Please assign a menu to the primary menu location under menu

ಕೃಷಿದೇಶ-ವಿದೇಶವಿದೇಶ

ಹೇಮಾವತಿ ಚಾನಲ್ ಟನಲ್‌ನಲ್ಲಿ ಚಿರತೆ ಸೆರೆ ಹಿಡಿದ  ಅರಣ್ಯ ಸಿಬ್ಬಂದಿ   

ವಿಜಯಪಥ ಸಮಗ್ರ ಸುದ್ದಿ

ತುಮಕೂರು: ತಾಲೂಕಿನ ಕಸಬಾ ಹೋಬಳಿ ಆಲನೂರು ಗ್ರಾಮ ಆಚಾರಪಾಳ್ಯ ರಸ್ತೆ, ಹೇಮಾವತಿ ಚಾನಲ್ ಟನಲ್‌ನಲ್ಲಿ ಅಡಗಿದ್ದ ಚಿರತೆಯನ್ನು ಬುಧವಾರ ಅರಣ್ಯ ಇಲಾಖೆಯ 25ಕ್ಕೂ ಹೆಚ್ಚು ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಸೆರೆ ಹಿಡಿಯಲಾಗಿದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಗಿರೀಶ್ ತಿಳಿಸಿದ್ದಾರೆ.

ಡಾ. ಸನ್ನತ್ ಅವರ ಮುಂದಾಳತ್ವದಲ್ಲಿ ಅರಿವಳಿಕೆ ಚುಚ್ಚುಮದ್ದು ನೀಡಿ ಚಿರತೆಯನ್ನು ಸುರಕ್ಷಿತವಾಗಿ ಸೆರೆ ಹಿಡಿಯಲಾಗಿದೆ.  ಸೆರೆ ಹಿಡಿದ ಚಿರತೆಯು ನರಭಕ್ಷಕ ಚಿರತೆಯಾಗಿರುವ ಸಾಧ್ಯತೆ ಹೆಚ್ಚಾಗಿದೆ. ಚಿರತೆಯನ್ನು ಸೆರೆ ಹಿಡಿದ ಸ್ಥಳವು ಮಾನವ ಹತ್ಯೆ ಸಂಭವಿಸಿದ ಸ್ಥಳದಿಂದ ಸುಮಾರು 10 ರಿಂದ 12 ಕಿ.ಮೀ. ದೂರದಲ್ಲಿದ್ದು, ಸಾರ್ವಜನಿಕ ಮಾಹಿತಿ ಹಾಗೂ ಕ್ಯಾಮೆರಾ ಟ್ರಾಪ್ಗಳಲ್ಲಿ ಸೆರೆಯಾಗಿರುವ ಛಾಯಾಚಿತ್ರಗಳ ಆಧಾರದ ಮೇಲೆ ಈ ಪ್ರದೇಶದಲ್ಲಿ ಇನ್ನೂ ಹೆಚ್ಚಿನ ಚಿರತೆಗಳು ಇರುವುದು ತಿಳಿದು ಬಂದಿದೆ.  ಶಂಕಿತ ನರಭಕ್ಷಕ ಚಿರತೆಗಳನ್ನು ತ್ವರಿತವಾಗಿ ಸೆರೆ ಹಿಡಿಯುವ ಕಾರ್ಯಾಚರಣೆ ಮುಂದುವರೆಸಲಾಗಿದೆ.

ಚಿರತೆ ಸೆರೆ ಹಿಡಿಯುವ ಕಾರ್ಯಾಚರಣೆ ನಡೆಯುತ್ತಿರುವುದರಿಂದ ಚಿರತೆ ದಾಳಿ ಬಾಧಿತ ಪ್ರದೇಶಗಳ ಸಾರ್ವಜನಿಕರು ಅತ್ಯಂತ ಜಾಗರೂಕರಾಗಿರಬೇಕು.  ತಮ್ಮ ಸಾಕು ಪ್ರಾಣಿ/ಜಾನುವಾರುಗಳನ್ನು ಸುರಕ್ಷಿತವಾಗಿ ಸಂರಕ್ಷಿಸಿಕೊಳ್ಳಬೇಕು. ವಿಶೇಷವಾಗಿ ಮಕ್ಕಳು ಹಾಗೂ ವೃದ್ಧರ ಬಗ್ಗೆ ಕಾಳಜಿ ವಹಿಸಬೇಕು.  ಮುಸ್ಸಂಜೆ ಹಾಗೂ ಬೆಳಗಿನ ಜಾವದಲ್ಲಿ ಹೊಲ, ಗದ್ದೆ, ತೋಟಗಳಿಗೆ ಹೋಗುವಾಗ ಎಚ್ಚರಿಕೆವಹಿಸಬೇಕು.

ಅದೇ ರೀತಿ ತುಮಕೂರು ವಿಭಾಗ ವ್ಯಾಪ್ತಿ ಬುಕ್ಕಾಪಟ್ಟಣ ವಲಯದ ಜಾನಕಲ್ ಗಸ್ತಿನ ಜಾನಕಲ್ ಗ್ರಾಮದ ಬಳಿ ಜನ-ಜಾನುವಾರುಗಳಿಗೆ ತೊಂದರೆ ನೀಡುತ್ತಿದ್ದ ಚಿರತೆಯನ್ನೂ ಸಹ ಮಾರ್ಚ್ 17ರಂದು ಸೆರೆಹಿಡಿದು ಸುರಕ್ಷಿತವಾಗಿ ಅರಣ್ಯ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

Leave a Reply

error: Content is protected !!
LATEST
ಬೆಳಗಾವಿ: ಸಚಿವರ ಕಾರು ಅಪಘಾತ- ಲಕ್ಷ್ಮೀ ಹೆಬ್ಬಾಳ್ಕರ್ ಬೆನ್ನು ಮೂಳೆ ಮುರಿತ BMTC ಕಂಡಕ್ಟರ್‌: 1ನೇ ಮದುವೆ ಮುಚ್ಚಿಟ್ಟು ಯುವತಿ ಜತೆ ಲವ್ವಿಡವ್ವಿ - ಬಳಿಕ ತಾಳಿ ಕಟ್ಟಿ ಗರ್ಭಿಣಿ ಮಾಡಿ ವಲ್ಲೆ ಎನ್ನು... KSRTC: ಪ್ರಯಾಣಿಕರು ಕಳೆದುಕೊಂಡಿದ ಬೆಲೆ ಬಾಳುವ ಬ್ಯಾಗ್‌ ಮರಳಿಸಿ ಪ್ರಾಮಾಣಿಕತೆ ಮೆರೆದ ತುರುವೇಕೆರೆ ಘಟಕದ ನೌಕರರು ಇಂದು ಮಕರ ಸಂಕ್ರಾಂತಿ ಹಬ್ಬದ ಸಂಭ್ರಮ -ಕಿಚಡಿ ಮುದ್ದೆ, ಪೊಂಗಲ್‌ ರುಚಿಯ ಸವಿ ಮೈಸೂರು: ಬೇಡಿಕೆ ಈಡೇರಿಕೆಗೆ ಮೀನಮೇಷ ಎಣಿಸುತ್ತಿರುವ ಪ್ರಧಾನಿ, ಕೃಷಿ ಮಂತ್ರಿಗಳ ಪ್ರತಿಕೃತಿ ದಹಿಸಲು ಯತ್ನಿಸಿದ ರೈತರ ಬ... ಹೈಪರ್‌ಟೆನ್ಷನ್: ಭಾರತದ ಯುವಜನತೆಗೆ ಅಡಗಿದ ಅಪಾಯ: ಡಾ.ಸಾಯಿಶಂಕರ್ ಹುಬ್ಬಳ್ಳಿ: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಜಾರಿಗೆ ಸಿಎಂ ಒತ್ತಾಯಿಸಿ: ಸಚಿವರಿಗೆ ವಾಯವ್ಯ ವಲಯ ನೌಕರರ ಕೂಟ ಮನವಿ "ಕೆಎಸ್‌ಆರ್‌ಟಿಸಿ ಆರೋಗ್ಯ" ಯೋಜನೆ ಕುರಿತು ನೌಕರರಿಗೆ ಪತ್ರ ಬರೆದು ಖುಷಿ ಹಂಚಿಕೊಂಡ ಸಂಸ್ಥೆ ಎಂಡಿ ಅನ್ಬುಕುಮಾರ್‌ BMTC: ನಗದು ರಹಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯಕ್ಕೆ ನೌಕರರಿಂದ ದಾಖಲೆ ಸಂಗ್ರಹಿಸಲು ಮೂವರು ಅಧಿಕಾರಿಗಳ ನಿಯೋಜನೆ ಮುಂದಿನ ಪೀಳಿಗೆ ಉಳಿವಿಗಾಗಿ ಸಾವಯವ ಕೃಷಿ ಅವಶ್ಯಕ: ಸಚಿವ ಮುನಿಯಪ್ಪ