ಹುಬ್ಬಳ್ಳಿ: ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡು ವ್ಯಕ್ತಿ ಸಾವನ್ನಪ್ಪಿದ್ದು, ಮಗು ಸಾವು ಬದುಕಿನ ನಡುವೆ ಹೋರಾಡುತ್ತಿರುವ ಘಟನೆ ಕಲಘಟಗಿಯಲ್ಲಿ ನಡೆದಿದೆ.
ಭಾನುವಾರ ಸಂಜೆ ಮನೆಯಲ್ಲಿ ಸಿಲಿಂಡರ್ ಸೋರಿಕೆಯಾಗಿ ಸ್ಫೋಟವಾದ ಪರಿಣಾಮ ಯಲ್ಲಪ್ಪ(35) ಸ್ಫೋಟದ ತ್ರೀವತೆಗೆ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಒಂದು ವರ್ಷದ ಮಗುವಿಗೆ ಗಂಭೀರ ಗಾಯವಾಗಿದ್ದು, ಮಗು ಸಹ ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದೆ. ಇದೀಗ ಗಾಯಗೊಂಡಿರುವ ಮಗುವನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ಕಲಘಟಗಿ ತಾಲೂಕಿನ ತಬಕದ ಹೊನ್ನಳ್ಳಿ ಗ್ರಾಮದ ತಮ್ಮಣ್ಣವರ ಎಂಬುವರ ಮನೆಯಲ್ಲಿ ಘಟನೆ ನಡೆದಿದ್ದು ಸ್ಫೋಟದ ತೀವ್ರತೆಯಿಂದ ಈ ಅವಘಡ ಸಂಭವಿಸಿದೆ.
ಸಿಲಿಂಡರ್ ಸ್ಫೋಟದ ತ್ರೀವತ್ರೆಗೆ ಮನೆಯ ಮೇಲ್ಛಾವಣಿ ಸಹ ಕುಸಿದಿದ್ದು, ಅದೃಷ್ಟವಶಾತ್ ಮನೆಯಲ್ಲಿದ್ದ ಉಳಿದವರು ಬಚಾವ್ ಆಗಿದ್ದಾರೆ. ಘಟನೆ ಸಂಬಂಧ ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
![](https://vijayapatha.in/wp-content/uploads/2024/02/QR-Code-VP-1-1-300x62.png)