NEWSಆರೋಗ್ಯನಮ್ಮಜಿಲ್ಲೆ

ಸಾಂಕ್ರಾಮಿಕ ರೋಗಗಳ ತಡೆಗೆ ಮುಂದಾದ ಜಲಮಂಡಲಿ

ಕಲುಷಿತ ನೀರು ಸರಬರಾಜಾಗುತ್ತಿದ್ದಲ್ಲಿ ತಕ್ಷಣ ಕ್ರಮ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕಾಲರಾ ತಡೆಗಟ್ಟುವ ನಿಟ್ಟಿನಲ್ಲಿ  ಬೆಂಗಳೂರು ಜಲಮಂಡಳಿ ವತಿಯಿಂದ ತೀವ್ರ ನಿಗವಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರು ಜಲಮಂಡಳಿಯು ನೀರು ಸರಬರಾಜು ಕೊಳವೆಯಲ್ಲಿ ಸೋರುವಿಕೆಯನ್ನು  ಸಾರ್ವಜನಿಕರಿಂದ ಅಥವಾ ಮಂಡಳಿಯ ಸಿಬ್ಬಂದಿ  ಗುರುತಿಸಿದ ತಕ್ಷಣ ಸೋರುವಿಕೆ ತಡೆಗಟ್ಟಲು ಕ್ರಮವಹಿದೆ. ಇದಲ್ಲದೆ ಕಲುಷಿತ ನೀರು ಸರಬರಾಜಾಗುತ್ತಿದ್ದಲ್ಲಿ ತಕ್ಷಣ ಕ್ರಮವಹಿಸಿ ಕಲುಷಿತ ನೀರು ಸರಬರಾಜು ಕೊಳವೆಗೆ ಸೇರದಂತೆ ಕೂಡಲೇ ಕಾರ್ಯ ಪ್ರವೃತವಾಗುತ್ತಿದೆ ಎಂದು ಹೇಳಿದ್ದಾರೆ.

ಕಾಲರಾ ಮತ್ತು ಜಿ.ಇ. ಗೆ ಸಂಬಂಧಿಸಿದ ಮಾಹಿತಿಯನ್ನು ಸಾಂಕ್ರಾಮಿಕ ರೋಗಗಳ ಆಸ್ಪತ್ರೆ(Health & Family WelfareDepartment, Government Epidemic Disease Hospital, Bangalore) ಯಿಂದ ಮಾ.18, 19 ರಂದು ನೋಂದಣಿಯಾದ ಪ್ರಕರಣಗಳ ವಿಳಾಸವನ್ನು ಪಡೆದು  ಅಂತಹ ಸ್ಥಳಗಳಿಂದ ನೀರಿನ ಮಾದರಿಯನ್ನು ಸಂಗ್ರಹಿ, ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ತಿಳಿಸಿದ್ದಾರೆ.

ಮಾ.18, 19 ರವರೆಗೆ ದಾಖಲುಗೊಂಡ ಒಟ್ಟು 10 ಪ್ರಕರಣಗಳಲ್ಲಿ 4 ಪ್ರಕರಣಗಳಿಗೆ ಸಂಬಂಧಿಸಿದ ಪ್ರದೇಶಗಳಲ್ಲಿ ಅಂದು ನೀರು ಸರಬರಾಜು ಇಲ್ಲದ ಕಾರಣ ನೀರಿನ ಮಾದರಿಯನ್ನು ಸಂಗ್ರಹಿಸಿಲ್ಲ.  2 ಪ್ರಕರಣಗಳಿಗೆ ಸಂಬಂಧಿಸಿದ ನೀರಿನ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ನೀಡಲಾಗಿದ್ದು, ಫಲಿತಾಂಶ ನಿರೀಕ್ಷಣೆಯಲ್ಲಿದೆ.  ಉಳಿದ 4 ಪ್ರಕರಣಗಳು ಜಲ ಮಂಡಳಿಯ ವ್ಯಾಪ್ತಿಗೆ ಒಳಪಟ್ಟಿ ಎಂದು ಸ್ಪಷ್ಟಪಡಿಸಿದರು.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ