ಬೆಂಗಳೂರು: ಇಂದು ಬೆಳಗ್ಗೆ 18 ಮಂದಿಗೆ ಕೊರೊನಾ ಪಾಸಿಟಿವ್ ಇರುವುದು ತಿಳಿದು ಬಂದಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ 445ಕ್ಕೆ ಏರಿಕೆ ಕಂಡಿದೆ.
ಗುರುವಾರ ಮಧ್ಯಾಹ್ನದವರೆಗಿನ ಮಾಹಿತಿಯಂತೆ ಬೆಂಗಳೂರಿನ 9, ಹುಬ್ಬಳ್ಳಿ 2, ಮಂಡ್ಯದಲ್ಲಿ ಎರಡು, ವಿಜಯಪುರದಲ್ಲಿ ಎರಡು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಒಂದು ಪ್ರಕರಣ ದೃಢಪಟ್ಟಿದೆ.
ಬೆಂಗಳೂರಿನ ಹೊಂಗಸಂದ್ರದಲ್ಲಿ ವಾಸವಾಗಿದ್ದ 9 ಮಂದಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದ್ದು, ಈಗ ಅಲ್ಲಿನ ನಿವಾಸಿಗಳಲ್ಲಿ ಆತಂಕ ಹೆಚ್ಚಿಸಿದೆ. ರಾಜ್ಯದಲ್ಲಿ ಕೊರೊನಾ ತನ್ನ ಅಟ್ಟಹಾಸ ಮೆರೆಯುತ್ತಿದ್ದು ಇದರೊಂದಿಗೆ ರಾಜ್ಯದಲ್ಲಿ ಸಾವಿನ ಸಂಖ್ಯೆ 17ಕ್ಕೆ ಏರಿಕೆಯಾಗಿದೆ. ಈವರೆಗೆ ಸೋಂಕಿತರ ಸಂಖ್ಯೆ ರಾಜ್ಯದಲ್ಲಿ 445ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಈವರೆಗೆ 17ಮಂದಿ ಅಸುನೀಗಿದ್ದು, 300 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. 145 ಮಂದಿ ಗುಣಮುಖರಾಗಿದ್ದಾರೆ. ಅಂದರೆ ಮೂರು ದಿನದ ಹಿಂದೆ ಇದ್ದ 280 ಮಂದಿಯಲ್ಲಿ ನಿನ್ನೆ ಒಂದೇದಿನ 17 ಮಂದಿ ಇಂದು 14 ಮಂದಿ ರೋಗ ಮುಕ್ತರಾಗಿ ಮನೆಗೆ ಮರಳಿರುವುದರಿಂದ ಕೊರೊನಾ ಪೀಡಿತರ ಸಂಖ್ಯೆಯಲ್ಲಿ ಇಳಿಮುಖವಾಗಿ ಸಾಗಿತ್ತು. ಆದರೆ ಇಂದು (ಏ.23) ಮತ್ತೆ 18 ಪ್ರಕರಣಗಳು ದೃಢಪಟ್ಟ ಹಿನ್ನೆಲೆಯಲ್ಲಿ ಏರುಗತಿಯಲ್ಲೇ ಸಾಗುತ್ತಿದೆ.
ಕೊರೊನಾ ಪರಿಸ್ಥಿತಿಯನ್ನು ನಿಯಂತ್ರಿಸಲು ಸರ್ಕಾರ ಮತ್ತು ಅಧಿಕಾರಿಗಳು ಹಗಲಿರುಳು ಶ್ರಮಿಸುತ್ತಿದ್ದಾರೆ. ಇನ್ನು ನಾಗರಿಕರು ಕೂಡ ಅವರ ಶ್ರಮಕ್ಕೆ ಕೈಜೋಡಿಸುವ ಮೂಲಕ ಈ ವಿಶ್ವಮಾರಿ ಕೊರೊನಾವನ್ನು ದೇಶದಿಂದ ಬಡಿದೋಡಿಸಲು ಮುಂದಾಗಬೇಕು.
ಇದನ್ನೂ ಓದಿರಿ ಏ.22ರಂದು (ಇಂದು) ರಾಜ್ಯದ 7ಮಂದಿಯಲ್ಲಿ ಕೊರೊನಾ ಸೋಂಕು ದೃಢ
ದೇಶದಲ್ಲಿ 21,797ಕ್ಕೇರಿದ ಸೋಂಕಿತರ ಸಂಖ್ಯೆ
ಇನ್ನು ದೇಶದಲ್ಲಿ ಈವರೆಗೆ 21,797, ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. 681 ಮಂದಿ ಮೃತಪಟ್ಟಿದ್ದಾರೆ. 4,258 ಮಂದಿ ರೋಗಮುಕ್ತರಾಗಿದ್ದಾರೆ. ಪ್ರಪಂಚಾದ್ಯಂತ ಈವರೆಗೆ 26,39,243 ಜನರಲ್ಲಿ ಸೋಂಕು ಇರುವುದನ್ನು ವಿಶ್ವ ಆರೋಗ್ಯ ಸಂಸ್ಥೆ ಖಚಿತಪಡಿಸಿದೆ. ಇನ್ನು 1,83,820 ಜನರು ಮೃತಪಟ್ಟಿದ್ದಾರೆ. 7,15,734 ಮಂದಿ ರೋಗದಿಂದ ಗುಣಮುಖರಾಗಿದ್ದಾರೆ.
https://twitter.com/sriramulubjp/status/1253211832048738304/photo/1