Please assign a menu to the primary menu location under menu

CrimeNEWSನಮ್ಮರಾಜ್ಯ

ಹಲ್ಲೆಕೋರರ ಶಿಕ್ಷಿಸಲು ಶ್ರೀಘ್ರದಲ್ಲೇ ಸುಗ್ರೀವಾಜ್ಞೆ

ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿಕೆ

ವಿಜಯಪಥ ಸಮಗ್ರ ಸುದ್ದಿ

ಮೈಸೂರು:   ರಾಜ್ಯ ಸರ್ಕಾರದಿಂದ ಹಲ್ಲೆಕೋರರ ವಿರುದ್ಧ ಶೀಘ್ರ ಸುಗ್ರೀವಾಜ್ಞೆ ಹೊರಡಿಸಲಾಗುವುದು ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.

ಸುದ್ದಿಗಾರರೊಂದಿಗೆ ನಗರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೊನಾ ಶಂಕಿತರ ಚಿಕಿತ್ಸೆಗೆ ತೆರಳುವ ವೈದ್ಯಕೀಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆಗಳಾಗುತ್ತಿರುವ ಹಿನ್ನೆಲೆಯಲ್ಲಿ ಕೇರಳ ಮತ್ತು ಉತ್ತರ ಪ್ರದೇಶದಂತೆ ಹಲ್ಲೆ ನಡೆಸಿದವರ ಮೇಲೆ ಕಠಿಣ ಕಾನೂನು ನಿಲುವು ತೆಗೆದುಕೊಳ್ಳುತ್ತಿದ್ದು ಆ ಮಾದರಿಯಲ್ಲೇ ನಮ್ಮ ರಾಜ್ಯದಲ್ಲೂ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

ಕಾನೂನಿಗಿಂತಲೂ ಹೆಚ್ಚಿನ ಕಠಿಣ ಕ್ರಮಗಳಿದ್ದರೆ ಸೇರಿಸಿ ಸುಗ್ರೀವಾಜ್ಞೆಯೊಂದಿಗೆ ಬಿಗಿ ಕಾನೂನಿನ ಆದೇಶ ಹೊರಬೀಳಲಿದೆ. ಬಳಿಕ ಹಲ್ಲೆಕೋರರನ್ನು ಬಂಧಿಸಿ ಅವರನ್ನು ಜೈಲಿಗಟ್ಟಲಾಗುವುದು ಎಂದು  ಹೇಳಿದರು.

ಸರ್ಕಾರ ಆಶಾ ಕಾರ್ಯಕರ್ತೆಯರ ಪರವಾಗಿದೆ. ಇನ್ನು ಮುಂದೆ ಇಂತಹ ಹಲ್ಲೆ ಪ್ರಕರಣಗಳು ಮರುಕಳಿಸದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದೇವೆ. ಯಾವುದೇ ಕಾರಣಕ್ಕೂ ಇಂತಹ ಘಟನೆಯನ್ನು ನಾನು ಸಹಿಸುವುದಿಲ್ಲ ಎಂದರು

ಮೈಸೂರಿನಲ್ಲಿ 1,561 ಮಂದಿಯನ್ನು ಈಗಾಗಲೇ ಪರೀಕ್ಷೆ ಮಾಡಲಾಗಿದೆ. ಇನ್ನೂ ಪರೀಕ್ಷೆಗಳು ನಡೆಯುತ್ತಿದ್ದು, ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.

1 Comment

  • ಸೇವೆ ಮಾಡಲು ಬಂದವರ ಮೇಲೆಯೇ ಹಲ್ಲೆ ಮಾಡುವ ಇಂತಹ ಕಿಡಿಗೇಡಿಗಳನ್ನು ಶಿಕ್ಷೆಗೆ ಗುರಿಪಡಿಸಲೇ ಬೇಕು

Leave a Reply

error: Content is protected !!
LATEST
KSRTC: ಡಿ.31ರಿಂದ ಕರೆ ಕೊಟ್ಟಿರುವ ಮುಷ್ಕರ ಬೆಂಬಲಿಸದ ನೌಕರರು- ವಿಲವಿಲ ಒದ್ದಾಡುತ್ತಿರುವ ಜಂಟಿ ಸಮಿತಿ ಮುಖಂಡರು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಡಿ.27ರಂದು BMTC & KSRTC ನಿವೃತ್ತ ನೌಕರರ ಪ್ರತಿಭಟನೆ ಮೈಸೂರು: ದೆಹಲಿ ರೈತ ಹೋರಾಟ ಬೆಂಬಲಿಸಿ ಮೇಣದ ಬತ್ತಿ ಬೆಳಗಿಸಿ ಪ್ರತಿಭಟನೆ KSRTC: ಯಾರದೋ ಆರ್ಥಿಕ ಲಾಭಕ್ಕಾಗಿ 4 ವರ್ಷಕ್ಕೊಮ್ಮೆ ನಡೆಯೋ ಈ ಚೌಕಾಸಿ ಪದ್ಧತಿ ಬಿಟ್ಟು ಶಾಶ್ವತ ಪರಿಹಾರಕ್ಕೆ ಬದ್ಧರಾಗೋ... KSRTC: ರಸ್ತೆಗಿಳಿದ 20 ಹೊಸ ಅಂಬಾರಿ ಉತ್ಸವ ಸ್ಲೀಪರ್​​ ಬಸ್​ಗಳು- ಸಚಿವರಿಂದ ಲೋಕಾರ್ಪಣೆ KSRTCಗೆ ₹6543 ಕೋಟಿ ಅನುದಾನ ಬಿಡುಗಡೆ ಮಾಡಿರುವ ನಮಗೆ ₹414 ಕೋಟಿ ಬಿಡುಗಡೆ ಮಾಡುವುದು ಕಷ್ಟವೇ: ರಾಮಲಿಂಗಾರೆಡ್ಡಿ ಗಾಯಾಳು ಅಯ್ಯಪ್ಪ ಮಾಲಾಧಾರಿಗಳ ಆರೋಗ್ಯ ವಿಚಾರಿಸಿದ ಸಚಿವ ಪರಮೇಶ್ವರ್‌ KSRTC ಅಧಿಕಾರಿಗಳಿಲ್ಲದ ಡಿ.31ರ ಸಾರಿಗೆ ಮುಷ್ಕರ ನೌಕರರ ಹರಕೆ ಕುರಿ ಮಾಡುವ ಹೋರಾಟವೇ..!? BBMP- ₹2 ಕೋಟಿ ವೆಚ್ಚದಲ್ಲಿ ರಾಜಕಾಲುವೆ ಅಭಿವೃದ್ಧಿ : ಆಯುಕ್ತ ತುಷಾರ್ ಗಿರಿನಾಥ್ ಡಿ.31 ರಂದು ಇಳಕಲ್‌ನಲ್ಲಿ ಇಪಿಎಸ್ 95 ಪಿಂಚಣಿದಾರರ ಬೃಹತ್‌ ಸಮಾವೇಶ