NEWSನಮ್ಮಜಿಲ್ಲೆರಾಜಕೀಯ

ಹೊಂದಾಣಿಕೆ ರಾಜಕಾರಣದಿಂದ ಬಿಜೆಪಿ ಅಸ್ತಿತ್ವಕ್ಕೆ ಧಕ್ಕೆ : ಸಿ.ಎಚ್. ವಿಜಯಶಂಕರ್

ವಿಜಯಪಥ ಸಮಗ್ರ ಸುದ್ದಿ

ಪಿರಿಯಾಪಟ್ಟಣ: ಹಳೆ ಮೈಸೂರಿನ ಹೊಂದಾವಣಿಕೆ ರಾಜಕಾರಣದಿಂದ ಬಿಜೆಪಿ ತನ್ನ ಅಸ್ತಿತ್ವವನ್ನು ಕಳೆದುಕೊಳ್ಳುತ್ತಿದ್ದು ಇದರಿಂದ ಹೊರ ಬಾರದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಮಾಜಿ ಸಂಸದ ಸಿ.ಎಚ್.ವಿಜಯಶಂಕರ್ ತಿಳಿಸಿದರು.

ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಶನಿವಾರ ಬಿಜೆಪಿ ವಿಜಯ ಸಂಕಲ್ಪ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯ ಹಾಗೂ ರಾಷ್ಟ್ರ ರಾಜಕಾರಣದಲ್ಲಿ ಬಿಜೆಪಿ ಎಷ್ಟೇ ಪ್ರಬಲವಾಗಿದ್ದರೂ ಹಳೆ ಮೈಸೂರು ಪ್ರಾಂತ್ಯದಲ್ಲಿ ಹೊಂದಾಣಿಕೆ ರಾಜಕಾರಣ ಮಾಡಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಪಕ್ಷದ ಅಸ್ತಿತ್ವಕ್ಕೆ ಧಕ್ಕೆ ಬರರುತ್ತೀದೆ ಇದನ್ನು ಮನಗಂಡ ಪಕ್ಷದ ವರಿಷ್ಠರು ಹಳೆ ಮೈಸೂರಿನಲ್ಲಿ ಕಮಲ ಅರಳಿಸಲೇ ಬೇಕು ಎಂಬ ನಿರ್ಧಾರಕ್ಕೆ ಬಂದು ಪಕ್ಷ ಸಂಘಟಿಸಲು ಒತ್ತು ನೀಡಲು ಆದ್ಯತೆ ನೀಡಿದ್ದಾಋೆ ಎಂದರು.

ಇನ್ನು ಮುಂದಿನ ವಿಧಾನಸಭಾ ಚುನಾವಣೆಯ ಗೆಲುವಿಗಾಗಿ ಎಲ್ಲ ರೀತಿಯ ತಯಾರಿ ನಡೆಸಿ ಇಂದಿನಿಂದ ವಿಜಯ ಸಂಕಲ್ಪ ಅಭಿಯಾನವನ್ನು ಆರಂಭಿಸಿದ್ದಾರೆ. ಆದ್ದರಿಂದ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ರಾಷ್ಟ್ರೀಯ ನಾಯಕರನ್ನು ಒಳಗೊಂಡು ಈ ಅಭಿಯಾನ ಇಂದಿನಿಂದ ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲೂ ಆರಂಭವಾಗಿ ಜ. 29ರ ವರೆಗೂ ನಡೆಯಲಿದೆ ಎಂದರು.

ಪಿರಿಯಾಪಟ್ಟಣ ತಾಲೂಕಿನ 234 ಬೂತ್ ಮಟ್ಟದಲ್ಲಿಯೂ ನಡೆಯಲಿದೆ. ಮುಂದಿನ ಚುನಾವಣೆಯಲ್ಲಿ ಮತದಾರರ ಒಲವು ಗಳಿಸಲು ಈ ಅಭಿಯಾನ ನಡೆದಿದ್ದು, 9 ದಿನಗಳ ಕಾಲ ಪ್ರತಿ ಗ್ರಾಮಗಳಲ್ಲಿ ಮತದಾರರನ್ನು ಸಂಪರ್ಕಿಸಿ ಸರ್ಕಾರದ ಸಾಧನೆಗಳನ್ನು ಮನವರಿಕೆ ಮಾಡುವ ಕೆಲಸ ನಡೆಯಲಿದೆ. ಹಾಗೆಯೇ ಈ ಅಭಿಯಾನದಲ್ಲಿ ಮಿಸ್‌ಕಾಲ್ ನೀಡುವ ಮೂಲಕ ಬಿಜೆಪಿಯ ಸದಸ್ಯತ್ವ ಅಭಿಯಾನವನ್ನು ನಡೆಸಲಾಗುತ್ತದೆ ಎಂದು ತಿಳಿಸಿದರು.

ತಾಲೂಕು ಬಿಜೆಪಿ ಘಟಕದ ಅಧ್ಯಕ್ಷ ಎಂ.ಎಂ.ರಾಜೇಗೌಡ ಮಾತನಾಡಿದರು. ಪ್ರಧಾನ ಕಾರ್ಯದರ್ಶಿಗಳಾದ ಎಚ್.ಸಿ.ವೀರಭಧ್ರ, ಬೆಮ್ಮತ್ತಿ ಚಂದ್ರು, ಬಸವರಾಜು, ಒಳಚರಂಡಿ ಮತ್ತು ನೀರು ಸರಬರಾಜು ಮಂಡಳಿ ನಿರ್ದೇಶಕ ಆರ್.ಟಿ.ಸತೀಶ್, ಜಿಲ್ಲಾ ಉಪಾಧ್ಯಕ್ಷರಾದ ನಂದಿಪುರ ಲೋಕೇಶ್, ಅಣ್ಣಪ್ಪ, ಮುಖಂಡರಾದ ಕೌಲನಹಳ್ಳಿ ಸೋಮಶೇಖರ್, ಪಿ.ಜೆ.ರವಿ, ಲೋಕಪಾಲಯ್ಯ, ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು