NEWSನಮ್ಮಜಿಲ್ಲೆ

ಕೋವಿಡ್ ನಿಯಂತ್ರಣಕ್ಕೆ ಪ್ಲಾಸ್ಮಾ ಥೆರಪಿ

ಗುಣಮುಖರಾಗುವವರ ಸಂಖ್ಯೆಯು ಏರಿಕೆ l ಆರೋಗ್ಯ ಸಚಿವ ಶ್ರೀರಾಮುಲು ಹೇಳಿಕೆ

ವಿಜಯಪಥ ಸಮಗ್ರ ಸುದ್ದಿ

ಹಾಸನ: ರಾಜ್ಯದಲ್ಲಿ ಪರಿಕ್ಷಾರ್ಥವಾಗಿ ಕೋವಿಡ್-19 ಚಿಕಿತ್ಸೆಗೆ ಪ್ಲಾಸ್ಮಾ ಥೆರಪಿ ಪ್ರಾರಂಭಿಸಿದ್ದು, ಇದರ ಯಶಸ್ವಿಯನ್ನು ಗಮನಿಸಿ ಮುಂದಿನ ದಿನಗಳಲ್ಲಿ ಅದರ ಬಳಕೆಯ ಹೆಚ್ಚಳದ ಬಗ್ಗೆ ನಿರ್ಧರಿಸಲಾಗುವುದು ಎಂದು ಆರೊಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶ್ರೀರಾಮುಲು ತಿಳಿಸಿದ್ದಾರೆ.

ಹಾಸನದಲ್ಲಿ ಸಭೆ ಮುಗಿದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ರಾಜ್ಯದಲ್ಲಿ 589 ಕೊರೊನಾ ಸೋಂಕಿತರಿದ್ದು ಅದರಲ್ಲಿ 251 ಜನರು ಈಗಾಗಲೇ ಗುಣಮುಖರಾಗಿದ್ದಾರೆ. ದಿನೇ ದಿನೇ ಸೋಂಕಿನಿಂದ ಗುಣಮುಖರಾಗುವವರ ಸಂಖ್ಯೆಯು ಏರಿಕೆಯಾಗುತ್ತಿದ್ದು ತಜ್ಞರ ಸಲಹೆ ಮೇರೆಗೆ ಪ್ಲಾಸ್ಮಾ ಥೆರಪಿಯ ಪ್ರಯೋಗ ನಡೆಯುತ್ತಿದೆ ಎಂದರು.

ಕೊರೊನಾ ವಿರುದ್ಧ ಹೋರಾಟ ಮಾಡುತ್ತಿರುವ ಸೇವಕರಾದ ಪೊಲೀಸ್, ವೈದ್ಯರು ಮತ್ತು ಹೋಂಗಾರ್ಡ್ ಮತ್ತಿತರರ ಮೇಲೆ ಹಲ್ಲೆ ಮಾಡುವವರಿಗೆ ಐದು ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದ ಅವರು ಇಂತಹ ಸಂದರ್ಭದಲ್ಲಿ ತುರ್ತು ಪರಿಸ್ಥಿತಿಯಲ್ಲಿರುವ ರೋಗಿಗಳಿಗೆ ಅವಶ್ಯಕವಾಗಿರುವ ರಕ್ತವನ್ನು ದಾನಿಗಳು ನೀಡುವ ಮೂಲಕ ಮಾನವೀಯತೆ ಮೆರೆಯಬೇಕು ಎಂದು ಮನವಿ ಮಾಡಿದರು.

ಇನ್ನುಕೊರೊನಾ ವಿರುದ್ಧ ಹೋರಾಡುವ ನಿಟ್ಟಿನಲ್ಲಿ ಮಾಧ್ಯಮದವರ ಶ್ರಮವು ಕೂಡ ಅಷ್ಟೇ ಇದ್ದು, ಇಂತಹ ಸಂದರ್ಭದಲ್ಲಿ ಅವರನ್ನು ಅಭಿನಂದಿಸಬೇಕಾಗುತ್ತದೆ ಎಂದರು. ತಾಲೂಕು ಆಸ್ಪತ್ರೆಗಳಲ್ಲಿ ವೆಂಟಿಲೇಟರ್ ಸಮಸ್ಯೆಯಿದೆ ಎಂದು ಶಾಸಕರುಗಳು ತಿಳಿಸಿದ್ದಾರೆ. ಆಸ್ಪತ್ರೆಗಳಿಗೆ ಬೇಕಾಗುವ ಎಲ್ಲಾ ಪರಿಕರಗಳನ್ನು ಒದಗಿಸುವಂತಹ ವ್ಯವಸ್ಥೆ ಮಾಡುವುದಾಗಿ ಸಚಿವರು ಭರವಸೆ ನೀಡಿದರು.

ಜಿಲ್ಲೆಗೆ ಹೊರಭಾಗದಿಂದ ಬಂದ 68 ಸಾವಿರಕ್ಕೂ ಹೆಚ್ಚು ಮಂದಿಯನ್ನು ಗೃಹಬಂಧನದಲ್ಲಿರುವಂತೆ ಮಾಡಿದ್ದೇವೆ. ಅದರ ಜೊತೆಗೆ ಹಾಸನವನ್ನು ಸೊಂಕು ಮುಕ್ತ ಜಿಲ್ಲೆಯಾಗಲು ಶ್ರಮಿಸಿರುವ ಜಿಲ್ಲಾಡಳಿತಕ್ಕೆ ತಾನು ಅಭಿನಂದಿಸುವುದಾಗಿ ಹೇಳಿದರು.

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ