NEWSಕೃಷಿನಮ್ಮರಾಜ್ಯ

ಅಟಲ್‍ಜೀ ಜನಸ್ನೇಹಿ ಕೇಂದ್ರ ಸೇರಿದಂತೆ ವಿವಿಧ ಸೇವೆ ಒದಗಿಸಲು ಷರತ್ತುಬದ್ಧ ಅನುಮತಿ

ವಿಜಯಪಥ ಸಮಗ್ರ ಸುದ್ದಿ

ಚಾಮರಾಜನಗರ: ಜಿಲ್ಲಾ ವ್ಯಾಪ್ತಿಯಲ್ಲಿರುವ ಎಲ್ಲಾ ಅಟಲ್ ಜೀ ಜನಸ್ನೇಹಿ ಕೇಂದ್ರ, ಸ್ಪಂದನಾ ಕೇಂದ್ರ, ಸೇವಾಸಿಂಧು ಹಾಗೂ ಭೂಮಿಕೇಂದ್ರಗಳನ್ನು ತೆರೆದು ಆಧಾರ್ ನೋಂದಣಿ ತಿದ್ದುಪಡಿ ಸೇವೆ ಹೊರತುಪಡಿಸಿ ಸಾರ್ವಜನಿಕರ, ರೈತರ ಹಿತದೃಷ್ಟಿಯಿಂದ ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಪೂರ್ಣ ಪ್ರಮಾಣದಲ್ಲಿ ಒದಗಿಸಲು ಕೆಲ ಷರತ್ತುಗಳೊಂದಿಗೆ ಅನುಮತಿ ನೀಡಿ ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಆದೇಶಿಸಿದ್ದಾರೆ.

ಕೋವಿಡ್-19 ಸೋಂಕು ಹರಡುವಿಕೆಯನ್ನು ತಡೆಯಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನೀಡಿರುವ ಸೂಚನೆಯನ್ನು ಹಾಗೂ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಅಟಲ್ ಜೀ ಜನಸ್ನೇಹಿ ಕೇಂದ್ರ, ಸ್ಪಂದನಾ ಕೇಂದ್ರ, ಸೇವಾಸಿಂಧು ಹಾಗೂ ಭೂಮಿಕೇಂದ್ರಗಳ ಮುಂಭಾಗದಲ್ಲಿ ಗುರುತು ಮಾಡುವುದರೊಂದಿಗೆ ಸಾರ್ವಜನಿಕರಿಗೆ, ರೈತರಿಗೆ ಸ್ಯಾನಿಟೈಸರ್, ಸಾಬೂನು ಹಾಗೂ ನೀರಿನ ವ್ಯವಸ್ಥೆ ಮಾಡಬೇಕು.

ಸಾರ್ವಜನಿಕರು, ರೈತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದಾಗ ಒಬ್ಬೊಬ್ಬರೆ ನಿಲ್ಲುವುದು ಮತ್ತು ಒಬ್ಬರಿಂದ ಮತ್ತೊಬ್ಬರ ಮಧ್ಯೆ ಒಂದು ಮೀಟರ್‍ಗೆ ಎಳೆದು ಅಂತರವನ್ನು ಕಾಯ್ದುಕೊಳ್ಳಬೇಕು. ಸೌಲಭ್ಯ ಪಡೆದ ಸಾರ್ವಜನಿಕರು, ರೈತರು ಕೇಂದ್ರಗಳಿಂದ ತಕ್ಷಣವೇ ತೆರಳಬೇಕು. ಸದರಿ ಆದೇಶವನ್ನು ಪಾಲಿಸದಿದ್ದಲ್ಲಿ ವಿಕೋಪ ನಿರ್ವಹಣಾ ಕಾಯ್ದೆ 2005ರಡಿ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಿದ್ದಾರೆ.

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ