NEWSನಮ್ಮಜಿಲ್ಲೆ

ಸ್ಯಾನಿಟೈಸರ್ ಸೇವನೆಯಿಂದ ಲಿವರ್‌ಗೆ ಹಾನಿ

ಬಹು ಅಂಗಾಂಗಕ್ಕೂ ತೊಂದರೆ l ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಎಚ್ಚರಿಕೆ

ವಿಜಯಪಥ ಸಮಗ್ರ ಸುದ್ದಿ

ಧಾರವಾಡ: ಕೊರೊನಾ ನಿಯಂತ್ರಣಕ್ಕಾಗಿ ಆಲ್ಕೋಹಾಲ್ ಮಿಶ್ರಿತ ಸ್ಯಾನಿಟೈಸರ್‌ಗಳು ಬಾಹ್ಯ ಉಪಯೋಗಕ್ಕೆ ಮಾತ್ರ ಸೀಮಿತವಾಗಿದ್ದು, ಯಾವುದೇ ಕಾರಣಕ್ಕೂ ಸೇವನೆಗೆ ಯೋಗ್ಯವಲ್ಲ. ಇದರಿಂದ ಲಿವರ್ ಮತ್ತು ಬಹು ಅಂಗಾಂಗಗಳ ವೈಫಲ್ಯವಾಗಲಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಎಚ್ಚರಿಕೆ ನೀಡಿದೆ.

ಹುಬ್ಬಳ್ಳಿಯಲ್ಲಿ ಕೆಲವು ಯುವಕರು ಮತ್ತು ವ್ಯಕ್ತಿಗಳು ಸ್ಯಾನಿಟೈಸರ್‌ಗಳನ್ನು ಸೇವಿಸುತ್ತಿದ್ದಾರೆ ಎಂಬ ವರದಿಗಳು ಮಾಧ್ಯಮದಲ್ಲಿ ಪ್ರಸಾರವಾಗಿವೆ.

ಸ್ಯಾನಿಟೈಜರ್‌ದಲ್ಲಿ ಅಲ್ಕೋಹಾಲ್ ಮಾತ್ರ ಇರುವುದಿಲ್ಲ. ಇದು ಶೇ.95 ರಷ್ಟು ಇಥೈಲ್ ಅಲ್ಕೋಹಾಲ್, ಶೇ.0.125 ಹೈಡ್ರೋಜನ್ ಪೆರಾಕ್ಸೆöÊಡ್, ಶೇ.1.45 ರಷ್ಟು ಗ್ಲಿಸರಾಲ್ ಒಳಗೊಂಡಿರುತ್ತದೆ.   ಹೆಚ್ಚಿನ ಪ್ರಮಾಣದಲ್ಲಿ ಇಥೆನಾಲ್ ಇರುವುದರಿಂದ ಕುಡಿಯಲು ಇದು ಯಾವುದೇ ಕಾರಣಕ್ಕೂ ಯೋಗ್ಯವಲ್ಲ.

ಇದರ ಸೇವನೆಯಿಂದ ಅನ್ನನಾಳ, ಜಠರ, ಸಣ್ಣಕರಳು, ದೊಡ್ಡಕರಳು, ಪಿತ್ತಜನಕಾಂಗ (ಲೀವರ್)  ಮತ್ತು ಮೇದೋಜಿರಕ ಗ್ರಂಥಿಗಳಿಗೆ ತೀವ್ರವಾದ ಹಾನಿಯಾಗುತ್ತದೆ. ಪ್ರಾಣಹಾನಿಯಾಗುವ ಸಾಧ್ಯತೆಗಳು ಇರುತ್ತವೆ ಎಂದು ಜಿಲ್ಲಾಶಸ್ತ್ರ ಚಿಕಿತ್ಸಕ ಡಾ: ಶಿವಕುಮಾರ್ ಮಾನಕರ ತಿಳಿಸಿದ್ದಾರೆ.

ಸ್ಯಾನಿಟೈಸರ್ ಹೊಟ್ಟೆಯಲ್ಲಿ ಹೋದರೆ ಅನ್ನನಾಳ ತೂತು ಬೀಳುತ್ತೆ, ಲೀವರ್‌ಗಳ ಕ್ರಿಯೆಗೂ ಧಕ್ಕೆ ಬರುತ್ತದೆ ಎಂದಿರುವ ಡಿಎಚ್‌ಒ, ಮನುಷ್ಯ ಸಾಯುವ ಪರಿಸ್ಥಿತಿ ಬರಬಹುದು, ಆದ್ದರಿಂದ ಸ್ಯಾನಿಟೈಜರ್  ಸೇವಿಸಬಾರದು. ಇದು ಕುಡಿಯುವ ವಸ್ತು ಅಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ: ಯಶವಂತ ಮದೀನಕರ ಎಚ್ಚರಿಕೆ ನೀಡಿದ್ದಾರೆ.

ಸಾರ್ವಜನಿಕರು ಸ್ಯಾನಿಟೈಸರ್ ಸೇವನೆ ಮಾಡುತ್ತಿರುವವರ ಬಗ್ಗೆ ಜಿಲ್ಲಾಡಳಿತದ ಸಹಾಯವಾಣಿ 1077 ಅಥವಾ ವಾಟ್ಸ್ಪ್ ಸಂಖ್ಯೆಗಳಾದ 9449847646, 9449847641 ಗಳಿಗೆ ಮಾಹಿತಿ ನೀಡಬಹುದು.

Leave a Reply

error: Content is protected !!
LATEST
ಚಾಮುಂಡಿ ಹುಟ್ಟುಹಬ್ಬ: ಬೆಳ್ಳಿ ಪಲ್ಲಕ್ಕಿ ಉತ್ಸವಕ್ಕೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಚಾಲನೆ ನಾಡ ಅಧಿದೇವತೆ ಚಾಮುಂಡಿ ತಾಯಿಯ ವರ್ಧಂತಿ ಸಂಭ್ರಮ: ಬೆಟ್ಟಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ...