NEWSನಮ್ಮರಾಜ್ಯ

ಕೊರೊನಾ ವೈರಸ್ ಜಾಗೃತಿಗೆ ಸ್ವಾಮೀಜಿ ನೇತೃತ್ವದಲ್ಲಿ ಅಭಿಯಾನ

ವಿವಿಧ ಬಡವಾಣೆ ಮತ್ತು ಬೀದಿಗಳಲ್ಲಿ ಟಂಟಂ ವಾಹನದಲ್ಲಿ ಸೇಡಂ ಪೊಲೀಸರಿಂದ ವಿನೂತನ ಪ್ರಯೋಗ

ವಿಜಯಪಥ ಸಮಗ್ರ ಸುದ್ದಿ

ಕಲಬುರಗಿ: ಮಹಾಮಾರಿ ಕೊರೊನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ, ಸ್ವಯಂ ಸೇವಾ ಸಂಸ್ಥೆಗಳು ಜನರಲ್ಲಿ ಜಾಗೃತಿ ಮೂಡಿಸಲು ಅನೇಕ ಪ್ರಯತ್ನಗಳು ನಡೆಸುತ್ತಿವೆ. ಜಿಲ್ಲೆಯ ಸೇಡಂ ಪಟ್ಟಣದಲ್ಲಿ ಪೊಲೀಸ್ ಇಲಾಖೆಯು ಸಹ ಶ್ರೀ ಕೊತ್ತಲ ಬಸವೇಶ್ವರ ದೇವಸ್ಥಾನದ ಪೂಜ್ಯರಾದ ಶ್ರೀ ಸದಾಶಿವ ಸ್ವಾಮಿಗಳ ನೇತೃತ್ವದಲ್ಲಿ ಅಭಿಯಾನ ಕೈಗೊಳ್ಳುವ ಮೂಲಕ ವಿನೂತನ ಪ್ರಯೋಗಕ್ಕೆ ಮುಂದಾಗಿದೆ.

ಗುರುವಾರ ಬೆಳಗ್ಗೆ ಹಳೇ ಸೇಡಂ ಪಟ್ಟಣದ ವಿವಿಧ ಬಡವಾಣೆ ಮತ್ತು ಬೀದಿಗಳಲ್ಲಿ ಟಂಟಂ ವಾಹನದಲ್ಲಿ ಸಂಚರಿಸಿದ ಸೇಡಂನ ಕೊತ್ತಲ ಬಸವೇಶ್ವರ ದೇವಸ್ಥಾನದ ಶ್ರೀ ಸದಾಶಿವ ಸ್ವಾಮೀಜಿಗಳು ಧ್ವನಿವರ್ಧಕ ಮೂಲಕ ಕೊರೊನಾ ವೈರಸ್ ಹರಡದಂತೆ ಸಾರ್ವಜನಿಕರು ವಹಿಸಬೇಕಾದ ಎಚ್ಚರಿಕೆ ಕ್ರಮಗಳ ಬಗ್ಗೆ ಅರಿವು ಮೂಡಿಸಿದರು.

ಮಹಾಮಾರಿ ಕೊರೋನಾ ಸೋಂಕಿನಿಂದ ಕಲಬುರಗಿಯಲ್ಲಿ ಮೊದಲ ವ್ಯಕ್ತಿ ಮೃತಪಟ್ಟಿರುವುದು ತಮಗೆಲ್ಲ ತಿಳಿದ ಸಂಗತಿಯಾಗಿದೆ. ಸೋಂಕು ತಡೆಗಟ್ಟಲು ಸಾಮಾಜಿಕ ಅಂತರ ಕಾಪಾಡುವುದು ಮುಖ್ಯವಾಗಿದೆ. ಕೊರೋನಾ ಸೊಂಕಿನ ಚೈನ್ ಮುರಿಯಬೇಕಾದರೆ ಸಾರ್ವಜನಿಕರು ಮನೆಯಲ್ಲಿರುವುದು ತುಂಬಾ ಅವಶ್ಯಕವಾಗಿದೆ. ಅನಗತ್ಯ ಮನೆಯಿಂದ ಹೊರಬರಬೇಡಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಜಿಲ್ಲೆಯಲ್ಲಿ ಕರ್ಫ್ಯೂ ಮಾದರಿಯ ವಾತಾವರಣವಿದ್ದರೂ, ಆಹಾರ ಪದಾರ್ಥಗಳು ಸೇರಿದಂತೆ ಅಗತ್ಯ ಸೇವೆ ಮತ್ತು ವಸ್ತುಗಳಿಗೆ ತೊಂದರೆಯಿಲ್ಲ. ಮನೆ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಸ್ವಚ್ಛತೆ ಕಾಪಾಡುವುದು ಮತ್ತು ಆಗಾಗ ಕೈಗಳನ್ನು ಸ್ವಚ್ಛಗೊಳಿಸಿಕೊಳ್ಳಬೇಕು. ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ, ಜಿಲ್ಲಾಡಳಿತ ಮತ್ತು ಸರ್ಕಾರ ನೀಡುವ ಸೂಚನೆಗಳನ್ನು ತಪ್ಪದೆ ಪಾಲಿಸುವ ಮೂಲಕ ಮಾನವ ಸಮಾಜಕ್ಕೆ ಕಂಟಕವಾಗಿರುವ ಕೊರೋನಾ ಸೋಂಕನ್ನು ತೊಲಗಿಸೋಣ ಎಂದು ಸ್ವಾಮೀಜಿಗಳು ಕರೆ ನೀಡಿದರು.

ಸ್ವಾಮೀಜಿಯನ್ನು ಕಂಡ ಬಡಾವಣೆಯಲ್ಲಿನ ಜನ ಪೂಜ್ಯರ ಹತ್ತಿರ ಬರಲು ಪ್ರಯತ್ನಿಸಿದರು. ಆದರೆ ಪೂಜ್ಯರು, ಮನೆಯಿಂದ ಯಾರೂ ಹೊರಗೆ ಬರಬೇಡಿ ಎಂದು ವಿನಂತಿಸಿ ಎಲ್ಲರು ನಿಮ್ಮ ಮನೆ-ಕಿಂಡಿಗಳಿಂದಲೇ ನಿಂತು ಕೊರೋನಾ ಸೊಂಕಿನ ಈ ಜನಜಾಗೃತಿ ಅಭಿಯಾನದ ಮಾಹಿತಿಯನ್ನು ಕೇಳಬೇಕು ಎಂದು ಹೇಳುವ ಮೂಲಕ ಸ್ವಯಂ ಸಾಮಾಜಿಕ ಅಂತರ ಕಾಪಾಡಿಕೊಂಡರು.

ಜಾಗೃತಿ ಅಭಿಯಾನದ ಉಸ್ತುವಾರಿ ವಹಿಸಿಕೊಂಡಿರುವ ಸೇಡಂ ಪೊಲೀಸ್ ಠಾಣೆಯ ಸಿಪಿಐ ರಾಜಶೇಖರ ಹಳಿಗೋದಿ ಮಾತನಾಡಿ ಕೊರೋನಾ ಸೋಂಕಿನ ಬಗ್ಗೆ ಜಾಗೃತಿ ಮೂಡಿಸಲು ಪೂಜ್ಯರನ್ನು ಕೇಳಿಕೊಂಡಿದ್ದೇವು. ಅದರಂತೆ ಗುರುವಾರ ಬೆಳಿಗ್ಗೆ ಶ್ರೀ ಸದಾಶಿವ ಸ್ವಾಮೀಜಿಗಳ ನೇತೃತ್ವದಲ್ಲಿ ತುಂಬಾ ಇಕ್ಕಟ್ಟಾದ ಬಡಾವಣೆಯಿರುವ ಸೇಡಂ ಹಳೇ ಪಟ್ಟಣದ ಶೇ.70ರಷ್ಟು ಬಡಾವಣೆಯಲ್ಲಿ ಟಂಟಂ ವಾಹನದ ಮೂಲಕ ಸಂಚರಿಸಿ ಕೊರೋನಾ ಸೋಂಕು ಹರಡುವಿಕೆ ಮತ್ತು ತಡೆಗಟ್ಟುವಿಕೆ ಕ್ರಮಗಳ ಕುರಿತು ಮಾಹಿತಿ ನೀಡಲಾಯಿತು. ಸಾಯಂಕಾಲ ಮೌಲ್ವಿಯವರ ಸಹಾಯ ಪಡೆದು ಅಲ್ಪಸಂಖ್ಯಾತ ಜನರು ವಾಸಿಸುವ ಬಡಾವಣೆಗಳಲ್ಲಿ ಜಾಗೃತಿ ಮೂಡಿಸಲಾಗುವುದು ಎಂದರು.

ಇದಲ್ಲದೆ ಮುಂದಿನ ದಿನದಲ್ಲಿ ಆಯಾ ಧರ್ಮಗಳ ಪೂಜ್ಯರನ್ನು ಮತ್ತು ಗ್ರಾಮದ ಹಿರಿಯ ಮುಖಂಡರಿಂದ ಪಟ್ಟಣ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಜನಜಾಗೃತಿ ಮೂಡಿಸಲು ಯೋಜನೆ ಹಾಕಿಕೊಳ್ಳಲಾಗಿದೆ. ಪಟ್ಟಣದ ಔಷಧಿ, ತರಕಾರಿ ಮತ್ತು ಕಿರಾಣಿ ಅಂಗಡಿಗಳ ಮುಂದೆ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಚೌಕಾಕಾರದ ಬಾಕ್ಸ್ ಹಾಕಲಾಗಿದ್ದು, ಇದು ಎಲ್ಲರ ಮೆಚ್ಚುಗೆಗೆ ಕಾರಣವಾಗಿದೆ. ಪೊಲೀಸ್ ಇಲಾಖೆಯಿಂದ ಈ ಕುರಿತು ನಿರಂತರ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ಪಟ್ಟಣದ ಭದ್ರತೆ ಜೊತೆಗೆ ಜನರಲ್ಲಿ ಜಾಗೃತಿ ಮೂಡಿಸುವ ಈ ಕಾರ್ಯಕ್ಕೆ ಪಿ.ಎಸ್.ಐ.ಗಳಾದ  ಸುಶೀಲ್ ಕುಮಾರ್, ಅಯ್ಯಪ್ಪ ಸೇರಿದಂತೆ ಪೊಲೀಸ್ ಇಲಾಖೆಯ ಸಿಬ್ಬಂದಿಗಳ ಅವಿರತ ಶ್ರಮ ಅಡಗಿದೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ