NEWS

ಕೊರೊನಾ ವಾರಿಯರ್ಸ್ ಸ್ವಯಂ ಸೇವಕರು ಸೇವೆಗೆ ಸಜ್ಜು

ಜಿಲ್ಲಾಡಳಿತದ ನಿರ್ದೇಶನದ ಪ್ರಕಾರ ಕಾರ್ಯ l ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಹೇಳಿಕೆ

ವಿಜಯಪಥ ಸಮಗ್ರ ಸುದ್ದಿ

ಶಿವಮೊಗ್ಗ: ಕೊರೊನಾ ವೈರಸ್ ನಿಯಂತ್ರಣ ಸಂದರ್ಭದಲ್ಲಿ ಜಿಲ್ಲಾಡಳಿತಕ್ಕೆ ನೆರವಾಗಲು ನೋಂದಣಿ ಮಾಡಿಸಿರುವ ಕರೋನಾ ವಾರಿಯರ್ಸ್ ಸ್ವಯಂ ಸೇವಕರು ಜಿಲ್ಲಾಡಳಿತದ ನಿರ್ದೇಶನದ ಪ್ರಕಾರ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದರು.

ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಿಲ್ಲೆಯ ಕೊರೊನಾ ವಾರಿಯರ್ಸ್ ಪ್ರಥಮ ತಂಡಕ್ಕೆ ಅಗತ್ಯ ಸೂಚನೆಗಳನ್ನು ನೀಡಿ ಮಾತನಾಡಿದರು.

ಸಾಮಾಜಿಕ ಜಾಲತಾಣಗಳಲ್ಲಿ ಬರುವ ವದಂತಿಗಳನ್ನು ಜಿಲ್ಲಾಡಳಿತದ ಗಮನಕ್ಕೆ ತಕ್ಷಣ ತರುವುದು, ಲಾಕ್‍ಡೌನ್ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವವರಿಗೆ ಮನೆ ಬಾಗಿಲಿಗೆ ಆಹಾರ, ಅಗತ್ಯವಿರುವವರಿಗೆ ಪಡಿತರ ಪೂರೈಕೆ ಮಾಡುವುದು, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವುದು, ಅಂಗಡಿಗಳ ಮುಂದೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಬಗ್ಗೆ ಕ್ರಮ ವಹಿಸುವುದು, ಜನರು ಗುಂಪು ಸೇರದಂತೆ ಸೂಚನೆಗಳನ್ನು ನೀಡುವುದು, ಸಂಕಷ್ಟದಲ್ಲಿರುವ ಕಾರ್ಮಿಕರಿಗೆ ಆಶ್ರಯ ಇತ್ಯಾದಿ ಕಾರ್ಯಗಳನ್ನು ಕೈಗೊಳ್ಳುವುದು ಸೇರಿದಂತೆ ಜಿಲ್ಲಾಡಳಿತ ಸೂಚಿಸುವ ಕಾರ್ಯಗಳನ್ನು ಕೊರೊನಾ ವಾರಿಯರ್ಸ್ ನಿರ್ವಹಿಸಬೇಕಾಗಿದೆ ಎಂದು ಹೇಳಿದರು.

ಸಾಮಾಜಿಕ ಜಾಲ ತಾಣಗಳಲ್ಲಿ ಕಂಡು ಬರುವ ಯಾವುದೇ ವದಂತಿಗಳು, ಅನಧಿಕೃತ ಸುದ್ದಿಗಳನ್ನು ತಕ್ಷಣ ಜಿಲ್ಲಾ ವಾರ್ತಾಧಿಕಾರಿ ಗಮನಕ್ಕೆ ತರಬೇಕು. ಕೊರೊನಾ ವಾರಿಯರ್ಸ್ ಸ್ವಯಂ ಸೇವಕರಿಗೆ ಸರ್ಕಾರದ ವತಿಯಿಂದ ಗುರುತಿನ ಪತ್ರ ಒದಗಿಸಲಾಗಿದ್ದು, ಯಾವುದೇ ಕಾರಣಕ್ಕೂ ಅದನ್ನು ದುರುಪಯೋಗ ಪಡಿಸಿಕೊಳ್ಳಬಾರದು. ದುರುಪಯೋಗ ಪಡಿಸಿದರೆ ಕಾನೂನು ಕ್ರಮ ಜರುಗಿಸಲಾಗುವುದು. ಸ್ವಯಂ ಸೇವಾ ಕಾರ್ಯಗಳಿಗೆ ಮಾತ್ರ ಗುರುತಿನ ಚೀಟಿ ಬಳಕೆ ಮಾಡಬೇಕು ಎಂದು ಅವರು ಸ್ಪಷ್ಟಪಡಿಸಿದರು.

ರೆಡ್‍ಕ್ರಾಸ್ ಸಂಸ್ಥೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕಾರ್ಮಿಕ ಸೊಸೈಟಿ ಜಂಟಿಯಾಗಿ ಕೊರೊನಾ ವಾರಿಯರ್ಸ್‍ಗಳನ್ನು ಆನ್‍ಲೈನ್ ಮೂಲಕ ನೋಂದಣಿ ಮಾಡಿಸಿ ಈಗಾಗಲೇ ತರಬೇತಿ ನೀಡಿದೆ. ಜಿಲ್ಲೆಯಲ್ಲಿ 200ಕ್ಕೂ ಅಧಿಕ ಮಂದಿ ಸ್ವಯಂ ಸೇವಕರಾಗಿ ನೋಂದಾಯಿಸಿಕೊಂಡಿದ್ದಾರೆ ಎಂದು ತಿಳಿಸಿದರು.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ