ಬೆಂಗಳೂರು: ಮೈಸೂರಿನಲ್ಲಿ ಇಂದು ಒಂದೇ ದಿನ 12 ಮಂದಿಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ಇದು ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಅದರ ಜತೆಗೆ ರಾಜ್ಯದಲ್ಲಿ ಇಂದು ಮಧ್ಯಾಹ್ನದ ವೇಳಗೆ 44 ಹೊಸ ಸೋಂಕಿತರು ಪತ್ತೆಯಾಗಿದ್ದಾರೆ.
ರಾಜ್ಯದಲ್ಲಿ ಕೊರೊನಾ ತನ್ನ ಅಟ್ಟಹಾಸ ಮೆರೆಯುತ್ತಿದ್ದು ಇದರೊಂದಿಗೆ ರಾಜ್ಯದಲ್ಲಿ ಸಾವಿನ ಸಂಖ್ಯೆ 13ಕ್ಕೆ ಏರಿಕೆಯಾಗಿದೆ.
ಇನ್ನು ಹೊಸ 44 ಮಂದಿಯಲ್ಲಿ ಸೋಂಕು ಇರುವುದು ದೃಢಪಟ್ಟಿದ್ದು, ಈವರೆಗೆ ಸೋಂಕಿತರ ಸಂಖ್ಯೆ ರಾಜ್ಯದಲ್ಲಿ 359ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ 9, ಬಳ್ಳಾರಿಯಲ್ಲಿ 7, ಮಂಡ್ಯ ಮತ್ತು ಚಿಕ್ಕಬಳ್ಳಾಪುರದಲ್ಲಿ ತಲಾ ಮೂರು ಹಾಗೂ ಬೀದರ್- ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಲಾ ಒಂದು ಇನ್ನು ವಿಜಯಪಯರದಲ್ಲಿ ಎರಡು ಪ್ರಕರಣಗಳು ಪತ್ತೆಯಾಗಿವೆ.
ಬೆಂಗಳೂರಿನಲ್ಲಿ ನಿನ್ನೆವರೆಗೆ 76 ಇತ್ತು ಇಂದು 9 ಮಂದಿಗೆ ಸೋಂಕು ದೃಢಪಟ್ಟಿದ್ದು, 85ಕ್ಕೇರಿದೆ. ಇನ್ನು ಮೈಸೂರಿನಲ್ಲಿ ನಿನ್ನೆ 61 ಇದ್ದು, ಇಂದು 12 ಹೊಸ ಪ್ರಕರಣ ಪಾಸಿಟಿವ್ ಆಗಿದ್ದು, 73 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ.
ಇದನ್ನೂ ಇಂದು ಮತ್ತೆ ರಾಜ್ಯದ 34 ಮಂದಿಗೆ ಕೊರೊನಾ ಪಾಸಿಟಿವ್
ರಾಜ್ಯದಲ್ಲಿ ಈವರೆಗೆ 13ಮಂದಿ ಅಸುನೀಗಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲು ಸರ್ಕಾರ ಮತ್ತು ಅಧಿಕಾರಿಗಳು ಹಗಲಿರುಳು ಶ್ರಮಿಸುತ್ತಿದ್ದಾರೆ. ಇನ್ನು ನಾಗರಿಕರು ಕೂಡ ಅವರ ಶ್ರಮಕ್ಕೆ ಕೈಜೋಡಿಸುವ ಮೂಲಕ ಈ ವಿಶ್ವಮಾರಿ ಕೊರೊನಾವನ್ನು ದೇಶದಿಂದ ಬಡಿದೋಡಿಸಲು ಮುಂದಾಗಬೇಕು.
ಇನ್ನು ದೇಶದಲ್ಲಿ ಈವರೆಗೆ 13,495 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. 448 ಮಂದಿ ಮೃತಪಟ್ಟಿದ್ದಾರೆ. ಪ್ರಪಂಚಾದ್ಯಂತ ಈವರೆಗೆ 21,48,714 ಜನರಲ್ಲಿ ಸೋಂಕು ಇರುವುದನ್ನು ವಿಶ್ವ ಆರೋಗ್ಯ ಸಂಸ್ಥೆ ಖಚಿತಪಡಿಸಿದೆ. ಇನ್ನು 1,46,898 ಜನರು ಮೃತಪಟ್ಟಿದ್ದಾರೆ. 5,53,227 ಜನ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ತಿಳಿಸಿದೆ.