Please assign a menu to the primary menu location under menu

NEWSನಮ್ಮರಾಜ್ಯಸಂಸ್ಕೃತಿ

ಸಾಹಿತ್ಯ ಲೋಕದ ಹಿರಿಯ ಕೊಂಡಿ ಚಂದ್ರಕಾಂತ ಕುಸನೂರ ಇನ್ನಿಲ್ಲ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಹಿರಿಯ ಸಾಹಿತಿ ಚಂದ್ರಕಾಂತ ಕುಸನೂರ (90) ಅವರು ರಾತ್ರಿ ಬೆಳಗಾವಿಯಲ್ಲಿ ನಿಧನರಾಗಿದ್ದಾರೆ. ಈ ಮೂಲಕ ಕನ್ನಡದ ಸಾಹಿತ್ಯ ಲೋಕದ ಖ್ಯಾತ ಕೊಂಡಿಯೊಂದನ್ನು ಕಳೆದುಕೊಂಡಂತ್ತಾಗಿದ್ದು, ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟ ಸಂಭವಿಸಿದೆ.

ಪತ್ನಿ, ನಾಲ್ವರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಸೇರಿದಂತೆ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

ಚಂದ್ರಕಾಂತ ಕುಸನೂರ ಅವರು ಕನ್ನಡದ ಖ್ಯಾತ ಸಾಹಿತಿಗಳಾಗಿದ್ದು, ರಂಗಕರ್ಮಿಗಳಾಗಿಯೂ ಗುರುತಿಸಿಕೊಂಡಿದ್ದರು. 1931ರಲ್ಲಿ ಕಲಬುರಗಿಯ ಕುಸನೂರಲ್ಲಿ ಜನಿಸಿದರು. ಎಂ.ಎ, ಬಿ.ಇಡಿ ಪದವಿಗಳನ್ನು ಪಡೆದಿದ್ದಾರೆ.

ಕಲಬುರ್ಗಿ ಹಿಂದಿ ಶಿಕ್ಷಣ ತರಬೇತಿ ಕಾಲೇಜಿನಲ್ಲಿ ಅಧ್ಯಾಪಕರಾಗಿದ್ದರು.ಕಲಬುರಗಿಯಲ್ಲಿ “ರಂಗ ಮಾಧ್ಯಮ”ಎಂಬ ನಾಟಕ ಸಂಸ್ಥೆಯ ಸ್ಥಾಪಕರಾಗಿದ್ದರು. ಕನ್ನಡದಲ್ಲಿ ಅಬ್ಬರ್ಡ್ ಮಾದರಿ ನಾಟಕಗಳನ್ನು ರಚಿಸಿದರು.

1975ರಲ್ಲಿ “ಯಾತನಾ ಶಿಬಿರ” ಕಾದಂಬರಿಗೆ ರಾಜ್ಯ ಸಾಹಿತ್ಯ ಅಕಾಡೆಮಿಯ ಪುರಸ್ಕಾರ ಲಭಿಸಿದೆ.1992 ರಲ್ಲಿ ಕರ್ನಾಟಕ ನಾಟಕ ಅಕಾಡೆಮಿ ಗೌರವ ಪ್ರಶಸ್ತಿ ನೀಡಲಾಗಿದೆ. 2006ನೆಯ ಸಾಲಿನ ನಾಡೋಜ ಪ್ರತಿಷ್ಠಾನದ ಅರವಿಂದ ಪ್ರಶಸ್ತಿ ದೊರೆತಿದೆ.

ಮೃತರ ಕುಟುಂಬಕ್ಕೆ ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಆ ದೇವರು ಕರುಣಿಸಲಿ ಎಂದು ಸಿಎಂ ಯಡಿಯೂರಪ್ಪ, ಮಾಜಿ ಸಿಎಂಗಳಾದ ಎಚ್‌.ಡಿ.ಕುಮಾರಸ್ವಾಮಿ, ಸಿದ್ದರಾಮಯ್ಯ ಸೇರಿದಂತೆ ಸಾಹಿತ್ಯ ಲೋಕದ ದಿಗ್ಗಜರು ಸಂತಾಪ ಸೂಚಿಸಿದ್ದಾರೆ.

Leave a Reply

error: Content is protected !!
LATEST
KSRTC: ಪುರುಷ ನೌಕರರಿಗೂ ಶಿಶುಪಾಲನಾ ರಜೆ ಸೌಲಭ್ಯ- ಇಂದಿನಿಂದಲೇ ಜಾರಿ- ಎಂಡಿ ಆದೇಶ KSRTC: ಶೇ.15ರಷ್ಟು ಬಸ್‌ ಟಿಕೆಟ್‌ ದರ ಹೆಚ್ಚಳ- ಜ.5ರಿಂದ ಜಾರಿಗೆ ಸಚಿವ ಸಂಪುಟ ಸಭೆ ಅಸ್ತು ದಲೈವಾಲ ಜೀವಕ್ಕೆ ಅಪಾಯವಾದರೆ ದೇಶದಲ್ಲಿ ರೈತದಂಗೆ ಆಗಲಿದೆ: ಕುರುಬೂರು ಶಾಂತಕುಮಾರ್‌ ಎಚ್ಚರಿಕೆ KSRTCಗೆ ರಾಷ್ಟ್ರದ ಮಟ್ಟದ ಒಂಬತ್ತು ಪ್ರಶಸ್ತಿಗಳು- 3ರಾಜ್ಯಗಳಲ್ಲಿ ಪ್ರದಾನ KSRTC 4 ನಿಗಮಗಳ ನಷ್ಟ ಪರಿಹಾರಕ್ಕೆ ಬಸ್ ಪ್ರಯಾಣ ದರ ಹೆಚ್ಚಿಸುವುದು ಅನಿವಾರ್ಯ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ KSRTC: ನೌಕರರ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆಗೆ ಜ.6ರಂದು ಸಿಎಂ ಚಾಲನೆ ಪತ್ರಿಕೋದ್ಯಮ ಕ್ಷೇತ್ರಗಳಲ್ಲಿ ವಿಶಿಷ್ಟ ಸಾಧನೆ ಮಾಡಿದ 32 ಪತ್ರಕರ್ತರಿಗೆ ಪ್ರಶಸ್ತಿ ಕ್ಯಾನ್ಸರ್ ಗೆದ್ದ ಶಿವಣ್ಣ: ಡಬಲ್‌ ಪವರ್‌ನೊಂದಿಗೆ ಬರುತ್ತೇನೆ ಅಂದ ನಟ  ಹೊಸ ವರ್ಷದ ಸಂಭ್ರಮದಲ್ಲಿದ್ದ ಪ್ರಿಯಕರನಿಗೆ ಇರಿದ ಪ್ರೇಯಸಿ -ಅಷ್ಟಕ್ಕೂ ಆಗಿದ್ದೇನು? ಸಿಡ್ನಿಯಲ್ಲಿ 2025ರ ನೂತನ ವರ್ಷ ಸ್ವಾಗತಿಸಿದ ಮಿಲಿಯನ್‌ಗಿಂತಲೂ ಹೆಚ್ಚು ಜನರು