NEWSನಮ್ಮಜಿಲ್ಲೆ

ಕೊರೊನಾ ನಿಯಂತ್ರಣಕ್ಕೆ “ಬಿಬಿಎಂಪಿ ಟೆಲಿ ಹೆಲ್ತ್ ಲೈನ್” ಆರಂಭ

07447118949ಕ್ಕೆ ಉಚಿತವಾಗಿ ಕರೆ ಮಾಡಿ ಅಗತ್ಯ ಮಾಹಿತಿ ಪಡೆಯಿರಿ ಎಂದ ಮೇಯರ್‌ ಗೌತಮ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೋವಿಡ್-19 ಹಿನ್ನೆಲೆ ನಗರದ ನಾಗರೀಕರಿಗೆ ಉತ್ತಮ ಸೇವೆ ನೀಡುವ ನಿಟ್ಟಿನಲ್ಲಿ ಬಿಬಿಎಂಪಿಯು ಬ್ಲೂಮ್ ಬರ್ಗ್ ಫಿಲಾಂಥ್ರಪಿಸ್ ಹಾಗೂ ವೈಟಲ್ ಸ್ಟ್ರಾಟಜೀಸ್ ಸಂಸ್ಥೆಗಳ ಸಹಯೋಗದಲ್ಲಿ ಕೋವಿಡ್-19 ಹಾಗೂ ಇನ್ನಿತರೆ ರೋಗಗಳ ಬಗ್ಗೆ ನಾಗರಿಕರಿಗೆ ಪಾಲಿಕೆ ವೈದ್ಯರು ಮಾಹಿತಿ ನೀಡುವ ನಿಟ್ಟಿನಲ್ಲಿ “ಬಿಬಿಎಂಪಿ ಟೆಲಿ ಹೆಲ್ತ್ ಲೈನ್” ಆರಂಭಿಸಲಾಗಿದ್ದು, 07447118949ಗೆ ಉಚಿತವಾಗಿ ಕರೆ ಮಾಡಿ ಅಗತ್ಯ ಮಾಹಿತಿಯನ್ನು ಪಡೆಯಬಹುದಾಗಿದೆ ಎಂದು  ಮೇಯರ್‌ ಗೌತಮ್‌ ಕುಮಾರ್‌  ತಿಳಿಸಿದರು.

ಬಿಬಿಎಂಪಿ ಕಚೇರಿಯಲ್ಲಿ ಇಂದು ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತಮನಾಡಿ, ನಾಗರಿಕರಿಗೆ ಅಗತ್ಯ ಸೇವೆ ಕಲ್ಪಿಸುವ ನಿಟ್ಟಿನಲ್ಲಿ ಈ ಸೇವೆಯನ್ನು ಜಾರಿಗೊಳಿಸಲಾಗಿದ್ದು, ಅದಕ್ಕಾಗಿ ಪಾಲಿಕೆ 42 ವೈದ್ಯರು ನಾಗರಿಕರಿಗೆ ಅಗತ್ಯ ಮಾಹಿತಿ ನೀಡಿಲಿದ್ದಾರೆ. ಹೆಲ್ತ್ ಲೈನ್ ಸಂಖ್ಯೆ 07447118949ಗೆ ಕರೆ ಮಾಡಿ, ಆರೋಗ್ಯ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದಾಗಿದೆ.  ಇಂದಿನಿಂದಲೇ ಈ ಸೇವೆ ಆರಂಭವಾಗಲಿದ್ದು, ನಾಲ್ಕು ಪಾಳಿಯಲ್ಲಿ ವೈದ್ಯರು ಕಾರ್ಯನಿರ್ವಹಿಸಲಿದ್ದಾರೆ. ಬೆಳಗ್ಗೆ 8 ರಿಂದ 11, ಬೆಳಗ್ಗೆ 11 ರಿಂದ ಮಧ್ಯಾಹ್ನ 2, ಮಧ್ಯಾಹ್ನ 2 ರಿಂದ ಸಂಜೆ 5, ಸಂಜೆ 5 ರಿಂದ ರಾತ್ರಿ 8 ಗಂಟೆಯವರೆಗೆ ವೈದ್ಯರು ಕಾರ್ಯನಿರ್ವಹಿಸಲಿದ್ದಾರೆ. ಬೆಳಗ್ಗೆ 8 ರಿಂದ ರಾತ್ರಿ 8 ಗಂಟೆಯವರೆಗೆ ಈ ಸೇವೆ ಲಭ್ಯವಿರಲಿದೆ ಎಂದು ಹೇಳಿದರು.

ಹೆಲ್ತ್ ಲೈನ್‌ಗೆ ಕರೆಮಾಡಿದ ತಕ್ಷಣ ಕಾಲ್ ಸೆಂಟರ್‌ಗೆ ಮಾಹಿತಿ ತಲುಪಿ, ಬಂದಂತಹ ಕರೆಗಳನ್ನು ವೈದ್ಯರಿಗೆ ವರ್ಗಾಯಿಸಲಾಗುತ್ತದೆ. ಕರೆ ಮಾಡಿದ ಪ್ರತಿಯೊಬ್ಬರಿಗೂ ಪ್ರತ್ಯೇಕ ಗುರುತಿನ ಸಂಖ್ಯೆ ನೀಡಲಾಗುತ್ತದೆ. ಹೆಚ್ಚಿನ ಅವಶ್ಯಕತೆ ಇದ್ದಲ್ಲಿ ವೈದ್ಯರು ರೋಗಿಗಳ ಜೊತೆ ಸಮಾಲೋಚನೆ ನಡೆಸಲು ವೀಡಿಯೋ ಕಾನ್ಫರೆನ್ಸ್ ವ್ಯವಸ್ಥೆ ಕೂಡ ಮಾಡಲಾಗಿದೆ. ಕೊರೋನಾ ವೈರಸ್ ಸೋಂಕು ಸಂಕಷ್ಟದ ಸಮಯದಲ್ಲಿ ಜನರು ವೈದ್ಯರ ಬಳಿ ಹೋಗಲು ಹಿಂಜರಿಯುತ್ತಿದ್ದಾರೆ. ಇದರ ಪ್ರಯೋಗವನ್ನು ಈಗಾಗಲೇ ಮಾಡಲಾಗಿದೆ. ಸಾರ್ವಜನಿಕರು ಈ ಹೆಲ್ಪ್ ಲೈನ್ ಬಳಸಿಕೊಳ್ಳಬಹುದು. ಮುಂಬರುವ ದಿನಗಳಲ್ಲಿ ಖಾಸಗಿ ವೈದ್ಯರು ಕೂಡಾ ಇದರ ಜೊತೆ ಕೈಜೋಡಿಸಬಹುದು. ಮುಂಬರುವ ದಿನದಲ್ಲಿ ಇದನ್ನು ಇನ್ನಷ್ಟು ಅಭಿವೃದ್ಧಿ ಪಡಿಸಲಾಗುವುದು ಎಂದರು.

ಆಯುಕ್ತ  ಬಿ.ಎಚ್.ಅನಿಲ್ ಕುಮಾರ್‌ ಮಾತನಾಡಿ, ಕೊರೋನಾ ವೈರೆಸ್ ಸೋಂಕು ಆರಂಭವಾದ ಬಳಿಕ ಸಾಕಷ್ಟು ಖಾಸಗಿ ಆಸ್ಪತ್ರೆಗಳು ಸೇವೆ ನೀಡುವುದನ್ನು ನಿಲ್ಲಿಸಿಬಿಟ್ಟಿವೆ. ಈ ಪೈಕಿ ಎಲ್ಲಾ ಖಾಸಗಿ ನರ್ಸಿಂಗ್ ಹೋಂಗಳಿಗೆ ಕೊರೊನಾ ಹೊರತುಪಡಿಸಿ, ಡಯಾಬಿಟಿಸ್, ಹೃದಯ, ಕಿಡ್ನಿ ಸಂಬಂಧಿತ ಕಾಯಿಲೆಗಳಿಗೆ ಚಿಕಿತ್ಸೆ ನೀಡುವಂತೆ ಸೂಚಿಸಲಾಗಿತ್ತು. ಆದರೂ ಅನೇಕ ಕಡೆ ಸಾರ್ವಜನಿಕರು ಫೀವರ್ ಕ್ಲಿನಿಕ್‌ಗಳಿಗೆ ತೆರಳಲು ಕೂಡಾ ಹಿಂಜರಿಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ “ಬಿಬಿಎಂಪಿ ಟೆಲಿ ಹೆಲ್ತ್ ಲೈನ್” ಮೂಲಕ ವೈದ್ಯರನ್ನು ನೇರವಾಗಿ ಸಂಪರ್ಕಿಸಿ, ರೋಗದ ಲಕ್ಷಣಗಳನ್ನು ತಿಳಿಸಿ ಅದಕ್ಕೆ ಸೂಕ್ತ ಔಷಧ ಪಡೆಯಬಹುದು. ಇ-ಮೇಲ್ ಅಥವಾ ವಾಟ್ಸಾಪ್ ಮೂಲಕ ವೈದ್ಯರು ಔಷಧದ ವಿವರಗಳನ್ನು ನೀಡಲಾಗುತ್ತದೆ ಎಂದು ಹೇಳಿದರು.

ಉಪಮಹಾಪೌರ ರಾಮಮೋಹನ ರಾಜು, ಆಡಳಿತ ಪಕ್ಷದ ನಾಯಕರು ಮುನೀಂದ್ರ ಕುಮಾರ್, ವಿರೋಧ ಪಕ್ಷದ ನಾಯಕರು ಅಬ್ದುಲ್ ವಾಜೀದ್, ಜೆ.ಡಿ.ಎಸ್ ಪಕ್ಷದ ನಾಯಕಿ ನೇತ್ರಾನಾರಾಯಣ್, ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಮಂಜುನಾಥ್ ರಾಜು.ಜಿ,  ವಿಶೇಷ ಆಯುಕ್ತ ಡಾ. ರವಿಕುಮಾರ್ ಸುರಪುರ, ಮುಖ್ಯ ಆರೋಗ್ಯಾಧಿಕಾರಿ ಡಾ. ವಿಜೇಂದ್ರ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ