ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಸ್ಥಾಪಿಸಲಾಗುತ್ತಿರುವ ಕೋವಿಡ್ 19 ಪರೀಕ್ಷಾ ಪ್ರಯೋಗಾಲಯಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಭೇಟಿ ನೀಡಿ ಪರಿಶೀಲಿಸಿದರು.
ಕೋವಿಡ್-19 ಸಂಬಂಧಿಸಿದಂತೆ ಪರೀಕ್ಷೆ ಮಾಡಲಾಗುತ್ತದೆ. ಮುಂದಿನ ದಿನಗಳಲ್ಲಿ ಯಾವುದೇ ರೀತಿಯ ಸಾಂಕ್ರಾಮಿಕ ರೋಗಗಳಿಗೆ ಸಂಬಂಧಿಸಿದಂತೆ ಪರೀಕ್ಷೆಗಳನ್ನು ಈ ಪ್ರಯೋಗಾಲಯದಲ್ಲಿ ಮಾಡಲಾಗುತ್ತದೆ ಎಂದು ಸಚಿವ ಸೋಮಣ್ಣ ತಿಳಿಸಿದರು.
ಮುಂಬರುವ ದಿನಗಳಲ್ಲಿ ಮೈಸೂರು, ಮಂಗಳೂರಿಗೆ ಪರೀಕ್ಷೆಗಾಗಿ ತೆರಳುವ ಅಗತ್ಯ ಇರುವುದಿಲ್ಲ. ಪ್ರಯೋಗಾಲಯವನ್ನು ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಅತ್ಯಾಧುನಿಕ ಮಟ್ಟದಲ್ಲಿ ಸ್ಥಾಪಿಸಲಾಗುತ್ತಿದೆ ಎಂದು ವಿವರಿಸಿದರು.
ಶಾಸಕರಾದ ಕೆ.ಜಿ.ಬೋಪಯ್ಯ, ಅಪ್ಪಚ್ಚು ರಂಜನ್, ಸುನೀಲ್ ಸುಬ್ರಮಣಿ, ಜಿ.ಪಂ ಅಧ್ಯಕ್ಷರಾದ ಬಿ.ಎ.ಹರೀಶ್, ಉಪಾಧ್ಯಕ್ಷರಾದ ಲೋಕೇಶ್ವರಿ ಗೋಪಾಲ್, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪನ್ನೇಕರ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ,ಸ್ನೇಹ, ಉಪ ವಿಭಾಗಾಧಿಕಾರಿ ಟಿ.ಜವರೇಗೌಡ, ನಾನಾ ಇಲಾಖೆಯ ಅಧಿಕಾರಿಗಳು ಡಿಎಚ್‍ಒ ಡಾ.ಕೆ ಮೋಹನ್, ವೈದ್ಯಕೀಯ ಕಾಲೇಜಿನ ನಿರ್ದೇಶಕರಾದ ಡಾ.ಕಾರ್ಯಪ್ಪ ಇತರರು ಇದ್ದರು.