ನಮ್ಮರಾಜ್ಯ

ಸೇವಾ ಮಿತ್ರ ಚಾಮರಾಜನಗರ ಜಿಲ್ಲೆಯಲ್ಲಿ ಯಶಸ್ವಿ ಅನುಷ್ಠಾನ

ವಿಜಯಪಥ ಸಮಗ್ರ ಸುದ್ದಿ

ಚಾಮರಾಜನಗರ: ಸಾಮಾಜಿಕ ಭದ್ರತಾ ಯೋಜನೆಯಡಿ ನೀಡಲಾಗುವ ವಿವಿಧ ಪಿಂಚಣಿ ಸೌಲಭ್ಯವನ್ನು ಪಡೆಯಲು ನಾಗರಿಕರು ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸಿ, ಮನೆ ಬಾಗಿಲಿಗೆ ಸೇವೆ ತಲುಪಿಸುವ ಉದ್ದೇಶದಿಂದ ಆರಂಭಗೊಂಡ ಸೇವಾ ಮಿತ್ರ ಯೋಜನೆ, ಜಿಲ್ಲೆಯಲ್ಲಿ ಯಶಸ್ವಿಯಾಗಿ ಸಾರ್ವಜನಿಕರಿಗೆ ಸೇವೆಗಳನ್ನು ಒದಗಿಸುತ್ತಿದೆ. ಅನುಷ್ಠಾನಗೊಂಡ ಕೆಲ ದಿನಗಳಲ್ಲೇ ನಾಗರಿಕರ ಮನವಿಗೆ ಕೂಡಲೇ ಸ್ಪಂದಿಸುವ ಮುಖೇನ ಅನೇಕರು ತಮ್ಮ ಸೌಲಭ್ಯವನ್ನು ತ್ವರಿತವಾಗಿ ಪಡೆಯಲು ಸಹಾಯಕವಾಗಿದೆ.

ಸೇವಾ ಮಿತ್ರ ಯೋಜನೆಯಡಿ ಸದ್ಯ ಇಂದಿರಾ ಗಾಂಧಿ ವೃದ್ಧಾಪ್ಯ ವೇತನ, ನಿರ್ಗತಿಕ ವಿಧವಾ ವೇತನ, ಸಂಧ್ಯಾಸುರಕ್ಷಾ ಯೋಜನೆ, ಅಂಗವಿಕಲ ಯೋಜನೆ, ಮನಸ್ವಿನಿ ಯೋಜನೆ ಹಾಗೂ ಮೈತ್ರಿ ಯೋಜನೆಗಳ ಪಿಂಚಣಿಯ ಅರ್ಹ ಫಲಾನುಭವಿಗಳಿಗೆ ಸೇವೆ ಒದಗಿಸುವ ಕೆಲಸ ಮಾಡಲಾಗುತ್ತಿದೆ.

ಹೇಗೆ ಕಾರ್ಯನಿರ್ವಹಿಸುತ್ತಿದೆ?

ಪಿಂಚಣಿ ಸೌಲಭ್ಯಕ್ಕಾಗಿ ಆಯಾ ತಾಲ್ಲೂಕಿನ ಕಂಟ್ರೋಲ್ ರೂಂ ಗೆ ಬಂದ ಮನವಿಗಳನ್ನು ಕೂಡಲೇ ಸ್ವೀಕರಿಸಿ, ಸಂಬಂಧಪಟ್ಟ ಗ್ರಾಮ ಲೆಕ್ಕಾಧಿಕಾರಿಗಳು(ಸೇವಾ ಮಿತ್ರ) ಫಲಾನುಭವಿಗಳ ಮನೆಗೆ ಖುದ್ದು ತೆರಳಿ ಅಗತ್ಯ ದಾಖಲಾತಿಗಳನ್ನು ಪಡೆಯುತ್ತಿದ್ದಾರೆ. ನಂತರ ಅರ್ಜಿಗಳನ್ನು ನಿಯಮಾನುಸಾರ ಶೀಘ್ರವಾಗಿ ಕಚೇರಿಯಲ್ಲಿ ಪರಿಶೀಲಿಸಿ, ಅರ್ಹರಿಗೆ ಪಿಂಚಣಿ ಮಂಜೂರು ಮಾಡಲಾಗುತ್ತಿದೆ. ಅಷ್ಟೇ ಅಲ್ಲದೇ ಮನೆಗೆ ಭೇಟಿ ನೀಡಿ ಮಂಜೂರಾತಿ ಆದೇಶ ಪತ್ರವನ್ನೂ ನೀಡಲಾಗುತ್ತಿದೆ.

ಅದರಂತೆ ಈವರೆಗೆ ಜಿಲ್ಲೆಯ ಎಲ್ಲಾ ತಾಲ್ಲೂಕು ಕಂಟ್ರೋಲ್ ರೂಂಗಳಿಂದ ಒಟ್ಟು 370 ಕರೆಗಳು ಸ್ವೀಕೃತವಾಗಿದ್ದು, ಸೇವಾ ಮಿತ್ರ ಜಾರಿಗೆ ಬಂದ 15 ದಿನಗಳಲ್ಲಿ 63 ಅರ್ಹ ಫಲಾನುಭವಿಗಳಿಗೆ ಪಿಂಚಣಿ ಮಂಜೂರು ಮಾಡಿ, ಮಂಜೂರಾತಿ ಪತ್ರವನ್ನೂ ಸಹ ನೀಡಲಾಗಿದೆ. ಉಳಿದ ಪ್ರಕರಣಗಳು ಕಾರ್ಯರೂಪದ ಹಂತದಲ್ಲಿದ್ದು, ಶೀಘ್ರವಾಗಿ ಸೇವೆ ದೊರೆಯುವಂತೆ ಮಾಡುವ ಎಲ್ಲಾ ಕ್ರಮಗಳನ್ನೂ ಕೈಗೊಳ್ಳಲಾಗಿದೆ.

ಕರೆ ಮಾಡಿ ಸೇವೆ ಪಡೆಯಿರಿ

ಸೇವಾ ಮಿತ್ರಕ್ಕಾಗಿ ರಜಾ ದಿನಗಳನ್ನು ಹೊರತುಪಡಿಸಿ, ಉಳಿದೆಲ್ಲಾ ದಿನಗಳ ಕಚೇರಿ ಸಮಯದಲ್ಲಿ ಅಂದರೆ ಬೆಳಿಗ್ಗೆ 10 ರಿಂದ ಸಂಜೆ 5.30 ಗಂಟೆಯವರೆಗೆ ಆಯಾ ತಾಲ್ಲೂಕು ಕಂಟ್ರೋಲ್ ರೂಂ ಗೆ ಕರೆ ಮಾಡಿ ಮನವಿ ಸಲ್ಲಿಸಬಹುದು. ಚಾಮರಾಜನಗರ- ದೂ.ಸಂ: 08226-222046, ಕೊಳ್ಳೇಗಾಲ- ದೂ.ಸಂ: 08224-252042, ಗುಂಡ್ಲುಪೇಟೆ- ದೂ.ಸಂ:08229-222225, ಯಳಂದೂರು- ದೂ.ಸಂ: 08226-240029 ಹಾಗೂ ಹನೂರು- ದೂ.ಸಂ: 08224-268032 ಅನ್ನು ಸಂಪರ್ಕಿಸಿ ಸೌಲಭ್ಯ ಪಡೆಯಬಹುದಾಗಿದೆ.

ಈ ಯೋಜನೆಯಿಂದ ಸಾರ್ವಜನಿಕರಿಗೆ ಸರ್ಕಾರಿ ಸೌಲಭ್ಯವನ್ನು ಮಧ್ಯವರ್ತಿಗಳ ಹಾವಳಿ ಹಾಗೂ ಅನವಶ್ಯಕ ಅಲೆದಾಟವಿಲ್ಲದೇ ಪಡೆಯಲು ಅನುಕೂಲವಾಗಿದೆ. ವಿಶೇಷವಾಗಿ ವಯೋವೃದ್ಧರು, ಅಂಗವಿಕರು ಹಾಗೂ ವೈಯಕ್ತಿಕವಾಗಿ ನೊಂದವರಿಗೆ ಸೇವಾ ಮಿತ್ರ ಯೋಜನೆ ವರದಾನವಾಗಿದೆ.

ಜಿಲ್ಲೆಯಲ್ಲಿ ಸೇವಾ ಮಿತ್ರ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಲಾಗುತ್ತಿದೆ. ಈಗಾಗಲೇ ಸಾಕಷ್ಟು ಮನವಿಗಳು ಸಲ್ಲಿಕೆಯಾಗಿದ್ದು, ಆ ಎಲ್ಲಾ ಮನವಿಗಳಿಗೆ ಕೂಡಲೇ ಸ್ಪಂದಿಸಿ, ಮನೆ ಬಾಗಿಲಿಗೆ ಸೇವೆ ಒದಗಿಸಲಾಗುತ್ತಿದೆ. ಯೋಜನೆ ಜಾರಿಗೆ ಬಂದ 15 ದಿನಗಳಲ್ಲೇ ಅನೇಕ ಮಂದಿ ಪ್ರಯೋಜನ ಪಡೆದಿದ್ದಾರೆ. ಮುಂದೆಯೂ ಇದೇ ವೇಗದಿಂದ ಕಾರ್ಯನಿರ್ವಹಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ತಿಳಿಸಿದ್ದಾರೆ.

Leave a Reply

error: Content is protected !!
LATEST
ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ ಸಾರಿಗೆ ನೌಕರರ ವೇತನದಲ್ಲಿ ಹಣ ಕಟ್‌ ಮಾಡಿ ಎಲ್‌ಐಸಿ ಪಾಲಿಸಿಗೆ ಪಾವತಿಸದ ಬಗ್ಗೆ ದೂರು ಕೊಟ್ಟರೆ ಅಮಾನತು: ಸಚಿವ ರಾಮಲಿಂಗ... BMTC: ಚಾಲಕ ಕಂ. ನಿರ್ವಾಹಕರು ಆಗಸ್ಟ್‌ 14ರೊಳಗೆ ಸಂಪೂರ್ಣ ನಿರ್ವಾಹಕರಾಗಿ ಬದಲಾಗಬೇಕು: ಸಿಟಿಎಂ ಆದೇಶ