CrimeNEWSದೇಶ-ವಿದೇಶ

ಸಿಂಗಾಪುರದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಮೃತ

ವಿಜಯಪಥ ಸಮಗ್ರ ಸುದ್ದಿ

ಸಿಂಗಾಪುರ: ಕಾರು ಮತ್ತು ಬೈಕ್‌ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಭಾರತೀಯ ಮೂಲದ ವ್ಯಕ್ತಿ ಸೇರಿ ಇಬ್ಬರು ಮೃತಪಟ್ಟಿದ್ದಾರೆ.

ತಮಿಳುನಾಡಿನ ಸುಲ್ತಾನ್‌ ಅಬ್ದುಲ್‌ ಕತಾರ್‌ ರೆಹಮಾನ್‌ (33) ಮತ್ತು ಮಲೇಷ್ಯಾದ ಮಹಮ್ಮದ್‌ ಫಾರುಕ್‌ (27) ಮೃತರು. ಈ ಇಬ್ಬರೂ ಸಿಂಗಾಪುರದಲ್ಲಿ ನೆಲೆಸಿದ್ದು, ಅಲ್ಲಿನ ರೆಸ್ಟೋರೆಂಟ್‌ ಒಂದರಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

ಕಾರು ಕಾಲಕನ ನಿರ್ಲಕ್ಷ್ಯದಿಂದ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗಿದ್ದು, ಈ ಸಂಬಂಧ ಚಾಲಕನನ್ನು ಬಂಧಿಸಲಾಗಿದೆ. ಸುಲ್ತಾನ್‌ ಅವರಿಗೆ ಪತ್ನಿ ಮತ್ತು ಎರಡು ವರ್ಷದ ಪುತ್ರಿ ಇದ್ದಾರೆ. ಇವರು ಕಳೆದ ನಾಲ್ಕು ವರ್ಷದಿಂದ ಸಿಂಗಾಪುರದಲ್ಲಿ ನೆಲೆಸಿದ್ದರು ಎಂದು ಕುಟುಂಬದವರು ತಿಳಿಸಿದ್ದಾರೆ.

Leave a Reply