NEWSದೇಶ-ವಿದೇಶ

ಸಾವಿನ ಮನೆಯಾಗುತ್ತಿದೆ ಅಮೆರಿಕ

42 ಸಾವಿರ ಗಡಿ ದಾಟಿದ ಮೃತಪಟ್ಟವರ ಸಂಖ್ಯೆ l 7.84 ಲಕ್ಷ ಸೋಂಕಿತರು

ವಿಜಯಪಥ ಸಮಗ್ರ ಸುದ್ದಿ

ವಾಷಿಂಗ್‌ಟನ್‌: ವಿಶ್ವಮಾರಿ ಕೊರೊನಾಗೆ ಜಗತ್ತಿನಲ್ಲೆ ಅತಿ ಹೆಚ್ಚು ಸಾವು ನೋವು ಅನುಭವಿಸುತ್ತಿರುವ ರಾಷ್ಟ್ರಗಳಲ್ಲಿ ಮೊದಲ ಸಾಲಿನಲ್ಲಿ ನಿಲ್ಲುತ್ತಿರುವುದು ವಿಶ್ವದ ದೊಡ್ಡಣ್ಣನಾದ ಅಮೆರಿಕ.

ಹೌದು ಯಮನ ಪಾಷಕ್ಕೆ ಸಿಲುಕಿ ನಲುಗುತ್ತಿರುವ ಅಮೆರಿಕದಲ್ಲಿ ಕೊರೊನಾ ಸೋಂಕಿನಿಂದ ಮೃತಪಡುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ವಿಶ್ವದ ಯಾವುದೇ ದೇಶದಲ್ಲೂ ಮೃತಪಡದಷ್ಟು ಮಂದಿ ಅಮೆರಿಕದಲ್ಲಿ ಅಸುನೀಗುತ್ತಿರುವುದು. ದೊಡ್ಡಣ್ಣನಿಗೆ ಇನ್ನಿಲ್ಲದಂತ ಆತಂಕ ತಂದೊಡ್ಡಿದೆ.

ಕಳೆದ 24 ತಾಸಿನಲ್ಲಿ ಬರೋಬರಿ 1,433 ಮಂದಿ ಕೊರೊನಾ ಎಂಬ ಮಹಾಮಾರಿಗೆ ಬಲಿಯಾಗಿದ್ದು, ಈ ಮಾಹಿತಿಯನ್ನು ಜಾನ್ಸ್‌ ಹಾಪ್‌ಕಿನ್ಸ್‌ ವಿಶ್ವವಿದ್ಯಾಲಯ ತಿಳಿಸಿದೆ. ಇದರಿಂದ ತೀವ್ರ ಪೆಟ್ಟು ಅನುಭವಿಸುತ್ತಿರುವ ಅಮೆರಿಕದಲ್ಲಿ ಸಾವಿನ ಸಂಖ್ಯೆ ಏರುತ್ತಲೇ ಇರುವುದು ಜಗತ್ತನ್ನು ಇನ್ನಿಲ್ಲದಂತೆ ಕಾಡತೊಡಗಿದೆ.

ಈ ವರೆಗೆ ಕೊರೊನಾ ಸೋಂಕಿತರ ಸಂಖ್ಯೆ 7.84 ಲಕ್ಷ ತಲುಪಿದೆ. ಅದರಲ್ಲಿ ಸಾವಿಗೀಡಾದವರ ಸಂಖ್ಯೆ 42,094ಕ್ಕೆ ಏರಿಕೆಯಾಗಿದೆ. ಅದರಲ್ಲೂ ನ್ಯೂಯಾರ್ಕ್‌ನಲ್ಲೇ ಅತಿ ಹೆಚ್ಚು ಪ್ರಕರಣಗಳು ಕಂಡುಬಂದಿದ್ದು, ಕಳೆದ 24 ಗಂಟೆಯಲ್ಲಿ 478ಮಂದಿ ಅಸುನೀಗಿದ್ದಾರೆ. ಇದು ಕಳೆದ ಎರಡು ವಾರಕ್ಕೆ ಹೋಲಿಸಿದರೆ ಅತಿ ಕಡಿಮೆಯಾಗಿದೆ.

ಇಟಲಿ ಹಾಗೂ ಸ್ಪೇನ್‌ನಲ್ಲಿ ಈಗಾಗಲೇ 20 ಸಾವಿರಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಫ್ರಾನ್ಸ್‌ನಲ್ಲೂ ಕೋವಿಡ್‌ -19ನಿಂದ ಮೃತಪಟ್ಟಿರುವವರ ಸಂಖ್ಯೆಯೂ 20 ಸಾವಿರ ಗಡಿ ದಾಟಿದೆ.

Leave a Reply

error: Content is protected !!
LATEST
ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ