NEWSಕೃಷಿ

ಹಸಿರು ಮನೆ ವಿದ್ಯುತ್ ಬಿಲ್ಲಿಂದ ವಿನಾಯಿತಿ ನೀಡಲು ಸಿಎಂಗೆ ಮನವಿ

ತೋಟಗಾರಿಕಾ ಬೆಳೆಗಳ ಉತ್ತೇಜನಕ್ಕೆ ಆದ್ಯತೆ l ಕೃಷಿ ಸಚಿವ ಬಿ ಸಿ ಪಾಟೀಲ್ ಹೇಳಿಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೃಷಿ ಪಂಪ್‍ಸೆಟ್‍ಗಳ ವಿದ್ಯುತ್ ಬಿಲ್ ಕಟ್ಟುವುದರಿಂದ ರೈತರಿಗೆ ಹೇಗೆ ವಿನಾಯಿತಿ ನೀಡಲಾಗಿದೆಯೋ ಅದೇ ರೀತಿ ತೋಟಗಾರಿಕಾ ಬೆಳೆಗಳಿಗೆ ಬಳಸಲಾಗುವ ಹಸಿರು ಮನೆಗಳಲ್ಲಿ ವಿದ್ಯುತ್ ಬಳಕೆಯ ಬಿಲ್‍ನ್ನು ಕಟ್ಟುವುದರಿಂದ ರೈತರಿಗೆ ವಿನಾಯಿತಿ ನೀಡುವ ಕುರಿತು ಮುಖ್ಯಮಂತ್ರಿಗಳ ಗಮನ ಸೆಳೆಯಲಾಗುವುದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದರು.

ಬೆಂಗಳೂರು ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಕೋವಿಡ್-19 ರ ಹಿನ್ನೆಲೆ ರಾಜ್ಯದಲ್ಲಿ ಜಾರಿಯಿರುವ ಲಾಕ್‍ಡೌನ್‍ನಿಂದಾಗಿ ನಾಡಿನ ರೈತರು ಅನುಭವಿಸುತ್ತಿರುವ ತೊಡಕುಗಳು ಹಾಗೂ ತೊಂದರೆಗಳನ್ನು ದೂರ ಮಾಡಲು ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳ ಬಗ್ಗೆ ಅಧಿಕಾರಿಗಳ ಸಭೆ ನಡೆಸಿ ಪರಿಶೀಲಿಸಿದರು.

ಕೃಷಿಗೆ ಬಳಸಲಾಗುವ ಕೀಟನಾಶಕಗಳ ಉತ್ಪಾದಕರು ಈ ಲಾಕ್‍ಡೌನ್ ಅವಧಿಯ ಲಾಭ ಪಡೆದು ರೈತರಿಗೆ ಕಳಪೆ ಗುಣಮಟ್ಟದ ಉತ್ಪನ್ನಗಳನ್ನು  ಮಾರಾಟ ಮಾಡುತ್ತಿದ್ದು, ಇದೀಗ ಇಲಾಖೆಯಿಂದ ಪರೀಕ್ಷೆಗೆ ಒಳಪಡಿಸಲಾದ 375 ಉತ್ಪನ್ನಗಳ ನಮೂನೆಗಳಲ್ಲಿ 170 ಕಳಪೆ ಗುಣಮಟ್ಟದಿಂದ ಕೂಡಿರುವುದು ದೃಡಪಟ್ಟಿದೆ ಹಾಗೂ 6 ಕೋಟಿ ಮೌಲ್ಯದ ಕೃಷಿಗೆ ಬಳಸಲಾಗುವ ರಸಗೊಬ್ಬರ, ಕೀಟನಾಶಕ, ಕಳಪೆ ಭಿತ್ತನೆ ಬೀಜಗಳನ್ನು ವಶಪಡಿಸಿಕೊಂಡಿದ್ದು, ಪೊಲೀಸರು 32 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ ಎಂದು ತಿಳಿಸಿದರು.

ಈ ಕುರಿತು ಇನ್ನು ಮುಂದೆ ಕೃಷಿ ಹಾಗೂ ತೋಟಗಾರಿಕಾ ಅಧಿಕಾರಿಗಳು ತಪಾಸಣಾ ಭೇಟಿಗಳನ್ನು ಹಮ್ಮಿಕೊಂಡು ನಕಲಿ ಕೀಟನಾಶಕಗಳು ಮಾರಾಟವಾಗದಂತೆ ಕ್ರಮವಹಿಸಿಬೇಕು ಎಂದ ಸಚಿವರು ತಪ್ಪಿದಲ್ಲಿ ಕೃಷಿ ಜಾಗೃತ ಸಮಿತಿ ತಪಾಸಣೆ ನಡೆಸಿದ ಸಂದರ್ಭದಲ್ಲಿ ಪ್ರಕರಣಗಳು ಕಂಡುಬಂದಲ್ಲಿ ಅಂತಹ ಅಧಿಕಾರಿ ಮೇಲೆ ಕ್ರಮ ಜರುಗಿಸಲಾಗುವುದು ಎಂದು  ತಿಳಿಸಿದರು.

ಈಗಾಗಲೇ 19 ಜಿಲ್ಲೆಗಳ ಭೇಟಿ ವರದಿಯನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಿದ್ದು, 23ನೇ ಜಿಲ್ಲೆಯಾಗಿ ಬೆಂಗಳೂರು ನಗರ ಜಿಲ್ಲೆಗೆ ಭೇಟಿ ನೀಡಲಾಗಿದೆ ಎಂದು ತಿಳಿಸಿದರು.

ಕೃಷಿ ಉತ್ಪನ್ನ, ಸಲಕರಣೆ, ಉಪಕರಣಗಳ ಬಳಕೆ ಹಾಗೂ ಸಾಗಾಣಿಕೆ ಮುಕ್ತವಾಗಿಸುವುದಲ್ಲದೇ ದುರಸ್ಥಿ ವ್ಯವಸ್ಥೆಯನ್ನು ತೆರೆಯುವಂತೆ ಸೂಚನೆ ನೀಡಿದ ಅವರು ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಗಳು ಸೇರಿ ರೈತರ ನೆರವಿಗಾಗಿ ಅಗ್ರಿ ವಾರ್ ರೂಂನ್ನು ಸ್ಥಾಪಿಸುವಂತೆ ಸೂಚನೆ ನೀಡಿದರು.

ರೈತರು ವಾಸವಾಗಿರುವ ಸ್ಥಳದಿಂದ ಮತ್ತೊಂದು ಊರಿನಲ್ಲಿರುವ ತಮ್ಮ ಜಮೀನಿಗೆ ತೆರಳಲು ಹಸಿರು ಪಾಸ್ ನೀಡುವಂತೆ ಕೃಷಿ ಇಲಾಖೆ ಜಂಟಿನಿರ್ದೇಶಕರಿಗೆ ಸೂಚಿಸಿದ ಸಚಿವರು ಪಾಸ್ ಅವಧಿಯನ್ನು ಲಾಕ್‍ಡೌನ್ ಮುಗಿಯುವವರೆಗೂ ಚಾಲ್ತಿಯಲ್ಲಿರುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ