CrimeNEWSನಮ್ಮರಾಜ್ಯ

ಹಾವೇರಿ: ಖಾಸಗಿ ಬಸ್‌ ಪಲ್ಟಿ ಚಾಲಕ ಸೇರಿ ಇಬ್ಬರು ಮೃತ- 10ಕ್ಕೂ ಹೆಚ್ಚು ಮಂದಿಗೆ ಗಾಯ

ವಿಜಯಪಥ ಸಮಗ್ರ ಸುದ್ದಿ

ಹಾವೇರಿ: ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಚಾಲಕ ಸೇರಿ ಇಬ್ಬರು ಸಾವನ್ನಪ್ಪಿರುವ ಘಟನೆ ಇಂದು ಮುಂಜಾನೆ ಹಾವೇರಿಯಲ್ಲಿ ನಡೆದಿದೆ.

ಗುರುವಾರ ಬ್ಯಾಡಗಿ ಬಳಿಯ ಮೊಟೇ ಬೆನ್ನೂರಿನಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಈ ಅವಘಡ ಸಂಭವಿಸಿದ್ದು, ಈ ವೇಳೆ ಬಸ್‌ ಚಾಲಕ ಸದಾನಂದ (50) ಮತ್ತು ಓರ್ವ ಪ್ರಯಾಣಿಕ ಮೃತಪಟ್ಟಿದ್ದಾರೆ.

ಘಟನೆಯಲ್ಲಿ 10ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಗಾಯಾಳುಗಳನ್ನು ಹಾವೇರಿಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಬಸ್ ಬೆಂಗಳೂರಿನಿಂದ ಮೀರಜ್‍ಗೆ ಹೋಗುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಈ ಅಪಘಾತವಾಗಿದೆ. ಸ್ಥಳಕ್ಕೆ ಬ್ಯಾಡಗಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು