ಡೆಹ್ರಾಡೂನ್: ಉತ್ತರಾಖಂಡದ ಕೇದಾರನಾಥ ದೇವಾಲಯವನ್ನು ಯಾತ್ರಾರ್ಥಿಗಳಿಗೆ ತೆರೆಯಲು ಸಿದ್ಧತೆ ಮಾಡಿಕೊಳ್ಳುತ್ತಿರುವುದನ್ನು ಪರಿಶೀಲಿಸಲು ತೆರಳಿದ್ದ ಸರ್ಕಾರಿ ಅಧಿಕಾರಿಯೊಬ್ಬರಿಗೆ ಹೆಲಿಕಾಪ್ಟರ್ ರೆಕ್ಕೆ ಬಡಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಗಡ್ವಾಲ್ ಮಂಡಲ್ ವಿಕಾಸ್ ನಿಗಮ್ ಲಿಮಿಟೆಡ್ ಹೆಲಿಪ್ಯಾನ್‌ನಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. ಉತ್ತರಾಖಂಡದ ನಾಗರಿಕ ವಿಮಾನಯಾನ ಅಭಿವೃದ್ಧಿ ಪ್ರಾಧಿಕಾರದ ಹಣಕಾಸು ನಿಯಂತ್ರಕ ಅಮಿತ್ ಸೈನಿ ಮೃತ ಅಧಿಕಾರಿ.
ಇನ್ನು ಉತ್ತರಾಖಂಡದ ಕೇದಾರನಾಥ ದೇವಾಲಯವನ್ನು ಯಾತ್ರಾರ್ಥಿಗಳಿಗೆ ತೆರೆಯಲು ಸಿದ್ಧತೆ ನಡೆಯುತ್ತಿತ್ತು. ಆದರೆ ಯಾತ್ರೆ ಆರಂಭವಾಗುವುದಕ್ಕೂ ಮುನ್ನವೇ ಅವಘಡವೊಂದು ಸಂಭವಿಸಿರುವುದು ನೋವಿನ ಸಂಗತಿ.
ಮೂಲಗಳ ಪ್ರಕಾರ ಹೆಲಿಕಾಪ್ಟರ್‌ನ ಹಿಂದಿನ ಭಾಗದ ರೆಕ್ಕೆ ಅಮಿತ್ ಸೈನಿ ಅವರ ಕತ್ತನ್ನು ಸೀಳಿದೆ. ಇದರಿಂದ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಹಾಳಲಾಗುತ್ತಿದೆ.
ಆದರೆ, ಸೈನಿ ಅವರು ಹೆಲಿಕಾಪ್ಟರ್‌ನ ಹಿಂಬದಿಯ ರೆಕ್ಕೆಯ ಬಳಿಗೆ ಏಕೆ ಹೋದರು ಎಂಬುದು ತಿಳಿದುಬಂದಿಲ್ಲ. ಅವರು ಸೆಲ್ಫಿ ತೆಗೆಯಲು ಮುಂದಾಗಿದ್ದಾಗ ದುರ್ಘಟನೆ ನಡೆದಿದೆ ಎಂಬುದು ವದಂತಿಯಾಗಿದೆ ಎಂದು ಎಸ್‌ಪಿ ವಿಶಾಖ್ ಅಶೋಕ್ ಭದನೆ ತಿಳಿಸಿದ್ದಾರೆ.