NEWSನಮ್ಮರಾಜ್ಯ

ಸರ್ಕಾರಿ ನೌಕರರ ಮಾರ್ಚ್‌ ಮಾಸದ ವೇತನದಲ್ಲಿ ಕಡಿತವಿಲ್ಲ?

ಅಧಿಕಾರಿಗಳ ಸಂಬಳದಲ್ಲೂ ಯಾವುದೇ ತಡೆಯಿಲ್ಲ ಎಂದು ಹೇಳಲಾಗಿದೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೊರೊನಾ ವೈರಸ್‌ ಸಮಸ್ಯೆಯಿಂದ ಉಂಟಾಗಿರುವ ಆರ್ಥಿಕ ನಷ್ಟವನ್ನು ಸರಿದೂಗಿಸಿಕೊಳ್ಳಲು ಸರ್ಕಾರಿ ನೌಕರರು ಹಾಗೂ ಅಧಿಕಾರಿಗಳ ವೇತನದಲ್ಲಿ ಯಾವುದೇ ಕಡಿತಗೊಳಿಸದಿರಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ಹಲವು ರಾಜ್ಯಗಳ ಸರ್ಕಾರಗಳು ಈಗಾಗಲೇ ತಮ್ಮ ನೌಕರರು ಹಾಗೂ ಅಧಿಕಾರಿಗಳ ಸಂಬಳ ಕಟ್ ಮಾಡಿ ಆದೇಶ ಹೊರಡಿಸಿವೆ. ಆದರೂ ರಾಜ್ಯ ಸರ್ಕಾರ ಅಂತಹ ಚಿಂತನೆ ಮಾಡಿಲ್ಲ ಎಂದು ಹೇಳಲಾಗಿದೆ.

ಲಾಕ್‌ಡೌನ್‌ ವಿಸ್ತರಣೆ ಆಗದೇ ನಿಗದಿತ ದಿನದಂದೇ ಕೊನೆಗೊಂಡರೇ ಏನೂ ತೊಂದರೆ ಇಲ್ಲ. ವಿಸ್ತರಣೆ ಆದಲ್ಲಿ ಸಂಬಳ ಕಡಿತದ ಬಗ್ಗೆ ಯೋಚನೆ ಮಾಡಬೇಕಾಗುತ್ತದೆ ಎಂಬ ಆಲೋಚನಯಲ್ಲೂ ಮುಳುಗಿದೆ ಎನ್ನಲಾಗಿದೆ. ಆದರೆ, ಮುಂದಿನ ಪರಿಸ್ಥಿತಿಯನ್ನು ಅರಿತು ಎಚ್ಚರಿಕೆ ಹೆಜ್ಜೆ ಹಾಕಲು ತೀರ್ಮಾನಿಸಿದೆ.

ಏನೆ ಆದರೂ ಸದ್ಯದ ಈ ಮಟ್ಟಿಗಂತು ನೌಕರರ ಜೇಬಿಗೆ ಕತ್ತರಿ ಹಾಕುವಂತಹ ಯಾವುದೇ ಪ್ರಸ್ತಾಪ ಇಲ್ಲ ಎಂದು ಹಣಕಾಸು ಇಲಾಖೆ ಮೂಲಗಳು ಸ್ಪಷ್ಟಪಡಿಸಿವೆ ಎಂದು ಹೇಳಲಾಗಿದೆ.

ಈಗಾಗಲೇ ತೆಲಂಗಾಣ, ಆಂಧ್ರ ಪ್ರದೇಶ, ಮಹಾರಾಷ್ಟ್ರ, ಒಡಿಶಾ, ರಾಜಾಸ್ಥಾನಗಳಲ್ಲಿ ಕೊರೋನಾ ತಂದಿರುವ ಆರ್ಥಿಕ ಸಂಕಷ್ಟದಿಂದ ಪಾರಾಗಲು ತಮ್ಮ ನೌಕರರು ಮತ್ತು ಅಧಿಕಾರಿಗಳ ಜೇಬಿಗೆ ಭಾರಿ ಕೈಯನ್ನೇ ಹಾಕಿವೆ. ಮುಖ್ಯಮಂತ್ರಿಯಾದಿಯಾಗಿ ಎಲ್ಲ ಜನ ಪ್ರತಿನಿಧಿಗಳು ಆಡಳಿತ ಸೇವೆಯ ವಿವಿಧ ಇಲಾಖೆಯ ಅಧಿಕಾರಿಗಳು, ಎ,ಬಿ,ಸಿ ದರ್ಜೆ ನೌಕರರ ವೇತನವನ್ನು ಕಡಿತಗೊಳಿಸಿ ಆದೇಶ ಜಾರಿ ಮಾಡಲಾಗಿದೆ. ಆದರೆ ಕರ್ನಾಟಕದಲ್ಲಿ ಅಂಥ ಯಾವುದೇ ಸ್ಥಿತಿ ಬಂದಿಲ್ಲ ಎಂದು ಹೇಳಲಾಗುತ್ತಿದೆ.

 

Leave a Reply

error: Content is protected !!
LATEST
KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ