Please assign a menu to the primary menu location under menu

ನಮ್ಮರಾಜ್ಯ

ಹೋಮ್ ಕ್ವಾರಂಟೈನ್‍ನಲ್ಲಿರುವವರ ಮನೆಗಳಿಗೆ ಕಾವಲು

ನಿಯಮ ಉಲ್ಲಂಘಿಸಿದರೆ ಕಾನೂನು ಕ್ರಮ l ಜಿಲ್ಲಾಧಿಕಾರಿ ದೀಪಾ ಚೋಳನ್ ಎಚ್ಚರಿಕೆ

ವಿಜಯಪಥ ಸಮಗ್ರ ಸುದ್ದಿ

ಧಾರವಾಡ: ಶಂಕಿತ ಕೊರೊನಾ ಲಕ್ಷಣಗಳಿರುವವರನ್ನು ಹೋಮ್ ಕ್ವಾರಂಟೈನ್ ಮಾಡಲಾಗಿದೆ.  ಅವರ ಮನೆ ಬಾಗಿಲಿಗೆ ಪೋಸ್ಟರಗಳನ್ನು ಅಂಟಿಸಿ, ಕೈಗಳ ಮೇಲೆ ಮೊಹರು ಹಾಕುವ ಕಾರ್ಯ ಕೈಗೊಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಸರ್ಕಾರದ ಮುಖ್ಯಕಾರ್ಯದರ್ಶಿಗಳೊಂದಿಗೆ ವಿಡಿಯೋ ಸಂವಾದ ಬಳಿಕ ಜಿಲ್ಲಾ ಆರೋಗ್ಯ ಕಾರ್ಯಪಡೆಯ ಸಭೆ ಉದ್ದೇಶಿಸಿ ಮಾತನಾಡಿದರು.

ಸರ್ಕಾರದಿಂದ ಬರುವ ನಿರ್ದೇಶನಗಳನ್ನು ಜಿಲ್ಲೆಯಲ್ಲಿ ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ಎಲ್ಲ ಸಂಬಂಧಿತ ಇಲಾಖೆಗಳ ಅಧಿಕಾರಿಗಳು ಶ್ರಮಿಸಬೇಕು. ಕೊರೊನಾ ವೈರಸ್ ನಿಯಂತ್ರಣ ಕೋಶದಲ್ಲಿ ದೂರುಗಳನ್ನು ಸ್ವೀಕರಿಸುವ ಮತ್ತು ಪರಿಹರಿಸುವ ಕಾರ್ಯ ಚುರುಕಾಗಬೇಕು. ಸಮುದಾಯಗಳಲ್ಲಿ ರೋಗ ಹರಡುವುದನ್ನು ತಡೆಯಲು ಮಾನವ ಸಂಪನ್ಮೂಲ ಮತ್ತು ಸಾಮಗ್ರಿಗಳ ನಿರ್ವಹಣೆ ಮುಖ್ಯವಾಗಿದೆ. ಕೊರೊನಾ ಕುರಿತು ಹರಡುವ ವದಂತಿಗಳನ್ನು ಆಗಿಂದಾಗ್ಗೆ ನಿಯಂತ್ರಿಸಿ ಸುಳ್ಳು ಮಾಹಿತಿಗಳನ್ನು ನಂಬದಿರಲು ಸರ್ಕಾರದ ವಿವಿಧ ಇಲಾಖೆಗಳ ವೆಬ್‍ಸೈಟ್‍ಗಳು ಹಾಗೂ  ಸಾಮಾಜಿಕ ಜಾಲತಾಣಗಳ ಮೂಲಕ ಮನವಿ ಮಾಡಿಕೊಂಡು ಸ್ಪಷ್ಟಿಕರಣ ನೀಡಬೇಕು.

ಕೋವಿಡ್-19 ಪಾಸಿಟಿವ್ ಹೊಂದಿರುವ ವ್ಯಕ್ತಿಯೋಂದಿಗೆ ಪ್ರಾಥಮಿಕ ಸಂಪರ್ಕ ಹಾಗೂ 2ನೇ ಹಂತದ ಸಂಪರ್ಕ ಹೊಂದಿದವರು ಮತ್ತು ವಿದೇಶಗಳಿಂದ ಆಗಮಿಸಿರುವ ಜನರ ಚಲನ ವಲನಗಳಿಗೆ ಅವಕಾಶ ನೀಡದೆ ಪ್ರತಿ ದಿನ ಅವರ ಹೋಮ್ ಕ್ವಾರಂಟೈನ್ ನಿಗಾ ಇಟ್ಟು ಖಚಿತಪಡಿಸಿಕೊಳ್ಳಬೇಕು. ಈ ಕಾರ್ಯಕ್ಕೆ ಆರೋಗ್ಯ ಇಲಾಖೆಯ ಜೊತೆಗೆ ಬೇರೆ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ನಿಯೋಜಿಸಲಾಗುವುದು.

ಕಿಮ್ಸ್ ಸಂಸ್ಥೆಗೆ ಕರ್ತವ್ಯಕ್ಕೆ ಆಗಮಿಸುವ ಸಿಬ್ಬಂದಿಯ ಸೌಕರ್ಯಕ್ಕಾಗಿ ಜಿಲ್ಲಾಡಳಿತ ಸಾರಿಗೆ ವ್ಯವಸ್ಥೆ ಕಲ್ಪಿಸಲಿದೆ. ಆರೋಗ್ಯ ಇಲಾಖೆಗೂ ವಾಹನಗಳನ್ನು ನೀಡಲಾಗುವುದು. ಪ್ರತಿ ದಿನ ಆ ವಾಹನಗಳನ್ನು ಮಹಾನಗರ ಪಾಲಿಕೆಯವರು ಶುಚಿಗೊಳಿಸಿಕೊಡಬೇಕು ಎಂದು ಸೂಚಿಸಿದರು.

ಹುಬ್ಬಳ್ಳಿ ಧಾರವಾಡ ಮಹಾನಗರ ಪೊಲೀಸ್ ಆಯುಕ್ತ ಆರ್ ದಿಲೀಪ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವರ್ತಿಕಾ ಕಟಿಯಾರ, ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಬಿ.ಸಿ.ಸತೀಶ, ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಯಶವಂತ ಮದೀನಕರ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಸುಜಾತಾ ಹಸವಿಮಠ, ಕಿಮ್ಸ್ ವೈದ್ಯಕೀಯ ಅಧೀಕ್ಷಕ ಡಾ.ಅರುಣಕುಮಾರ ಚವ್ಹಾಣ, ಉಪವಿಭಾಗಾಧಿಕಾರಿ ಮಹಮ್ಮದ ಜುಬೇರ ಸೇರಿದಂತೆ ಜಿಲ್ಲೆಯ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

error: Content is protected !!
LATEST
ಸರ್ಕಾರಿ ವಾಹನ ಚಾಲಕರಿಗೆ ಕನಿಷ್ಠ ವೇತನ ₹34,100 ನಿಗದಿಗೊಳಿಸಿ ಸರ್ಕಾರ ಆದೇಶ ಇಂದಿನಿಂದ ನಿವೃತ್ತ ಸಾರಿಗೆ ನೌಕರರಿಗೆ ಉಪಧನ, ನಿವೃತ್ತಿ ಗಳಿಕೆ ರಜೆ ನಗದೀಕರಣ ಪಾವತಿಗೆ ಎಂಡಿ ಆದೇಶ BMTC: ಡಿ.24ರಂದು ನೌಕರರಿಗೆ 7 ತಿಂಗಳ ತುಟ್ಟಿಭತ್ಯೆ ಹಿಂಬಾಕಿ ಪಾವತಿಗೆ ಎಂಡಿ ಆದೇಶ KKRTC ಸಂಸ್ಥೆಯ ಸಿಬ್ಬಂದಿಗಳಿಗೆ ಉಚಿತ ಒಂದು ಕೋಟಿ ರೂ. ಅಪಘಾತ ವಿಮೆ ಜತೆಗೆ ನೌಕರರಿಗೆ ಸಿಗುವ ಇತರ ಸೌಲಭ್ಯಗಳು KKRTC: ನಗದು ರಹಿತ ಚಿಕಿತ್ಸೆಗಾಗಿ ಸಿಬ್ಬಂದಿಗಳ ವೈಯಕ್ತಿಕ, ಅವಲಂಬಿತರ ಮಾಹಿತಿ ಸಂಗ್ರಹಿಸಿ- ಅಧಿಕಾರಿಗಳಿಗೆ ಆದೇಶ ಹೈಕೋರ್ಟ್‌ ಆದೇಶದ ಬೆನ್ನಲ್ಲೇ ದಾವಣಗೆರೆಯಲ್ಲಿ ಪೊಲೀಸರಿಂದ ಸಿ.ಟಿ.ರವಿ ಬಿಡುಗಡೆ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ: ಮಂಡ್ಯಕ್ಕೆ ಆಗಮಿಸಿದ ಸಮ್ಮೇಳನಾಧ್ಯಕ್ಷರಿಗೆ ಸ್ವಾಗತ ಉತ್ತಮ ಆಡಳಿತ ಸಪ್ತಾಹ: ಹಿರಿಯ ನಾಗರಿಕರಿಗೆ ಗುರುತಿನ ಚೀಟಿ ವಿತರಿಸಿದ ಡಿಸಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅಶ್ಲೀಲ ಪದ ಬಳಕೆ ಆರೋಪ: ಸಿ.ಟಿ.ರವಿ ಬಂಧನ ಸಾರ್ವಜನಿಕರ ಸಮಸ್ಯೆ ಶೀಘ್ರ ಪರಿಹರಿಸಿ: ಅಧಿಕಾರಿಗಳಿಗೆ ಡಿಸಿ ಸೂಚನೆ