NEWSನಮ್ಮರಾಜ್ಯ

ಹೈಕೋರ್ಟ್ ರಿಜಿಸ್ಟ್ರಾರ್ ಆಗಿ ಕೆ.ಎಸ್.ಭರತ್ ಕುಮಾರ್ ನೇಮಕ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮೈಸೂರಿನಲ್ಲಿ 3 ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕೆ.ಎಸ್.ಭರತ್ ಕುಮಾರ್ ಅವರನ್ನು ಕರ್ನಾಟಕ ಹೈಕೋರ್ಟ್ ಸ್ಟಾಟಸ್ಟಿಕಲ್ ರಿಜಿಸ್ಟ್ರಾರ್ ಆಗಿ ನೇಮಿಸಲಾಗಿದೆ ಎಂದು ಹೈಕೋರ್ಟ್ ಪ್ರಕಟಣೆಯಲ್ಲಿ ತಿಳಿಸಿದೆ.

2015 ರಲ್ಲಿ ಜಿಲ್ಲಾ ನ್ಯಾಯಾಧೀಶರಾಗಿ ಆಯ್ಕೆಯಾದ ಕೆ.ಎಸ್.ಭರತ್ ಕುಮಾರ್ ಅವರು ಕಳೆದ ಒಂದು ವರ್ಷದಿಂದ ಮೈಸೂರಿನಲ್ಲಿ  ಕಾರ್ಯ ನಿರ್ವಹಿಸುತ್ತಿದ್ದರು. ಇದೀಗ ಹೈಕೋರ್ಟ್‍ನಲ್ಲಿ ರಿಜಿಸ್ಟ್ರಾರ್ ಆಗಿ ನೇಮಕಗೊಳ್ಳುವ ಮೂಲಕ ಉನ್ನತ ಹುದ್ದೆ ಪಡೆದಿದ್ದಾರೆ.

ಕೆ.ಎಸ್.ಭರತ್ ಕುಮಾರ್  ವೀರಾಜಪೇಟೆಯವರಾಗಿದ್ದು, ಜಿಲ್ಲಾ ಪರಿಷತ್ ಮಾಜಿ ಸದಸ್ಯರು ಹಾಗೂ ರಾಜ್ಯ ಕುರುಬರ ಸಂಘದ ಕಾರ್ಯಾಧ್ಯಕ್ಷರಾದ ಕೆ.ಬಿ.ಶಾಂತಪ್ಪ ಮತ್ತು ರತ್ನಮ್ಮ ಅವರ ಪುತ್ರರಾಗಿದ್ದಾರೆ.

Leave a Reply

error: Content is protected !!
LATEST
ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ