NEWSದೇಶ-ವಿದೇಶನಮ್ಮಜಿಲ್ಲೆ

ಹೈಪರ್‌ಸಾನಿಕ್ ಕ್ಷಿಪಣಿ ಪರೀಕ್ಷೆ ಸಕ್ಸಸ್‌ – ಈ ದೇಶಗಳ ಪಟ್ಟಿಗೆ ಭಾರತ ಸೇರ್ಪಡೆ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ಒಡಿಶಾದ ಕರಾವಳಿಯ ಡಾ.ಎಪಿಜೆ ಅಬ್ದುಲ್ ಕಲಾಂ ದ್ವೀಪದಲ್ಲಿ ನಡೆಸಿದ ದೀರ್ಘ-ಶ್ರೇಣಿಯ ಹೈಪರ್‌ಸಾನಿಕ್ ಕ್ಷಿಪಣಿ (Hypersonic missile) ಪರೀಕ್ಷೆ ಯಶಸ್ವಿಯಾಗಿದ್ದು ಚೀನಾ, ರಷ್ಯಾ, ಅಮೆರಿಕದ ಸಾಲಿಗೆ ಈಗ ಭಾರತ ಸೇರ್ಪಡೆಯಾಗಿದೆ.

ಹೌದು! ಡಿಆರ್‌ಡಿಒ ಪರೀಕ್ಷಿಸಿದ ಹೈಪರ್‌ಸಾನಿಕ್ ಕ್ಷಿಪಣಿಯನ್ನು ಭಾರತೀಯ ಸಶಸ್ತ್ರ ಪಡೆಗಳ ಎಲ್ಲ ಸೇವೆಗಳಿಗಾಗಿ 1,500 ಕಿಮೀಗಿಂತ ಹೆಚ್ಚಿನ ವ್ಯಾಪ್ತಿಯ ವಿವಿಧ ಸಿಡಿತಲೆಗಳನ್ನು ಸಾಗಿಸಲು ವಿನ್ಯಾಸಗೊಳಿಸಲಾಗಿದೆ. ಚೀನಾ, ರಷ್ಯಾ, ಅಮೆರಿಕ ಈಗಾಗಲೇ ಹೈಪರ್‌ ಸಾನಿಕ್ ಕ್ಷಿಪಣಿಯನ್ನು ಅಭಿವೃದ್ಧಿ ಪಡಿಸಿವೆ. ಆ ಪಟ್ಟಿಗೆ ಈಗ ಭಾರತ ಕೂಡ ಸೇರಿಕೊಂಡಿರುವುದು ಹೆಮ್ಮೆಯ ವಿಷಯವಾಗಿದೆ.

ಕ್ಷಿಪಣಿಯನ್ನು ಹೈದರಾಬಾದ್‌ನ ಡಾ.ಎಪಿಜೆ ಅಬ್ದುಲ್ ಕಲಾಂ ಕ್ಷಿಪಣಿ ಪ್ರಯೋಗಾಲಯ, ಇತರ ಡಿಆರ್‌ಡಿಒ ಪ್ರಯೋಗಾಲಯಗಳು ಮತ್ತು ಉದ್ಯಮ ಪಾಲುದಾರರಿಂದ ದೇಶೀಯವಾಗಿ ಅಭಿವೃದ್ಧಿಪಡಿಸಲಾಗಿದ್ದು, DRDO ಮತ್ತು ಸಶಸ್ತ್ರ ಪಡೆಗಳ ಹಿರಿಯ ವಿಜ್ಞಾನಿಗಳ ಸಮ್ಮುಖದಲ್ಲಿ ಈ ಪ್ರಯೋಗವನ್ನು ಶನಿವಾರ ನಡೆಸಲಾಗಿದೆ.

ಕ್ಷಿಪಣಿಯ ಯಶಸ್ವಿ ಹಾರಾಟದ ಪ್ರಯೋಗಕ್ಕಾಗಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಡಿಆರ್‌ಡಿಒವನ್ನು ಅಭಿನಂದಿಸಿದ್ದಾರೆ. ಒಡಿಶಾದ ಕರಾವಳಿಯ ಡಾ.ಎಪಿಜೆ ಅಬ್ದುಲ್ ಕಲಾಂ ದ್ವೀಪದಿಂದ ದೀರ್ಘ ವ್ಯಾಪ್ತಿಯ ಹೈಪರ್‌ ಸಾನಿಕ್‌ ಕ್ಷಿಪಣಿಯ ಹಾರಾಟವನ್ನು ಯಶಸ್ವಿಯಾಗಿ ನಡೆಸುವ ಮೂಲಕ ಭಾರತವು ಪ್ರಮುಖ ಮೈಲಿಗಲ್ಲನ್ನು ಸಾಧಿಸಿದೆ. ಇದೊಂದು ಐತಿಹಾಸಿಕ ಕ್ಷಣವಾಗಿದೆ. ಈ ಮಹತ್ವದ ಸಾಧನೆಯಿಂದ ಆಯ್ದ ದೇಶಗಳ ಸಾಲಿನಲ್ಲಿ ನಮ್ಮ ದೇಶವು ಸ್ಥಾನ ಪಡೆದಿದೆ ಎಂದು ಎಕ್ಸ್‌ನಲ್ಲಿ ಸಂತಸ ಹಂಚಿಕೊಂಡಿದ್ದಾರೆ.

ಹೈಪರ್‌ಸಾನಿಕ್‌ ಕ್ಷಿಪಣಿಗಳು ಮೇಲಿನ ವಾತಾವರಣದಲ್ಲಿ ಶಬ್ದಕ್ಕಿಂತ ಐದು ಪಟ್ಟು ಹೆಚ್ಚು ವೇಗದಲ್ಲಿ ಚಲಿಸುತ್ತವೆ ಅಥವಾ ಗಂಟೆಗೆ 6,200 ಕಿಮೀ (3,850 mph) ವೇಗದಲ್ಲಿ ಹೋಗುತ್ತದೆ. ಆದರೆ ಇದು ಖಂಡಾಂತರ ಕ್ಷಿಪಣಿಗಿಂತ ನಿಧಾನವಾಗಿರುತ್ತದೆ.

Leave a Reply

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಮೆಟ್ರೋ ದರ ಏರಿಕೆಗೆ ಕೇಂದ್ರ ಸರ್ಕಾರವೇ ಹೊಣೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವ್ಯಾಪಾರ ವಹಿವಾಟು ಹೆಚ್ಚಿಸಿ, ಉತ್ಪಾದನೆ ಉತ್ತೇಜಿಸುವ ಸರ್ಕಾರದ ಬದ್ಧತೆ ಶ್ಲಾಘನೀಯ: ಕಾಸಿಯಾ ಅಧ್ಯಕ್ಷ ರಾಜಗೋಪಾಲ್ ಮೈಕ್ರೊ ಫೈನಾನ್ಸ್ ಸುಗ್ರಿವಾಜ್ಞೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ ಕರಡಿಗೆ ನಾಗರೀಕರಿಂದ ಬರುವ ಸಲಹೆಗಳ ಸೇರಿಸಿ ಅಂತಿಮ: ರಿಜ್ವಾನ್ ಹರ್ಷದ್ ಎಸ್ಸಿಎಸ್‌ಪಿ, ಟಿಎಸ್ಪಿ ವಿಶೇಷ ಯೋಜನೆ ಫೆ. ಅಂತ್ಯದೊಳಗೆ ಶೇ.100 ರಷ್ಟು ಪ್ರಗತಿ ಸಾಧಿಸಿರಬೇಕು: ಅಧಿಕಾರಿಗಳಿಗೆ ಡಿಸಿ ಆ... ರೈತರ ನಿರಂತರ ಹೋರಾಟಕ್ಕೆ ನಾಳೆಗೆ ವರ್ಷ: ಆದರೂ ಕಿವಿಗೊಡದ ಸರ್ಕಾರ KSRTC: ಫೇಕ್ ಫೋನ್‌ ಪೇ/ UPI ಆಪ್‌ಗಳಿಂದ ದಿನನಿತ್ಯ ನಿರ್ವಾಹಕರಿಗೆ ಆರ್ಥಿಕ ಬರೆ!! KKRTC ಬಸ್‌ನಲ್ಲಿ ಲೈಂಗಿಕ ಕಿರುಕುಳ ನೀಡಿದ ಕಂಡಕ್ಟರ್‌ನಿಂದ ದೂರು ಹಿಂಪಡೆಯುವಂತೆ ಬೆದರಿಕೆ-ಆರೋಪ KSRTC ಅಭಿವೃದ್ಧಿಗೆ ಬಜೆಟ್‌ನಲ್ಲಿ ಅನುದಾನ - ಸಿಎಂ ಜತೆ ಸಚಿವ ರಾಮಲಿಂಗಾರೆಡ್ಡಿ ಚರ್ಚೆ ಬಜೆಟ್‌ನಲ್ಲಿ ನಿಮಗೆ ಸಿಹಿ ಸುದ್ದಿ ಇದೆ: KSRTC ಅಧಿಕಾರಿಗಳಿಗೆ ಸಾರಿಗೆ ಸಚಿವರ ಭರವಸೆ