NEWSದೇಶ-ವಿದೇಶ

ಉತ್ತರ ಪ್ರದೇಶದಲ್ಲಿ ಜೂನ್‌ 30ರ ವರೆಗೂ ಗುಂಪು ಸೇರಲು ನಿರ್ಬಂಧ

ಕೊರೊನಾ ಎಫೆಕ್ಟ್‌ l ಸಿಎಂ ಯೋಗಿ ಆದಿತ್ಯನಾಥ್‌ ನೇತೃತ್ವದಲ್ಲಿ ಕ್ರಮಕ್ಕೆ ಮುಂದಾದ ಅಧಿಕಾರಿಗಳು

ವಿಜಯಪಥ ಸಮಗ್ರ ಸುದ್ದಿ

ಲಖನೌ:  ಉತ್ತರ ಪ್ರದೇಶದಲ್ಲಿ ಜೂನ್‌ 30ರವರೆಗೂ ಸಾರ್ವಜನಿಕರು ಗುಂಪು ಸೇರಲು ಅವಕಾಶ ನೀಡಬಾರದು ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಸೂಚನೆ ನೀಡಿದ್ದಾರೆ.

ಶನಿವಾರ ಮುಖ್ಯಮಂತ್ರಿ ಕಚೇರಿಯಿಂದ ಈ ಕುರಿತು ಟ್ವಿಟ್‌ ಮಾಡಿದ್ದು, ಜೂನ್‌ 30ರ ಬಳಿಕ ಪರಿಸ್ಥಿತಿ ಪರಿಶೀಲಿಸಿ ನಿರ್ಣಯ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳಿಗೆ ತಿಳಿಸಿದ್ದಾರೆ ಎಂದು ಟ್ವಿಟ್‌ನಲ್ಲಿ ವಿವರಿಸಲಾಗಿದೆ.

ಸಿಎಂ ಮಾಧ್ಯಮ ಕಾರ್ಯದರ್ಶಿ ಸಹ ಈ ಕರಿತು ಟ್ವಿಟ್‌ ಮಾಡಿದ್ದು, ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ರಂಜಾನ್‌ ತಿಂಗಳು ಆರಂಭವಾಗಿರುವ ಹಿನ್ನೆಲೆಯಲ್ಲಿ ಮುಸ್ಲಿಂ ಸಮುದಾಯದವರು ಮನೆಗಳಲ್ಲಿಯೇ ಪ್ರಾರ್ಥನೆ ಮಾಡುವಂತೆ ಧರ್ಮದ ಎಲ್ಲಾ ಮುಖಂಡರು ಮನವಿ ಮಾಡಿದ್ದಾರೆ. ಆದ್ದರಿಂದ ಎಲ್ಲಿಯೂ ಯಾವುದೇ ಕಾರ್ಯಕ್ರಮಗಳು, ಆಯೋಜನೆಯಾಗದಂತೆ ಕಟ್ಟುನಿಟ್ಟಾಗಿ ನೋಡಿಕೊಳ್ಳಬೇಕು ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್‌ಗಳು ಹಾಗೂ ಪೊಲೀಸ್‌ ಮುಖ್ಯಸ್ಥರ ಜತೆ ನಡೆಸಿದ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಸಿಎಂ ತಿಳಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ಕೊರೊನಾ ಅಟ್ಟಹಾಸ ಮೆರೆಯುತ್ತಿದ್ದು, ಈ ಬಗ್ಗೆ ಯೋಗಿ ಆದಿತ್ಯನಾಥ್‌ ನೇತೃತ್ವದ ಸರ್ಕಾರ ಹಲವು ನಿಯಮಗಳನ್ನು ರೂಪಿಸಿದೆ. ಆದರೂ ದಿನದಿಂದ ದಿನಕ್ಕೆ ಸೋಂಕು ಹೆಚ್ಚಾಗಿ ಆವರಿಸುತ್ತಿದ್ದು, ಅದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಜನರ ಸಹಕಾರವು ಹೆಚ್ಚಾಗಿ ಬೇಕಾಗಿದೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ