Vijayapatha – ವಿಜಯಪಥ
Saturday, November 2, 2024
NEWS

ಹಂಪಾಪುರ ಕರ್ನಾಟಕ ಕಾವೇರಿ ಗ್ರಾಮೀಣ ಬ್ಯಾಂಕ್‌ನಿಂದ  ರೈತರಿಗೆ ವಂಚನೆ : ನಾಳೆ ರೈತ ಕಬ್ಬುಬೆಳೆಗಾರರ ಸಂಘದಿಂದ ಬ್ಯಾಂಕ್‌ಗೆ ಮುತ್ತಿಗೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಮೈಸೂರು: ಕರ್ನಾಟಕ ಕಾವೇರಿ ಗ್ರಾಮೀಣ ಬ್ಯಾಂಕ್ ಹಂಪಾಪುರ ಶಾಖೆ ರೈತರಿಗೆ ವಂಚನೆ ಮಾಡಿ, ಕಿರುಕುಳ ನೀಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಕಬ್ಬುಬೆಳೆಗಾರ ರೈತರು ಏ. 11ರಂದು ರಾಜ್ಯಾಧ್ಯಕ್ಷ, ರೈತ ರತ್ನ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಬ್ಯಾಂಕಿಗೆ ಬೀಗ ಮುದ್ರೆ ಚಳವಳಿ ಹಮ್ಮಿಕೊಂಡಿದ್ದಾರೆ.

ಬ್ಯಾಂಕ್‌ ಶಾಖೆಯ ಹಿ೦ದಿನ ವ್ಯವಸ್ಥಾಪಕರು ಈ ಭಾಗದ ನೂರಾರು ರೈತರಿಗೆ ಸಾಲ ನೀಡುವ ನೆಪದಲ್ಲಿ ಮುಗ್ಧ ರೈತರಿಂದ ಸಹಿ ಪಡೆದು ಸಾಲದ ಹಣ ರೈತರಿಗೆ ನೀಡದೆ ಬ್ಯಾಂಕ್‌ ವ್ಯವಸ್ಥಾಪಕರು ರೈತರನ್ನು ವಂಚಿಸಿ ಕೋಟ್ಯಂತರ ರೂಪಾಯಿ ಲಪಟಾಯಿಸಿ, ರೈತರನ್ನು ಸಾಲಗಾರರನ್ನಾಗಿ ಮಾಡಿ, ಸಂಕಷ್ಟಕ್ಕೆ ತಳ್ಳಿದ್ದಾರೆ.

ಪ್ರಸ್ತುತ ಅವರು ನಿವೃತ್ತಿಯಾಗಿದ್ದು ಈ ಬಗ್ಗೆ ಕಳೆದ 17-6-22 ರಂದು ಬ್ಯಾಂಕ್‌ ಮುಂದೆ ಚಳವಳಿ ಮಾಡಿದಾಗ ಪ್ರಾದೇಶಿಕ ವ್ಯವಸ್ಥಾಪಕರು ಸ್ಥಳಕ್ಕೆ ಬಂದು ಈ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದರು ಇನ್ನು ಯಾವುದೇ ಕ್ರಮ ಜಾರಿಯಾಗಿಲ್ಲ.

ಜಿಲ್ಲಾಧಿಕಾರಿಗಳು ಅಧಿಕಾರಿಗಳು ಹಾಗೂ ರೈತ ಪ್ರತಿನಿಧಿಗಳ ಸಭೆ ಕರೆದಿದ್ದಾಗ ಈ ವಿಷಯದ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಜಿಲ್ಲಾ ಲೀಡ್ ಬ್ಯಾಂಕ್ ಮುಖ್ಯಸ್ಥರಿಗೆ ಸೂಚನೆ ನೀಡಿದರು ಸಹ ಇಲ್ಲಿಯ ತನಕ ಯಾವುದೇ ಕ್ರಮ ಜಾರಿಯಾಗಿಲ್ಲ,ಆದ್ದರಿಂದ ಬ್ಯಾಂಕ್ ನ ಇನ್ನು ಹಲವಾರು ಸಮಸ್ಯೆಗಳ ಬಗ್ಗೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ರಾಜ್ಯದ ಆರ್‌ಬಿಐ ಮುಖ್ಯಸ್ಥರಿಗೂ ಈ ಬಗ್ಗೆ ದೂರು ಸಲ್ಲಿಸಲಾಗಿತ್ತು ಅವರು ಸಹ ತನಿಖೆ ನಡೆಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿ ಯಾವುದೇ ಕ್ರಮ ಜಾರಿಯಾಗಿಲ್ಲ.

ಕರ್ನಾಟಕ ಗ್ರಾಮೀಣ ಬ್ಯಾಂಕ್‌ ಚಾಮರಾಜನಗರ ಪ್ರಾದೇಶಿಕ ವ್ಯವಸ್ಥಾಪಕರನ್ನು ತನಿಖೆ ನಡೆಸಿರುವ ಬಗ್ಗೆ ವರದಿ ನಕಲನ್ನು ನೀಡುವಂತೆ ಕೋರಲಾಗಿದೆ, ಅವರಿಂದಲೂ ಯಾವುದೇ ಉತ್ತರ ಬಂದಿಲ್ಲ, ವಂಚನೆಗೆ ಒಳಗಾಗಿರುವ ರೈತರನ್ನು ಸಾಲ ವಸೂಲಾತಿಗಾಗಿ ನ್ಯಾಯಾಲಯಕ್ಕೆ ದಾವೆ ದಾಖಲಿಸಿ ಪದೇ ಪದೇ ನೋಟಿಸ್ ನೀಡಿ ಭಯದ ವಾತಾವರಣ ಸೃಷ್ಟಿಸಲಾಗುತ್ತಿದೆ, ಆದ್ದರಿಂದ ರೈತರಿಗೆ ನ್ಯಾಯ ಸಿಗುವ ತನಕ ಬ್ಯಾಂಕ್ ಮುಂದೆ ಸಂಘಟನೆಯ ವತಿಯಿಂದ ಬೀಗ ಮುದ್ರೆ ಚಳವಳಿ ನಡೆಸಲು ತೀರ್ಮಾನಿಸಲಾಗಿದೆ.

ಪ್ರತಿಭಟನೆಗೆ ಸಂಘದ ಜಿಲ್ಲಾ, ತಾಲೂಕು ಪದಾಧಿಕಾರಿಗಳು ಹಾಗೂ ತಾಲೂಕಿನ ರೈತರು, ರೈತ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಬರಬೇಕೆಂದು ಕಬ್ಬುಬೆಳೆಗಾರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬರಡನಪುರ ನಾಗರಾಜ್ ಮನವಿ ಮಾಡಿದ್ದಾರೆ.

Leave a Reply

error: Content is protected !!
LATEST
ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ