳಿದರು.

ಗದಗ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕೋವಿಡ್-19 ನಿಯಂತ್ರಣ ಕುರಿತು  ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದರು.  ರಾಜ್ಯದ 21 ಜಿಲ್ಲೆಗಳಲ್ಲಿನ ಸತತವಾಗಿ ಪ್ರವಾಸ ಮಾಡಿ  ಕೊರೊನಾ ನಿಯಂತ್ರಣದ  ಸ್ಥಿತಿಗತಿ ಕುರಿತು ಪರಿಶೀಲನೆ ನಡೆಯುತ್ತಿದೆ.  ಅಲ್ಲಿನ ಜಿಲ್ಲಾಡಳಿತ,  ಆರೋಗ್ಯ ಇಲಾಖೆ ,   ವೈದ್ಯರು, ಸಂಸದರಿಂದ ಮಾಹಿತಿ ಸಂಗ್ರಹಣೆ ಮಾಡಿ ಕೊರೊನಾ  ನಿಯಂತ್ರಣಕ್ಕಾಗಿ  ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದರು.

ಗದಗ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಮಾತನಾಡಿ, ಜಿಲ್ಲೆಯಲ್ಲಿ ಕೋವಿಡ್ -19  ಚಿಕಿತ್ಸೆಯಲ್ಲಿದ 82 ವರ್ಷದ ವೃದ್ಧೆ ಸಾವನ್ನಪ್ಪಿದ್ದು  ಪಿ-166 ಪ್ರಕರಣದ   ಪ್ರಾಥಮಿಕ ಸಂಪರ್ಕದಲ್ಲಿದ್ದಂತಹ   82 ಜನರನ್ನು   ಗುರುತಿಸಿ ಪ್ರತ್ಯೇಕ ನಿಗಾದಲ್ಲಿಡಲಾಗಿದೆ ಎಂದರು.

ಪರೀಕ್ಷೆಗೆ ಕಳುಹಿಸಿದ ಎಲ್ಲ ಮಾದರಿಗಳು ನಕಾರಾತ್ಮಕವಾಗಿವೆ. ಮುಂಜಾಗ್ರತಾ ಕ್ರಮವಾಗಿ ಕೋವಿಡ್ -19 ಪತ್ತೆಯಾದ  2 ಪ್ರದೇಶಗಳನ್ನು ಕಂಟೇನ್‌ಮೆಂಟ್ ಏರಿಯಾ ಎಂದು ಘೋಷಿಸಿ ಅಗತ್ಯದ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ವಿವಿಧ ಪಿಂಚಣಿ ಯೋಜನೆಗಳ ಗ್ರಾಮೀಣ ಪ್ರದೇಶದ ಅರ್ಹ ಫಲಾನುಭವಿಗಳಿಗೆ ಬ್ಯಾಂಕ್ ಮಿತ್ರರ ಮುಖಾಂತರ ಸೇವೆ ಒದಗಿಸಲು ಕ್ರಮ ಜರುಗಿಸಲಾಗುತ್ತಿದೆ.  ಜಿಲ್ಲೆಯಲ್ಲಿ ಇದುವರೆಗೆ ಶೇ.82 ರಷ್ಟು ಕುಟುಂಬಗಳಿಗೆ ಪಡಿತರವನ್ನು ವಿತರಿಸಲಾಗಿದೆ ಎಂದು ತಿಳಿಸಿದರು.  ಶಾಸಕ ರಾಮಣ್ಣ ಲಮಾಣಿ, ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಉಪಸ್ಥಿತರಿದ್ದರು.

Leave a Reply

error: Content is protected !!
LATEST
ಆಗಸದಲ್ಲೇ ಡಿಕ್ಕಿ ಹೊಡೆದುಕೊಂಡ ನೌಕಾಪಡೆಯ 2 ಹೆಲಿಕಾಪ್ಟರ್‌ಗಳು ನೋಡ ನೋಡುತ್ತಿದ್ದಂತೆ ಪತನ: 10 ಮಂದಿ ಮೃತ KSRTC: ಸಾರಿಗೆ ನಿಗಮಗಳ ಖಾಸಗೀಕರಣಕ್ಕೆ ಅವಕಾಶ ನೀಡುತ್ತಿದೆ ಕೇಂದ್ರ ಬೃಹತ್‌ ಕೈಗಾರಿಕಾ ಸಚಿವಾಲಯ KSRTC: ಏಪ್ರಿಲ್‌-ಜೂನ್‌ ಪೀಕ್‌ ಸೀಸನ್‌ ಎಂದು ಚಾಲನಾ ಸಿಬ್ಬಂದಿಗಳಿಗೆ ರಜೆ ಕೊಡದೆ ಹಿಂಸಿಸುತ್ತಿರುವ ಅಧಿಕಾರಿಗಳು..! ಬಿಜೆಪಿ ರಾಜಕೀಯ ಲಾಭಕ್ಕೆ ನೇಹಾ ಪ್ರಕರಣ ಬಳಸಿಕೊಳ್ಳುತ್ತಿರುವುದು ನಾಚಿಕೆಗೇಡಿನ ವಿಚಾರ: ಜಗದೀಶ್ ವಿ. ಸದಂ IVRS, ಬಲ್ಕ್ SMS ಮೂಲಕ ಮತದಾರರಿಗೆ ಮೊಬೈಲ್‌ ಸಂದೇಶ: ತುಷಾರ್ ಗಿರಿನಾಥ್ KSRTC: ವೇತನ ಸಮಸ್ಯೆ ಪರಿಹರಿಸದೆ ಅಸಡ್ಡೆ ತೋರಲು ಇವರು ಕಾರಣಗಳು....!? ರಾಜಕೀಯ ಪಕ್ಷಗಳ ಚುನಾವಣಾ ಪ್ರಣಾಳಿಕೆಗಳು ಜನರ ವಂಚಿಸುವ ಮಂತ್ರ ದಂಡಗಳು : ಕುರುಬೂರ್‌ ಶಾಂತಕುಮಾರ್‌ 'ನಮ್ಮ ನಡೆ ಮತಗಟ್ಟೆಯ ಕಡೆ' ಜಾಗೃತಿ ಜಾಥಾಗೆ ಮನೋಜ್ ಕುಮಾರ್ ಮೀನಾ, ತುಷಾರ್ ಗಿರಿನಾಥ್ ಚಾಲನೆ ಕೊಡಗು: ಹುಲಿದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ ತಾಳವಾಡಿ: ಜಮೀನಿಗೆ ನುಗ್ಗುತ್ತಿರುವ ಕಾಡಾನೆ ಹಿಮ್ಮೆಟ್ಟಿಸಿದ ರೈತರು