NEWSಸಿನಿಪಥ

ಸಿನಿಮಾ ಚಿತ್ರೀಕರಣಕ್ಕೆ ಅವಕಾಶ ನೀಡುವ ಕುರಿತು ಇಂದು ಸಿಎಂ ಸಭೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಚಲನಚಿತ್ರ, ಧಾರಾವಾಹಿ, ರಿಯಾಲಿಟಿ ಶೋ ಚಿತ್ರೀಕರಣಕ್ಕೆ ಅವಕಾಶ ನೀಡಬೇಕು ಎಂದು ಮನವಿ ಮಾಡಿರುವ ಹಿನ್ನೆಲೆಯಲ್ಲಿ ಇಂದು (ಮೇ5) ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ಸಭೆ ನಡೆಯಲಿದೆ.

ಕರ್ನಾಟಕ ಟೆಲಿವಿಷನ್‌ ಅಸೋಸಿಯೇಷನ್‌ನ ಕೋರಿಕೆ ಮೇರೆಗೆ  ಸಭೆ ನಡೆಯಲಿದ್ದು ಚಿತ್ರೀಕರಣಕ್ಕೆ ಅವಕಾಶ ನೀಡುವ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಆರ್‌.ಅಶೋಕ್‌ ತಿಳಿಸಿದ್ದಾರೆ.

ಸಿನಿಮಾ, ಕಿರುತೆರೆ, ರಿಯಾಲಿಟಿ ಶೋ ಚಿತ್ರೀಕರಣ ಸ್ಥಗಿತಗೊಂಡಿರುವುದರಿಂದ ಸಾವಿರಾರು ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿದ್ದು ಷರತ್ತು ವಿಧಿಸಿ ಅನುಮತಿ ನೀಡುವಂತೆ ಕೋರಲಾಗಿತ್ತು. ಆದರೆ ಚಿತ್ರೀಕರಣಕ್ಕೆ ಅವಕಾಶ ಕೊಟ್ಟರೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಷ್ಟವಾಗಬಹುದು ಎಂಬ ಕಾರಣಕ್ಕೆ ಸರ್ಕಾರ ಒಪ್ಪಿರಲಿಲ್ಲ.

ಆದರೆ ಇಂದು ನಡೆಯುವ ಸಭೆಯಲ್ಲಿ ಯಾವರೀತಿ ತೀರ್ಮಾನ ತೆದುಕೊಳ್ಳಲಾಗುತ್ತೆಯೋ ಎಂದು ಕಲಾವಿದರು ಎದುರು ನೋಡುತ್ತಿದ್ದಾರೆ.

Leave a Reply