NEWSನಮ್ಮಜಿಲ್ಲೆ

ಅವಳಿ  ನಗರದಲ್ಲಿ 7 ಫೀವರ್ ಕ್ಲಿನಿಕ್ ಗಳು

ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಪರಿಶೀಲನೆ

ವಿಜಯಪಥ ಸಮಗ್ರ ಸುದ್ದಿ

ಧಾರವಾಡ: ಕೋವಿಡ್-19 ಕೊರೊನಾ ರೋಗವು ಮುಖ್ಯವಾಗಿ ಜ್ವರ, ಕೆಮ್ಮು , ಉಸಿರಾಟದ ತೊಂದರೆ, ಅತಿಸಾರ, ಭೇದಿ ಮುಖಾಂತರ ಕಾಣಿಸಿಕೊಳ್ಳುತ್ತಿದೆ.  ಮುಂಜಾಗೃತ ಕ್ರಮವಾಗಿ ಜ್ವರ ಪ್ರಕರಣಗಳನ್ನು ಶೀಘ್ರ ಪತ್ತೆ ಹಚ್ಚುವ ಅವಶ್ಯಕತೆಯನ್ನು ಮನಗಂಡಿರುವ ಸರ್ಕಾರ,  ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನದಡಿಯಲ್ಲಿ ಸ್ಥಾಪಿಸಿರುವ ಫೀವರ್ ಕ್ಲಿನಿಕ್‍ಗಳ ಕಾರ್ಯವನ್ನು ಬೃಹತ್, ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಪರಿಶೀಲಿಸಿದರು.

ಧಾರವಾಡದ ತೇಜಸ್ವಿ ನಗರದ ಪುರೋಹಿತ ನಗರದಲ್ಲಿನ  ನಗರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಇಂದು ಭೇಟಿ ನೀಡಿದ ಸಚಿವರು,  “ಫೀವರ್ ಕ್ಲಿನಿಕ್” ಗಳ ಕಾರ್ಯವಿಧಾನ ಪರಿಶೀಲಿಸಿದರು.

ಜಿಲ್ಲಾಧಿಕಾರಿ ದೀಪಾ ಚೋಳನ್ ಮಾತನಾಡಿ, “ಫೀವರ್ ಕ್ಲಿನಿಕ್ ” ಗಳನ್ನಾಗಿ ಮಾರ್ಪಡಿಸಿದ ನಗರ ಆರೋಗ್ಯ ಕೇಂದ್ರಗಳಲ್ಲಿ ನೋವಲ್ ಕೊರೊನಾ ಸೋಂಕು ಲಕ್ಷಣ ಇರುವ ಸಾರ್ವಜನಿಕರಿಗೆ ಪ್ರತ್ಯೇಕವಾಗಿ  ಆರೋಗ್ಯ  ಸೇವೆಗಳನ್ನು ನೀಡಲಾಗುತ್ತಿದೆ ಎಂದು ತಿಳಿಸಿದರು.

ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ವೈದ್ಯರು ಮತ್ತು ಮಾನವ ಸಂಪನ್ಮೂಲದಿಂದ ಫೀವರ್ ಕ್ಲಿನಿಕ್‍ಗಳನ್ನು ನಡೆಸಲಾಗುತ್ತದೆ. ಫೀವರ್ ಕ್ಲಿನಿಕ್‍ಗೆ ಅವಶ್ಯಕವಾದ ಆರೋಗ್ಯ ಸಲಕರಣೆ ಮತ್ತು ಸಾಮಗ್ರಿಗಳಾದ ಥರ್ಮಲ್ ಸ್ಕ್ಯಾನರ್ , ಎನ್ – 95 ಮಾಸ್ಕ್, ಹ್ಯಾಂಡ್ ಸ್ಯಾನಿಟೈಸರ್ ಮತ್ತು ಸುರಕ್ಷಾ ಕವಚಗಳನ್ನು ಜಿಲ್ಲಾ ವಿಪತ್ತು ನಿರ್ವಹಣಾ ಅನುದಾನದಲ್ಲಿ ಭರಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಶವಂತ್ ಮದೀನಕರ್ ಮಾತನಾಡಿ, ಧಾರವಾಡದ ಜಿಲ್ಲಾ ಆಸ್ಪತ್ರೆ, ಮದಾರಮಡ್ಡಿ, ಬಾರಾಕೋಟ್ರಿ, ಪುರೋಹಿತ ನಗರ, ಹುಬ್ಬಳ್ಳಿಯ ಕಿಮ್ಸ್ ನಲ್ಲಿ 2, ಹಾಗೂ ಚಿಟಗುಪ್ಪಿ ಸಾರ್ವಜನಿಕ ಆಸ್ಪತ್ರೆ ಸೇರಿ ಒಟ್ಟು 07 ಕಡೆಗಳಲ್ಲಿ ಫೀವರ್ ಕ್ಲಿನಿಕ್ ಗಳನ್ನು ಸ್ಥಾಪಿಸಲಾಗಿದೆ. ಫೀವರ್ ಕ್ಲಿನಿಕ್‍ಗಳ ನಿರ್ದಿಷ್ಟ ಮಾರ್ಗಸೂಚಿಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರು ನೀಡಿದ್ದಾರೆ ಎಂದರು.

ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ.ಎಸ್.ಎಂ. ಹೊನಕೇರಿ ಮಾತನಾಡಿ, ಫೀವರ್ ಕ್ಲಿನಿಕ್ ಗಳಲ್ಲಿ ಉಪಯೋಗಿಸಿದ ಮಾಸ್ಕ್ , ಗ್ಲೌಸ್ ಹಾಗೂ ಇತರೆ ವಸ್ತುಗಳನ್ನು ಎಚ್ಚರಿಕೆಯಿಂದ ಜೈವಿಕ ವೈದ್ಯಕೀಯ ತಾಜ್ಯ ನಿರ್ವಹಣೆ ಕಾಯ್ದೆ ಅನ್ವಯ ವಿಲೇವಾರಿ ಮಾಡಲಾಗುವುದು. ಆಪ್ತ ಸಮಾಲೋಚನೆ ಮತ್ತು ಐ.ಇ.ಸಿ ಚಟುವಟಿಕೆಗಳನ್ನು ನಡೆಸಲಾಗುವುದು. ಖಾಸಗಿ ಕ್ಲಿನಿಕ್ / ಆಸ್ಪತ್ರೆಗಳು “ಫೀವರ್ ಕ್ಲಿನಿಕ್” ಗಳಾಗಿ ಕಾರ್ಯನಿರ್ವಹಿಸಲು ಇಚ್ಛಿಸಿದಲ್ಲಿ ಹೆಸರು ನೊಂದಾಯಿಸಿಕೊಂಡು ಅವರಿಗೆ ಅವಶ್ಯ ತರಬೇತಿ ನೀಡಿ ಅವಕಾಶ ಕಲ್ಪಿಸಲಾಗುವುದು ಎಂದು ಸಚಿವರಿಗೆ ಮಾಹಿತಿ ನೀಡಿದರು.

ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಹಿರಿಯ ವೈದ್ಯಾಧಿಕಾರಿ ಡಾ.ಪರಶುರಾಮ ಎಫ್.ಕೆ. ಸೇರಿದಂತೆ ಶುಶ್ರೂಷಕಿಯರು, ಸಹಾಯಕ ಸಿಬ್ಬಂದಿ ಮತ್ತಿತರರು ಇದ್ದರು.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ