NEWSನಮ್ಮರಾಜ್ಯ

ಕಂಗಾಲಾಗಿರುವ ಜನರ ಜೀವನಕ್ಕೆ ನೆರವಾಗಿ ಆತ್ಮವಿಶ್ವಾಸ ತುಂಬಿ

ಲಾಕ್‍ಡೌನ್ ನಿಬಾಯಿಸಲು ಸಿದ್ಧರಾಗಿ l ಜಿಲ್ಲಾಡಳಿತಕ್ಕೆ ಮಾಜಿ ಪ್ರಧಾನಿ ದೇವೇಗೌಡ ಸಲಹೆ

ವಿಜಯಪಥ ಸಮಗ್ರ ಸುದ್ದಿ

ಹಾಸನ:  ಜನ ಸಾಮಾನ್ಯರು ಹಾಗೂ ರೈತಾಪಿ ಜನರ ಬದುಕು ತೊಂದರೆಗೆ ಸಿಲುಕಿದೆ ಕೂಲಿ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು ಬಡ ಕುಟುಂಬಗಳು ಕೆಲಸ ಇಲ್ಲದೇ ಕಂಗಾಲಾಗಿದ್ದು ಅವರ ಜೀವನಕ್ಕೆ  ನೆರವಾಗಿ ಆತ್ಮವಿಶ್ವಾಸ ತುಂಬುವ ಕೆಲಸ ಮಾಡಬೇಕು ಎಂದು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಹೇಳಿದರು.

ಅವರು ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಲೋಕಸಭಾ ಸದಸ್ಯರಾದ ಪ್ರಜ್ವಲ್ ರೇವಣ್ಣ ಅವರ ಅಧ್ಯಕ್ಷತೆಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡು ಕೊರೊನಾ ಲಾಕ್‍ಡೌನ್ ಸಮಸ್ಯಯಿಂದ ಸಂಕಷ್ಟಕ್ಕೊಳಗಾದ ಜನರ ಸಮಸ್ಯೆ ಬಗೆಹರಿಸಲು ಜಿಲ್ಲಾಡಳಿತಕ್ಕೆ ಹಲವು ಸಲಹೆಗಳನ್ನು ನೀಡಿದರು.

ಅಕ್ಕಿ ಗೋಧಿ ಬೇಳೆ ಜೊತೆಗೆ ತೀವ್ರ ಬಡತನ ಎದುರಿಸುತ್ತಿರುವವರಿಗೆ ಇತರ ದಿನಬಳಕೆ ಸಾಮಗ್ರಿ ವಿತರಿಸಬೇಕು. ರೈತರ ಉತ್ಪಾದನೆಗಳು ಹಾಳಾಗದಂತೆ ಸೂಕ್ತ ಸಾಗಾಟದ ವ್ಯವಸ್ಥೆ ಮತ್ತು ಮಾರುಕಟ್ಟೆ ಒದಗಿಸಬೇಕು.  ಜಿಲ್ಲಾಡಳಿತ, ಎ.ಪಿ.ಎಂ.ಸಿ., ಕೃಷಿ ಮತ್ತು ತೋಟಗಾರಿಕೆ ಇಲಾಖೆ ಹಾಪ್‍ಕಾಮ್ಸ್‍ಗಳ ನೆರವು ಪಡೆದು ರೈತರಿಗೆ ಸಂಪರ್ಕ ಸೇತುವಾಗಬೇಕು ಎಂದು ಹೇಳಿದರು.

ಕೊರೊನಾ ಲಾಕ್‍ಡೌನ್ ನಿರ್ವಾಹಣೆ ನಡುವೆ ಗ್ರಾಮೀಣಾಂತರ ಪ್ರದೇಶಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಜಿಲ್ಲಾ ಪಂಚಾಯ್ತಿ ಸಿ.ಇ.ಓ. ಹಾಗೂ ತಹಸೀಲ್ದಾರರು ನಿಗಾವಹಿಸಬೇಕು. ರೈತರಿಗೆ ಬಿತ್ತನೆ ಬೀಜ, ರಸಗೊಬ್ಬರ ಪೂರೈಕೆಗೆ ಯಾವುದೇ ಕೊರತೆಯಾಗದಂತೆ ಗಮನಹರಿಸಬೇಕು ಎಂದು ಹೇಳಿದರು.

ಲೋಕ ಸಭಾ ಸದಸ್ಯ ಪ್ರಜ್ವಲ್ ರೇವಣ್ಣ ಮಾತನಾಡಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಜಿಲ್ಲಾಡಳಿತ ಕೈಗೊಂಡಿರುವ ಕ್ರಮ ಅಭಿನಂದನಾರ್ಹ. ಆದರೆ ಕೆಲವು ಜಿಲ್ಲೆಗಳು ಸರಕು ಸಾಗಣೆಗಳ ವಾಹನಗಳ ಸಂಚಾರಕ್ಕೆ ಅಡ್ಡಿಪಡಿಸುತ್ತಿವೆ ಹಣ್ಣು ತರಕಾರಿಗಳ ಪೂರೈಕೆಗೆ ಅವಕಾಶ ನಿರ್ಬಂಧಿಸುತ್ತಿವೆ. ಈ ಬಗ್ಗೆ ಜಿಲ್ಲಾಧಿಕಾರಿಯವರು ನೆರೆ ಹೊರೆಯ ಅಧಿಕಾರಿಗಳೊಂದಿಗೆ ಸಂಪರ್ಕಿಸಿ ಸಮಸ್ಯೆ ಬಗೆಹರಿಸಬೇಕು ಎಂದರು.

ಶಾಸಕರಾದ ಎಚ್.ಡಿ. ರೇವಣ್ಣ ಮಾತನಾಡಿ ಎಲ್ಲಾ ಎ.ಪಿ.ಎಂ.ಸಿ.ಗಳಲ್ಲಿ ರೈತರ ಹಿತ ಸಂರಕ್ಷಣೆಯ ಕಾರ್ಯಗಳಾಗಬೇಕು ಮಧ್ಯವರ್ತಿಗಳ ಹಾವಳಿ ತಪ್ಪಿಸಿ ಲಾಭಾಂಶ ರೈತರಿಗೆ ನೇರವಾಗಿ ದೊರೆಯುವಂತಾಗಬೇಕು ಎಂದರು.

ಅರ್ಧಕ್ಕೆ ನಿಂತಿರುವ ಅಥವಾ ಮುಕ್ತಾಯದ ಹಂತದಲ್ಲಿರು ಕಾಮಗಾರಿಗಳಲ್ಲಿ ಯಂತ್ರೋಪಕರಣಗಳನ್ನು ಬಳಸಿ ಮರು ಕೆಲಸಕ್ಕೆ ಅವಕಾಶ ನೀಡಬೇಕು ಹಾಗೂ ಎಲ್ಲಾ ಗ್ರಾಮಗಳ ಕೆರೆಗಳ ಹೂಳು ತೆಗೆಯುವ ಕಾರ್ಯಕ್ಕೆ ಆದ್ಯತೆ ನೀಡಿ ಮಾಡಿಸಬೇಕು ಎಂದು ಹೆಚ್.ಡಿ. ರೇವಣ್ಣ ಹೇಳಿದರು.

ಜಿಲ್ಲಾಧಿಕಾರಿ ಆರ್.ಗಿರೀಶ್ ಪಡಿತರ ವಿತರಣೆ ತರಕಾರಿ ವ್ಯಾಪಾರ ಎ.ಪಿ.ಎಂ.ಸಿ. ವ್ಯವಸ್ಥೆಗಳಿಗೆ ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರಿಸಿದರು.  ನಿರಾಶ್ರಿತರು, ಕೂಲಿಕಾರ್ಮಿಕರ ಹಸಿವು ನೀಗಲು ಎಸ್.ಡಿ.ಆರ್.ಎಫ್ ನಿದಿಯಡಿ ತಾಲ್ಲೂಕು ಆಡಳಿತಗಳಿಗೆ ಅನುದಾನ ಬಿಡುಗಡೆ ಮಾಡಿದ್ದು ಅಗತ್ಯಕ್ಕೆ ತಕ್ಕಂತೆ ನಿಯಮಾನುಸಾರ ಕ್ರಮ ವಹಿಸಲಾಗುವುದು ಎಂದರು.

ಶಾಸಕರಾದ ಎ.ಟಿ. ರಾಮಸ್ವಾಮಿ, ಎಚ್.ಕೆ. ಕುಮಾರಸ್ವಾಮಿ, ಸಿ.ಎನ್. ಬಾಲಕೃಷ್ಣ ಹಾಗೂ ಕೆ.ಎಸ್. ಲಿಂಗೇಶ್  ಅವರು ಮಾತನಾಡಿ, ಮದ್ಯ ಅಕ್ರಮವಾಗಿ ಮಾರಾಟವಾಗುತ್ತಿದ್ದು ಇದನ್ನು ಸಂಪೂರ್ಣ ನಿಯಂತ್ರಿಸಬೇಕು. ಆಂಬ್ಯುಲೆನ್ಸ್ ಸೇರಿದಂತೆ ತುರ್ತು ಸೇವಾ ವಾಹನಗಳಲ್ಲಿಯೂ ಮದ್ಯ ಸಾಗಾಟದ ಗುಮಾನಿಯಿದ್ದು, ಗಮನಹರಿಸಬೇಕು ಎಂದು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ್ ಗೌಡ ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿವಾಹಕ ಅಧಿಕಾರಿ ಬಿ.ಎ. ಪರಮೇಶ್ ಅವರೂ ಸಹ ಕೊರೋನಾ ನಿಯಂತ್ರಣ ಕ್ರಮಗಳು ಹಾಗೂ ಲಾಕ್‍ಡೌನ್ ಪರಿಸ್ಥಿತಿ ನಿಭಾಯಿಸಲು ಮಾಡಿರುವ ಸುಧಾರಣೆಗಳ ಬಗ್ಗೆ ವಿವರಿಸಿದರು. ಅಪರ ಜಿಲ್ಲಾಧಿಕಾರಿ ಕವಿತ ರಾಜಾರಾಂ. ಉಪ ವಿಭಾಗಾಧಿಕಾರಿ ಡಾ. ನವೀನ್ ಭಟ್ ವಿವಿಧ ಅಧಿಕಾರಿಗಳು ಹಾಜರಿದ್ದರು.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...