NEWSನಮ್ಮಜಿಲ್ಲೆ

ಹಾಲು ಪಡಿತರ ವಿತರಣೆಯಲ್ಲಿ ಮೋಸ ನಡೆದರೆ ಕ್ರಮ

ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್‌ ಕುಮಾರ್‌ ಎಚ್ಚರಿಕೆ

ವಿಜಯಪಥ ಸಮಗ್ರ ಸುದ್ದಿ

ಚಾಮರಾಜನಗರ: ಜಿಲ್ಲೆಯಲ್ಲಿ ಕೋವಿಡ್-19ರ ತಡೆಗಾಗಿ  ಜಾರಿಯಲ್ಲಿ ಇರುವ ಲಾಕ್‍ಡೌನ್ ಹಿನ್ನೆಲೆಯಲ್ಲಿ  ಕೈಗೊಂಡಿರುವ ಹಾಲು, ಪಡಿತರ ವಿತರಣೆಯನ್ನು ಸವiರ್ಪಕವಾಗಿ ನಿರ್ವಹಿಸುವಂತೆ ಪ್ರಾಥಮಿಕ, ಪ್ರೌಢಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಸುರೇಶ್‍ಕುಮಾರ್ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ  ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕೊಳಚೆ ಪ್ರದೇಶದ ವಾಸಿಗಳು ವಲಸೆ ಕಾರ್ಮಿಕರು, ಕಟ್ಟಡ ಕಾರ್ಮಿಕರಿಗೆ ಹಾಲು ವಿತರಣೆಯಾಗುತ್ತಿದೆ. ಇದನ್ನು ಅತ್ಯಂತ ಹೊಣೆಗಾರಿಕೆಯಿಂದ ಅರ್ಹರಿಗೆ ಅವರು ಇರುವ ಕಡೆಗೆ ನೇರವಾಗಿ ತಲುಪಿಸಬೇಕು. ಯಾವುದೇ ಪ್ರದೇಶದಲ್ಲಿ ಒಂದೆಡೆ ಇರಿಸದೇ ಅರ್ಹರಿಗೆ ಖುದ್ದಾಗಿ ತಲುಪಿದೆಯೇ ಎಂಬ ಬಗ್ಗೆ ಪರಿಶೀಲನೆ ಮಾಡಬೇಕು ಎಂದು ಸಚಿವರು ತಿಳಿಸಿದರು.

ಪಡಿತರದಾರರಿಗೆ  ಎರಡು ತಿಂಗಳ ಪಡಿತರ ಪದಾರ್ಥವನ್ನು ಮುಂಗಡವಾಗಿ ನೀಡಲಾಗುತ್ತಿದೆ. ಇದನ್ನು ಪಡೆಯುವಾಗ ಸಮಾಜಿಕ ಅಂತರ ಕಾಯ್ದುಕೊಳ್ಳಲು ಸೂಚಿಸಬೇಕು. ಪಡಿತರದಾರರಿಗೆ ಯಾವುದೇ ತೊಂದರೆಯಾಗಬಾರದು. ಹೆಚ್ಚು ಜನಜಂಗುಳಿಯಾಗದಂತೆ ಸುಗಮವಾಗಿ ಪಡಿತರ ವಿತರಣೆ ಮಾಡಬೇಕು ಎಂದರು.

ಕೃಷಿ ಚಟುವಟಿಕೆಗಳಿಗೆ ಪೂರಕವಾಗಿರುವ ಬಿತ್ತನೆ ಬೀಜ, ರಸಗೊಬ್ಬರ, ಕೃಷಿ ಪರಿಕರಗಳಿಗೆ ಕೊರತೆಯಾಗಬಾರದು. ತೋಟಗಾರಿಕೆ, ಕೃಷಿ ಉತ್ಪನ್ನಗಳ ಮಾರಾಟ ಸಾಗಣೆಗೆ ಯಾವುದೇ ಅಡಚಣೆಯಾಗದಂತೆ ನೋಡಿಕೊಳ್ಳಬೇಕು, ರಸ ಗೊಬ್ಬರ ಕೃಷಿ ಪರಿಕರಗಳ ಅಂಗಡಿ ತೆರೆದು ಅನುಕೂಲ ಕಲ್ಪಿಸಿಕೊಡಬೇಕು ಎಂದರು.

ಕೋವಿಡ್-19 ವೈರಾಣು ಹರಡದಂತೆ ಪ್ರಸ್ತುತ ಕೈಗೊಂಡಿರುವ ಮುನ್ನೆಚ್ಚರಿಕೆ ಕ್ರಮಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಬೇಕು. ಜಿಲ್ಲಾಡಳಿತ ಸಾಕಷ್ಟು ಪೂರ್ವಸಿದ್ದತೆಯೊಂದಿಗೆ ಪ್ರಸ್ತುತ ಸಂದರ್ಭವನ್ನು ಕಟ್ಟೆಚ್ಚರದಿಂದ ನಿರ್ವಹಣೆ ಮಾಡುತ್ತಿದೆ.ಇದೆ ಬಗೆಯ ಕಾಳಜಿ ಧೋರಣೆ ಮುಂದುವರಿಯಲಿ. ಜನರು ಕ್ಷೇಮದಿಂದ ಇರಲು ಎಲ್ಲಾ ಕ್ರಮಗಳು ಉತ್ತಮವಾಗಿರಲಿ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಡಾ. ಎಂ.ಆರ್.ರವಿ ಮಾತನಾಡಿ ಕೃಷಿ ಪರಿಕರಗಳ ಅಂಗಡಿ ತೆರೆಯಲು ಪ್ರಸ್ತುತ ಬೆಳಗ್ಗೆ ಯಿಂದ ಮಧ್ಯಾಹ್ನದ ವರೆಗೆ ಕಾಲವಕಾಶ ನೀಡಲಾಗಿದೆ. ಅಗತ್ಯ ಬೇಡಿಕೆ ಇದ್ದರೆ ಸಮಯವನ್ನು ವಿಸ್ತರಿಸಲು ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದರು.

ಶಾಸಕ ಎನ್.ಮಹೇಶ್, ಸಿ.ಎಸ್.ನಿರಂಜನ್‍ಕುಮಾರ್ ಮಾತನಾಡಿ ಹಾಲು ವಿತರಣೆ ಕಾರ್ಯ ಸಮರ್ಪಕವಾಗಿ ನಡೆಯಬೇಕು, ಅಕ್ರಮವಾಗಿ ಮದ್ಯ ಮಾರಾಟವಾಗದಂತೆ ನಿಗಾವಹಿಸಬೇಕು ಎಂದು ತಿಳಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್.ಆನಂದ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನಿತಾ ಹದ್ದಣ್ಣನವರು, ಮೆಡಿಕಲ್ ಕಾಲೇಜ್ ಡೀನ್ ಡಾ. ಸಂಜೀವ್, ಜಿಲ್ಲಾ ಆರೋಗ್ಯಧಿಕಾರಿ ಡಾ. ಎಂ.,ಸಿ.ರವಿ ಇತರೆ ಅಧಿಕಾರಿಗಳು ಹಾಜರಿದ್ದರು.

ಸಭೆಯ ಆರಂಭಕ್ಕೂ ಮೊದಲು ಉಸ್ತುವಾರಿ ಸಚಿವ ಎಸ್.ಸುರೇಶ್‍ಕುಮಾರ್, ಶಾಸಕರಾದ ಎನ್.ಮಹೇಶ್, ಸಿ.ಎಸ್.ನಿರಂಜನ್‍ಕುಮಾರ್, ಜಿಲ್ಲಾಧಿಕಾರಿ ಡಾ. ಎಂ.ಆರ್.ರವಿ ಸೇರಿದಂತೆ ಇತರರು ಡಾ. ಬಾಬು ಜಗಜೀವನ್‍ರಾಂ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು.

Leave a Reply

error: Content is protected !!
LATEST
ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ