NEWSನಮ್ಮಜಿಲ್ಲೆಸಂಸ್ಕೃತಿ

ಹಸಿರು ಕ್ರಾಂತಿಯ ಮೂಲಕ ದೇಶದ ಆಹಾರ ಸುಭದ್ರತೆ ನೀಡಿದವರು ಬಾಬೂಜಿ: ಪುಟ್ಟರಾಜು

ವಿಜಯಪಥ ಸಮಗ್ರ ಸುದ್ದಿ

ಕೆ.ಆರ್‌.ಪೇಟೆ: ದೇಶದ ಆಹಾರ ಭದ್ರತೆಗೆ ಹಸಿರು ಕ್ರಾಂತಿಯ ಮೂಲಕ ಸುಭದ್ರತೆ ನೀಡಿದ ದೂರ ದೃಷ್ಟಿಯ ಆಡಳಿತಗಾರ ಬಾಬು ಜಗಜೀವನ್ ರಾಮ್ ಆದರ್ಶಗಳು ಆರೋಗ್ಯವಂತ ಸಮಾಜದ ನಿರ್ಮಾಣಕ್ಕೆ ವರದಾನವಾಗಿವೆ ಎಂದು ಕೆ ಆರ್ ಪೇಟೆ ತಾಲ್ಲೂಕು ಬಾಬು ಜಗಜೀವನರಾಮ್ ಸಂಘಗಳ ಒಕ್ಕೂಟದ ಅಧ್ಯಕ್ಷ ಹೊಸ ಹೊಳಲು ಪುಟ್ಟರಾಜು ಹೇಳಿದರು.

ಅವರು ಇಂದು ಕೃಷ್ಣರಾಜಪೇಟೆ ತಾಲೂಕು ಆಡಳಿತದ ವತಿಯಿಂದ ಆಯೋಜಿಸಿದ್ದ ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜೀವನ್ ರಾಮ್ ಅವರ 37ನೇ ವರ್ಷದ ಪುಣ್ಯ ಸ್ಮರಣೆ ಸಮಾರಂಭದಲ್ಲಿ ಬಾಬೂಜಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.

ಭಾರತ ದೇಶದ ಕಾರ್ಮಿಕ, ರಕ್ಷಣಾ ಹಾಗೂ ಕೃಷಿ ಸಚಿವರಾಗಿ  ಹಸಿರು ಕ್ರಾಂತಿಯ ಆಂದೋಲನ ನಡೆಸಿ ದೇಶದ ಆಹಾರ ಭದ್ರತೆಗೆ ಅಮೂಲ್ಯವಾದ ಕಾಣಿಕೆ ನೀಡಿದ  ಬಾಬು ಜಗಜೀವನ್ ರಾಮ್ ಅವರ ಜೀವನದ ಸಾಧನೆಗಳು ಯುವ ಜನರಿಗೆ ದಾರಿದೀಪವಾಗಿವೆ. ಒಬ್ಬ ಸಾಮಾನ್ಯ ರೈತ ಕುಟುಂಬದಲ್ಲಿ ಜನಿಸಿ, ದೇಶದ ಉಪ ಪ್ರಧಾನಮಂತ್ರಿ ಸೇರಿದಂತೆ ವಿವಿಧ ಹುದ್ದೆಗಳಲ್ಲಿ ಆಡಳಿತ ನಡೆಸಿ ಆರೋಗ್ಯವಂತ ಸಮಾಜದ ನಿರ್ಮಾಣಕ್ಕೆ ಅಮೂಲ್ಯವಾದ ಕೊಡುಗೆಯನ್ನು ನೀಡಿರುವ ಬಾಬು ಜಗಜೀವನ್ ರಾಮ್ ಎಂದು ಹೇಳಿದರು.

ಇನ್ನು ಸಾಮಾಜಿಕ ಅಸಮಾನತೆಗಳು ಮೂಢನಂಬಿಕೆ ಹಾಗೂ ವಿವಿಧ ಸಾಮಾಜಿಕ ಅನಿಷ್ಟ ಪದ್ಧತಿಗಳ ನಿರ್ಮೂಲನೆಗೆ ನಿರಂತರವಾಗಿ ಹೋರಾಟ ನಡೆಸಿ ದೇಶದ ಇತಿಹಾಸದ ಪುಟಗಳಲ್ಲಿ ದಾಖಲಾಗಿದ್ದಾರೆ. ನೇರ ನಿಷ್ಠುರ ಸ್ವಭಾವವನ್ನು ಜೀವನದಲ್ಲಿ ರೂಢಿಸಿಕೊಂಡಿದ್ದ ಬಾಬೂಜಿ ಅವರ ದಕ್ಷ ಪ್ರಾಮಾಣಿಕ ಆಡಳಿತವು ಇಂದಿನ ರಾಜಕಾರಣಿಗಳಿಗೆ ಮಾದರಿಯಾಗಿದೆ ಎಂದು ಶ್ಲಾಘಿಸಿದರು..

ಕೆ.ಆರ್.ಪೇಟೆ  ತಹಸೀಲ್ದಾರ್ ನಿಸರ್ಗಪ್ರಿಯ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಹಿರಿಕಳಲೆ ರಾಮದಾಸು, ಪುರಸಭಾ ಸದಸ್ಯ ಡಿ.ಪ್ರೇಮ್ ಕುಮಾರ್, ಕೆ.ಆರ್.ಪೇಟೆ ತಾಲೂಕು ದಲಿತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ರಾಜಯ್ಯ, ದಲಿತ ಮುಖಂಡರಾದ ಕತ್ತರಘಟ್ಟ  ರಾಜೇಶ್, ಬಿಲ್ಲರಾಮನಹಳ್ಳಿ ಸುರೇಶ್, ಸುರೇಶ್ ಹರಿಜನ, ಡಿಸಿಸಿ ಬ್ಯಾಂಕ್ ಮಾಜಿ ನಿರ್ದೇಶಕ ಎಚ್ ಪುಟ್ಟರಾಜು, ಬಿಬಿ ಕಾವಲು ಕಾಂತರಾಜು, ಉಪತಹಶೀಲ್ದಾರ್ ವಿಕಾರ್ ಅಹಮದ್, ಲಕ್ಷ್ಮೀಕಾಂತ್, ಶಿರಸ್ತೆದಾರ್ ರವಿ, ರಾಜಸ್ವ ನಿರೀಕ್ಷಕರಾದ ಹರೀಶ್ ಚಂದ್ರಕಲಾ ಸೇರಿದಂತೆ ಪ್ರಗತಿಪರ ಸಂಘಟನೆಗಳ ಮುಖಂಡರು ಹಾಗೂ ದಲಿತ ಮುಖಂಡರು ಭಾಗವಹಿಸಿದ್ದರು.

 ವರದಿ ಡಾ. ಕೆಆರ್ ನೀಲಕಂಠ ಕೃಷ್ಣರಾಜಪೇಟೆ

Leave a Reply

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹಿಂದಿನಿಂದ ವೇಗವಾಗಿ ಬಂದ ಕಾರು ಮುಂದೆ ಹೋಗುತ್ತಿದ್ದ ಕಾರ್‌ ಮೇಲೇರಿತು! ರೈತ ನಾಯಕ ಕುರುಬೂರು ಶಾಂತಕುಮಾರ್‌ಗೆ ಬೆಂಗಳೂರಿನಲ್ಲಿ ಚಿಕಿತ್ಸೆ: ಸಿಎಂ ಸಿದ್ದರಾಮಯ್ಯ ಮಹಾಕುಂಭ ಮೇಳಕ್ಕೆ ತೆರಳುತ್ತಿದ್ದ 18 ಮಂದಿ ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತಕ್ಕೆ ಸಿಲುಕಿ ಮೃತ ಮಳೆ ನೀರು ಕೊಯ್ಲಿನಿಂದ ಅಂತರ್ಜಲ ವೃದ್ಧಿ: ಕೃಷಿ ಇಲಾಖೆ ಉಪ ನಿರ್ದೇಶಕಿ ಗಾಯತ್ರಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕಕ್ಕೆ ಅರ್ಜಿ ಆಹ್ವಾನ ಬಿಬಿಎಂಪಿ: ಕಸ ಬಿಸಾಡುವ ಸ್ಥಳ ನಿರ್ಮೂಲನೆ ಜತೆ ಜೆತೆಗೆ ಸ್ವಚ್ಛತಾ ಅಭಿಯಾನ KSRTC ರಿಯಾಯಿತಿ ದರದ ಪಾಸ್‌ ಇದ್ದರೂ ತಾರತಮ್ಯತೆ: ನಿವೃತ್ತರಾದ ಮೇಲೆ ಅಧಿಕಾರಿಗಳಿಗೆ ಬಡತನ- ನೌಕರರಿಗೆ ಸಿರಿತನ !! ಪಂಜಾಬ್‌ನಲ್ಲಿ ಕುರುಬೂರು ಶಾಂತಕುಮಾರ್ ಇದ್ದ ಕಾರು ಅಪಘಾತ: ಆಸ್ಪತ್ರೆಗೆ ದಾಖಲು ಬಿಬಿಎಂಪಿ: 1.84 ಲಕ್ಷ ಬೀದಿ ನಾಯಿಗಳಿಗೆ "ಸಂಯುಕ್ತ ಲಸಿಕೆ" ಹಾಕುವ ಗುರಿ- ತುಷಾರ್ ಗಿರಿನಾಥ್ ಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಆಧ್ಯಾದೇಶ ಜಾರಿ